ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ವಿದೇಶಿ ಮಹಿಳೆಯನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.
ಫಾತಿಮಾ ಓಮರೀ ಬಂಧಿತ ಆರೋಪಿ. ಕಮನಹಳ್ಳಿ ಬಳಿ ಇರುವ ಕಾಫಿ ಡೇ ಬಳಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಳು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಏಕಾಏಕಿ ದಾಳಿ ನಡೆಸಿದ್ದಾರೆ. ಇದನ್ನು ಓದಿ – UP ಯಲ್ಲಿ ಬುಲ್ಡೋಜರ್ ಕಾರ್ಯಾಚರಣೆಗೆ ಮಧ್ಯಂತರ ತಡೆ ನೀಡದ ಸುಪ್ರೀಂ
ಬಂಧಿತ ಮಹಿಳೆಯಿಂದ 1.5 ಲಕ್ಷ ಬೆಲೆ ಬಾಳುವ ಎಂಡಿ ಕ್ರಿಸ್ಟಲ್ ಮಾದಕ ವಸ್ತು ಹಾಗೂ ಒಂದು ಐ ಪೋನ್ನನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿ ಆಫ್ರಿಕಾದ ತಾಂಜೇನಿಯಾ ದೇಶದಿಂದ 2018ರಲ್ಲಿ ಟೂರಿಸ್ಟ್ ವೀಸಾದ ಅಡಿಯಲ್ಲಿ ಭಾರತಕ್ಕೆ ಬಂದಿದ್ದಳು. ಮೀಸಾ ಅವಧಿ ಮುಗಿದಿದ್ದರು ಕೂಡ ಅಕ್ರಮವಾಗಿ ಬೆಂಗಳೂರಿನಲ್ಲಿ ವಾಸವಾಗಿದ್ದಳು. ಮಾದಕ ವಸ್ತುಗಳನ್ನು ಮಾರಾಟ ಮಾಡಿ ಹೈ-ಫೈ ಜೀವನವನ್ನು ನಡೆಸುತ್ತಿದ್ದಳು. ಈಕೆಯ ಗಂಡನು ಮಾದಕ ದಂಧೆ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದಾನೆ. ಗಂಡನನ್ನು ಜೈಲಿನಿಂದ ಹೊರತರಲು ಮಾದಕ ವಸ್ತುವನ್ನು ಮಾರಾಟ ಮಾಡಲು ಮುಂದಾಗಿದ್ದಾಳೆ ಗಂಡ ಕೆಲ್ವಿನ್ ಜೋಸೆಫ್ನನ್ನ ಸಂಪಿಗೆಹಳ್ಳಿ ಪೊಲೀಸರು ಒಂದು ವರ್ಷದ ಹಿಂದೆ ಬಂಧಿಸಿದ್ದರು. ಇದನ್ನು ಓದಿ – ವಿಧಾನಪರಿಷತ್ ಸದಸ್ಯರಾಗಿ 7 ಸದಸ್ಯರು ಪ್ರಮಾಣವಚನ ಸ್ವೀಕಾರ
ಗಂಡನ ಬಂಧನದ ಬಳಿಕ ಆತನ ದಂಧೆ ಮುಂದುವರೆಸಿದ್ದಳು. ಸದ್ಯ ಬಂಧಿತ ಆರೋಪಿಯ ಮೇಲೆ ಬಾಣಸವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನು ಓದಿ – ಮಧು ಜಿ ಮಾದೇಗೌಡರಿಗೆ ಜಯ:ಮೈಸೂರು ವಿಭಾಗದಲ್ಲೇ ಕಾಂಗ್ರೆಸ್ ನಲ್ಲಿ ಹೊಸ ಹುರುಪು- ಹೊಸ ಭರವಸೆ
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಡ್ರಗ್ಸ್
More Stories
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ