ಟಿಕೆಟ್ ಇಲ್ಲದೇ ರೈಲಿನ ಮೂಲಕ ಮುಂಬೈನಿಂದ ಮಂಗಳೂರಿಗೆ ಸಾಗಿಸುತ್ತಿದ್ದ ದಾಖಲೆ ರಹಿತ ಎರಡು ಕೋಟಿ ಹಣವನ್ನು ಕಾರವಾರದ ರೈಲ್ವೆ ಪೊಲೀಸರು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನು ಓದಿ –ಪೋಷಕರೇ ನನ್ನನ್ನು ಹತ್ಯೆ ಮಾಡುತ್ತಾರೆ – ಶಾಲಿನಿ ಪೊಲೀಸರಿಗೆ ಬರೆದ ಪತ್ರ, ಆಡಿಯೋ ಲಭ್ಯ
ರಾಜಸ್ಥಾನ ಮೂಲದ ಮನೋಹರ್ ಸಿಂಗ್ ಅಲಿಯಾಸ್ ಚೇನ್ ಸಿಂಗ್ ಆರೋಪಿ. ಮಂಗಳೂರು ಎಕ್ಸ್‍ಪ್ರೆಸ್ ರೈಲಿನಲ್ಲಿ ಟಿಕೆಟ್ ಪಡೆಯದೆ ಪ್ರಯಾಣಿಸುತಿದ್ದ ಮನೋಹರ್ ಸಿಂಗ್‍ನನ್ನು ಕಾರವಾರದ ಬಳಿ ರೈಲ್ವೆ ಪೊಲೀಸರು ದಂಡ ವಿಧಿಸಿದ್ದರು.
ಈ ವೇಳೆ ಅನುಮಾನಗೊಂಡ ರೈಲ್ವೆ ಪೊಲೀಸರು ಈತನ ಬಳಿ ಇದ್ದ ಬ್ಯಾಗ್ ಅನ್ನು ತಪಾಸಣೆಗೆ ಒಳಪಡಿಸಿದಾಗ ಈತನ ಬಳಿ ಇದ್ದ ಬ್ಯಾಗಿನಲ್ಲಿ 100 ಬಂಡಲ್‍ನ ಎರಡು ಕೋಟಿ ಹಣ ಪತ್ತೆಯಾಗಿದೆ.
ಮನೋಹರ್ ಸಿಂಗ್ ಮುಂಬೈನ ಭರತ್ ಬಾಯ್ ಅಲಿಯಾಸ್ ಪಿಂಟೊ ಎಂಬುವರ ಬಳಿ 15 ಸಾವಿರಕ್ಕೆ ಕೆಲಸ ಮಾಡುತಿದ್ದ.
ಮನೋಹರ್ ಸಿಂಗ್ ತನ್ನ ಮಾಲೀಕನಿಂದ ಬ್ಯಾಗ್ ಪಡೆದು ಮಂಗಳೂರಿನಲ್ಲಿ ರಾಜು ಎಂಬವರಿಗೆ ತಲುಪಿಸಲು ಮುಂಬೈನಿಂದ ಮಂಗಳೂರಿಗೆ ಹೊರಟಿದ್ದಾಗಿ ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ರೈಲ್ವೆ ಪೊಲೀಸರು ಆರೋಪಿಯನ್ನು ಕಾರವಾರ ಗ್ರಾಮಾಂತರ ಠಾಣೆ ಪೊಲೀಸರ ವಶಕ್ಕೆ ನೀಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು