December 19, 2024

Newsnap Kannada

The World at your finger tips!

WhatsApp Image 2022 06 09 at 5.42.59 PM

Mandya: Three burglars attempt to steal transport bus

ಮಂಡ್ಯ : ಸಾರಿಗೆ ಬಸ್‌ನಲ್ಲಿ ಕಳ್ಳತನಕ್ಕೆ ಯತ್ನ – ಖತರ್ನಾಕ್ ಮೂವರು ಕಳ್ಳಿಯರು ಅರೆಸ್ಟ್

Spread the love

ಶ್ರೀರಂಗಪಟ್ಟಣದಲ್ಲಿ ಸಾರಿಗೆ ಬಸ್‌ನಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ಮೂವರು ಖತರ್ನಾಕ್ ಕಳ್ಳಿಯರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನು ಓದಿ –ಇನ್ ಸ್ಟಾದಲ್ಲಿ ನಿಂದಿಸಿದವನ ವಿರುದ್ದ ಪೋಲಿಸರಿಗೆ ದೂರು ನೀಡಿದ ನಟಿ ರಮ್ಯಾ

ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್‌ನಲ್ಲಿ ಮೂವರು ಕಳ್ಳಿಯರು ಪ್ರಯಾಣಿಕರ ಬಳಿ ಇದ್ದಂತಹ ಚಿನ್ನಾಭರಣವನ್ನು ಕಳ್ಳತನ ಮಾಡಲು ಯತ್ನಿಸಿದ್ದಾರೆ.

ಇದನ್ನು ಗಮನಿಸಿದ ಪ್ರಯಾಣಿಕರೊಬ್ಬರು ತಕ್ಷಣ ಪೊಲೀಸರಿಗೆ ಕರೆ ಮಾಡಿ ವಿಷಯವನ್ನು ತಿಳಿಸಿದ್ದಾರೆ.

ಪೊಲೀಸರು ಸಿನಿಮೀಯಾ ರೀತಿಯಲ್ಲಿ ಬಸ್ಸನ್ನು ಅಡ್ಡಗಟ್ಟಿ ಶ್ರೀರಂಗಪಟ್ಟಣದ ಪಶ್ಚಿಮವಾಹಿನಿ ಬಳಿ ಆರೋಪಿಗಳನ್ನು ಬಂಧಿಸಿ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ.

ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Copyright © All rights reserved Newsnap | Newsever by AF themes.
error: Content is protected !!