ಕೂಡಲಸಂಗಮ ಪಂಚಮ ಸಾಲಿ ಶ್ರೀ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಲು ಆಗ್ರಹಿಸಿ ಜೂನ್ 27 ರಂದು ಸಿಎಂ ಬಸವರಾಜ ಬೊಮ್ಮಾಯಿ ನಿವಾಸದ ಬಳಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಸಂಬಂಧ ಮಾಹಿತಿ ನೀಡಿದ ಸ್ವಾಮೀಜಿಗಳು,ಜೂನ್ 27 ರಂದು ಹಾವೇರಿ ಜಿಲ್ಲೆಯ ಶಿಗ್ಗಾಂವಿಯ ಸಿಎಂ ನಿವಾಸದ ಬಳಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಲು ಆಗ್ರಹಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಸಿಎಂ ಬೊಮ್ಮಾಯಿ ಅವರು ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡುವುದಾಗಿ ಹೇಳಿದ ಭರವಸೆ ಹುಸಿಯಾಗಿದೆ.ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿಗಾಗಿ ನಿರಂತರ ಹೋರಾಟ ನಡೆಸಿದರೂ ಪ್ರಯೋಜನವಾಗುತ್ತಿಲ್ಲ.ಹೀಗಾಗಿ ಶಿಗ್ಗಾಂವಿಯಲ್ಲಿರುವ ಅವರ ನಿವಾಸದ ಬಳಿ ಧರಣಿ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
More Stories
BCCI ನೂತನ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ಆಯ್ಕೆ
ಹುಟ್ಟುಹಬ್ಬದ ದಿನವೇ ಬಾಲಕನ ದುರ್ಮರಣ
KPSC ಪರೀಕ್ಷೆಗಳಲ್ಲಿ ಕನ್ನಡ ದೋಷಗಳ ವಿವಾದ – ಮರುಪರೀಕ್ಷೆಗೆ ಪ್ರಬಲ ಒತ್ತಾಯ