ಫೇಸ್ಬುಕ್ ಮೂಲಕ ಪರಿಚಯವಾದ ವಿದೇಶಿ ಸುಂದರ ಬಾಲೆಯೊಬ್ಬಳು ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ 35 ಲಕ್ಷ ರು ಉಂಡೆನಾಮ ಹಾಕಿದ್ದಾಳೆ
ಇದನ್ನು ಓದಿ –ಅಗ್ನಿಪಥ್ ಸೇನಾ ನೇಮಕಾತಿ ಹೊಸ ಯೋಜನೆ ಜಾರಿಗೆ ವಿರೋಧ ಬೇಡ – ಎಸ್.ಎಂ. ಕೃಷ್ಣ
ಬೆಂಗಳೂರಿನ ನಿವಾಸಿ ವಿನ್ಸೆಂಟ್ (48) ಎಂಬುವರು ಬಜಾಜ್ ಫೈನಾನ್ಸ್ ಯೂನಿಟ್ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿರುವ ಅವರಿಗೆ ಫೇಸ್ಬುಕ್ನಲ್ಲಿ ಪರಿಚಯವಾದ ನ್ಯಾನ್ಸಿ ವಿಲಿಯಂ ಎಂಬ ವಿದೇಶಿ ಮಹಿಳೆ 35 ಲಕ್ಷ ಪಡೆದು ವಂಚನೆ ಮಾಡಿದ್ದಾಳೆ.
ನ್ಯಾನ್ಸಿ ವಿಲಿಯಂ ಫೇಸ್ಬುಕ್ನಲ್ಲಿ ಮೊದಲಿಗೆ ವಿನ್ಸೆಂಟ್ಗೆ ಫ್ರೆಂಡ್ ರಿಕ್ವೆಸ್ಟ್ ಕಳಿಸಿ, ತಾನು ಇಂಗ್ಲೆಂಡಿನವಳು ಎಂದು ಪರಿಚಯ ಮಾಡಿಕೊಂಡು ಸ್ನೇಹ ಬೆಳೆಸುತ್ತಾಳೆ. ಈ ಸ್ನೇಹ ಫೋನ್ ನಂಬರ್ ಎಕ್ಸ್ಚೇಂಜ್ ಮಾಡಿಕೊಳ್ಳುವಲ್ಲಿವರೆಗೂ ಹೋಗುತ್ತೆ. ನಂತರ ವಾಟ್ಸ್ಆ್ಯಪ್ನಲ್ಲಿ ಚಾಟಿಂಗ್, ಕಾಲಿಂಗ್ ಎಲ್ಲಾ ನಡೆಯುತ್ತೆ. ಹೀಗೆ ಬೆಳೆದ ಸ್ನೇಹ ಮತ್ತಷ್ಟು ಗಾಢವಾಗಿ ಒಟ್ಟಿಗೆ ಸೇರಿ ಬ್ಯುಸಿನೆಸ್ ಆರಂಭಿಸುವವರೆಗೂ ಹೋಗುತ್ತೆ.
ಇಂಗ್ಲೆಂಡ್ನಿಂದ ಭಾರತಕ್ಕೆ ಬಂದು ಜ್ಯುವೆಲ್ಲರಿ ಬ್ಯಸಿನೆಸ್ ಮಾಡೋದಾಗಿ ನಂಬಿಸಿ, ಅದಕ್ಕಾಗಿ ಹಣ ಹೂಡಿಕೆ ಮಾಡುವಂತೆ ಕೇಳುತ್ತಾಳೆ.
ವಿದೇಶದಲ್ಲಿ ಜ್ಯುವೆಲರಿ ಡೀಲರ್ ಆಗಿರುವ ನ್ಯಾನ್ಸಿ ಮಾತಿಗೆ ಮರುಳಾದ ವಿನ್ಸೆಂಟ್ ಹಂತ ಹಂತವಾಗಿ 35 ಲಕ್ಷ ಕೊಡುತ್ತಾನೆ. ಆದರೆ ನ್ಯಾನ್ಸಿ ಮಾತ್ರ ಬೆಂಗಳೂರಿಗೆ ಹೋಗಲಿ, ಭಾರತಕ್ಕೂ ಬರೋದಿಲ್ಲ. ಕಡೆಗೆ ಫೇಸ್ ಬುಕ್ ಖಾತೆ ಡಿಲೀಟ್ ಮಾಡಿ ನಾಪತ್ತೆಯಾಗ್ತಾಳೆ.
ಮಹಿಳೆಯ ಬಣ್ಣದ ಮಾತಿಗೆ ಮರುಳಾಗಿದ್ದ ವಿನ್ಸೆಂಟ್ ಈಗ ವಂಚಕಿಯ ವಿರುದ್ಧ ಪೂರ್ವ ವಿಭಾಗದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ.ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೂರ್ವ ವಿಭಾಗದ ಸೆನ್ ಪೊಲೀಸರು ಆರೋಪಿ ನ್ಯಾನ್ಸಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ