ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಸಹೋದರ ಅಗ್ರಸೇನ್ ಗೆಹ್ಲೋಟ್ ಅವರ ಮನೆ ಮೇಲೆ ಶುಕ್ರವಾರ CBI ಭ್ರಷ್ಟಾಚಾರ ಆರೋಪದ ಮೇಲೆ ದಾಳಿ ನಡೆಸಿದೆ. ತನಿಖಾ ಸಂಸ್ಥೆ ತಂಡವು ಅಗ್ರಸೇನ್ ಗೆಹ್ಲೋಟ್ ಅವರಿಗೆ ಸಂಬಂಧಿಸಿದ ಕಚೇರಿ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.
ರಸಗೊಬ್ಬರ ರಫ್ತು ಪ್ರಕರಣದ ಆರೋಪ ಹೊತ್ತಿರುವ ಅಗ್ರಸೇನ್ ಗೆಹ್ಲೋಟ್ ಈಗಾಗಲೇ ಜಾರಿ ನಿರ್ದೇಶನಾಲಯ (ED) ವಿಚಾರಣೆಗೆ ಒಳಪಟ್ಟಿದ್ದಾರೆ. 2007 ಮತ್ತು 2009ರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗೊಬ್ಬರವನ್ನು ಅಕ್ರಮವಾಗಿ ರಫ್ತು ಮಾಡಲಾಗಿದೆ ಎಂದು ಇಡಿ ಆರೋಪಿಸಿತ್ತು.
ಇದನ್ನು ಓದಿ –ಜೂನ್ 19ರಂದು ಮಧ್ಯರಾತ್ರಿ ತನಕವೂ ನಮ್ಮ ಮೆಟ್ರೋ ಸಂಚಾರ : 50 ರು ಟಿಕೆಟ್
ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಅಶೋಕ್ ಗೆಹ್ಲೋಟ್ ಮುಂಚೂಣಿಯಲ್ಲಿದ್ದರು. ಇದು ಮೋದಿ ಸರ್ಕಾರದ ಲಜ್ಜೆಗೆಟ್ಟ ಪ್ರತಿಕ್ರಿಯೆಯಾಗಿದೆ. ನಾವು ಮೌನವಾಗಿರುವುದಿಲ್ಲ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು