ರಾಷ್ಟ್ರೀಯ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಗ್ಯ ದಿಢೀರ್ ಹದಗೆಟ್ಟಿದೆ. ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಮಾಹಿತಿಯನ್ನು ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ಟ್ವೀಟ್ ಮೂಲಕ ತಿಳಿಸಿ, ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೋವಿಡ್ ಸಂಬಂಧಿತ ಸಮಸ್ಯೆಗಳಿಂದಾಗಿ ಭಾನುವಾರ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನು ಓದಿ – ಮೈಸೂರಿನಲ್ಲಿ ಯೋಗ ರಾಜಕಾರಣ – ಪ್ರತಾಪ್ ಸಿಂಹ, ಎಸ್.ಎ.ರಾಮದಾಸ್ ನಡುವೆ ಜಟಾಪಟಿ
ಸೋನಿಯಾ ಆರೋಗ್ಯ ಸ್ಥಿರವಾಗಿದೆ. ಹೆಚ್ಚಿನ ನಿಗಾಕ್ಕಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸೋನಿಯಾ ಗಾಂಧಿ ಕೋವಿಡ್ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆದರೆ ಭಯ ಪಡುವ ಅಗತ್ಯವಿಲ್ಲ. ಮುಂಜಾಗ್ರತಾ ಕ್ರಮವಾಗಿ ಅವರನ್ನು ಆಸ್ಪತ್ರೆಯಲ್ಲಿ ನಿಗಾ ಘಟಕದಲ್ಲಿ ಇಡಲಾಗಿದೆ ಎಂದು ಹೇಳಿದರು.
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಮೈಸೂರಿನಲ್ಲಿ ಯೋಗ ರಾಜಕಾರಣ – ಪ್ರತಾಪ್ ಸಿಂಹ, ಎಸ್.ಎ.ರಾಮದಾಸ್ ನಡುವೆ ಜಟಾಪಟಿ
ಮೈಸೂರಿನಲ್ಲಿ ಜೂನ್ 21ರಂದು ನಡೆಯಲಿರುವ ಯೋಗ ದಿನಾಚರಣೆಯೂ ಕೂಡ ರಾಜಕಾರಣ ಪೈಪೋಟಿಯಲ್ಲಿ ನಡೆಯುತ್ತಿದೆ. ಮೈಲೇಜ್‍ಗಾಗಿ ಸಂಸದ ಪ್ರತಾಪ್ ಸಿಂಹ, ಶಾಸಕ ಎಸ್.ಎ.ರಾಮದಾಸ್ ನಡುವೆ ತಿಕ್ಕಾಟ ನಡೆದಿದೆ.
ಮೈಸೂರಿನ ಅರಮನೆ ಆವರಣದಲ್ಲಿ ಯೋಗ ದಿನಾಚರಣೆಯ ಮಾಹಿತಿಯನ್ನು ಮಾಧ್ಯಮಗಳ ನೀಡುವ ಮುನ್ನವೇ ಇಬ್ಬರು ಬಿಜೆಪಿ ನಾಯಕರ ಜಟಾಪಟಿ ನಡೆದಿದೆ.
ಪ್ರಧಾನಿಯೊಂದಿಗೆ ಪಾಲ್ಗೊಳ್ಳುವ ಯೋಗಪಟುಗಳ ಸಂಖ್ಯೆ ವಿಚಾರದಲ್ಲಿ ದ್ವಂದ್ವವಾಗಿದೆ ಕಾರ್ಯಕ್ರಮದಲ್ಲಿ 7 ರಿಂದ 8 ಸಾವಿರ ಜನರು ಭಾಗವಹಿಸುತ್ತಾರೆ ಎಂದ ಪ್ರತಾಪ್ ಸಿಂಹ ಹೇಳಿದರು ಆಗ ಮಧ್ಯ ಪ್ರವೇಶಿಸಿದ ರಾಮದಾಸ್ ಈಗಾಗಲೇ 13 ಸಾವಿರ ನೋಂದಣಿ ಆಗಿದೆ ಎಂದರು.
ಈ ವೇಳೆ ಕೋಪಗೊಂಡ ಪ್ರತಾಪ್ ಸಿಂಹ ಅವರು ನಾನು ಮಾತನಾಡುತ್ತಿದ್ದೇನೆ, ರಾಮದಾಸ್‍ಜೀ ಸುಮ್ಮನಿರಬೇಕು ಎಂದು ಸಿಡಿಮಿಡಿಗೊಂಡರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಾಮದಾಸ್ ಅವರು, ಪ್ರತಾಪ್ ಅವರಿಗೆ ಸರಿಯಾದ ಮಾಹಿತಿ ಇರಲಿಲ್ಲ. ಹಾಗಾಗಿ ವಿವರಣೆ ನೀಡಲು ಯತ್ನಿಸಿದೆ. ನಮ್ಮ ನಡುವೆ ಯಾವುದೇ ಮನಸ್ತಾಪ ಇಲ್ಲ ಎಂದು ಸ್ಪಷ್ಟನೆ ನೀಡಿದರು.
More Stories
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
ಎಲ್ಲಾ ಶಾಸಕರ ಕ್ಷೇತ್ರಗಳಿಗೆ ₹2,000 ಕೋಟಿ ಅನುದಾನ: ಸಿಎಂ ಸಿದ್ದರಾಮಯ್ಯ ಘೋಷಣೆ