21 ವರ್ಷದ ಅರ್ಚಕನ ಜೊತೆ ಪರಾರಿಯಾಗಿದ್ದ ವಿವಾಹಿತ ಮಹಿಳೆ ಕಾಡಂಚಿನಲ್ಲಿ ಪತ್ತೆಯಾಗಿದ್ದಾಳೆ.ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೊಲ್ಲುಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅರ್ಚಕನ ಜೊತೆ 10 ದಿನಗಳ ಹಿಂದೆ ಪರಾರಿಯಾದ ಎರಡು ಮಕ್ಕಳ ತಾಯಿ ಅತಂತ್ರವಾಗಿದ್ದಾಳೆ. ಬಾಳು ಕೊಡುವುದಾಗಿ ನಂಬಿಸಿ ಕರೆದೊಯ್ದ ಯುವ ಅರ್ಚಕ ಆಕೆಯೊಂದಿಗೆ ಹತ್ತು ದಿನ ಒಡನಾಟ ಬೆಳೆಸಿ ನಂತರ ಕಾಡಂಚಿನಲ್ಲಿ ಬಿಟ್ಟು ಪರಾರಿಯಾಗಿದ್ದಾನೆ.
ಇಂದು ಬೆಳಿಗ್ಗೆ ಗ್ರಾಮಸ್ಥರ ಕಣ್ಣಿಗೆ ಬಿದ್ದ ಮಹಿಳೆ ಅರ್ಚಕನ ಜೊತೆ ಇರಬೇಕೆಂದು ಪಟ್ಟು ಹಿಡಿದಿದ್ದಾಳೆ. ಆದರೆ ಪೂಜಾರಿ ಕೈ ಕೊಟ್ಟು ಪರಾರಿಯಾಗಿದ್ದಾನೆ. 35 ವರ್ಷದ ಗೃಹಿಣಿ ಜೂನ್ 12 ರಂದು ತಂದೆ ಮನೆಯಿಂದ ನಾಪತ್ತೆಯಾಗಿದ್ದಳು.ಇಂದು ನಿರ್ಜನ ಪ್ರದೇಶದಲ್ಲಿ ಗೃಹಿಣಿ ಕಾಣಿಸಿಕೊಂಡಿದ್ದಾಳೆ.
ಕೌಟುಂಬಿಕ ಸಮಸ್ಯೆಗೆ ಪರಿಹಾರ ಕೇಳಲು ಮಹದೇಶ್ವರನ ದೇವಸ್ಥಾನಕ್ಕೆ ಬಂದಾಗ ಅರ್ಚಕ ಸಂತೋಷ್ ಈಕೆಯ ಜೊತೆ ಸಲುಗೆ ಬೆಳೆಸಿದ್ದಾನೆ. ನಿನಗೆ ಹೊಸ ಬಾಳು ಕೊಡುತ್ತೇನೆಂದು ನಂಬಿಸಿದ ಸಂತೋಷ್ ಗೃಹಿಣಿಯನ್ನು ಕರೆದು ಕೊಂಡು ಹತ್ತು ದಿನಗಳ ಕಾಲ ಆಕೆಯೊಂದಿಗೆ ತಿರುಗಾಡಿ, ನಂತರ ಆತ್ಮಹತ್ಯೆ ನಾಟಕವಾಡಿ ಕಾಡಿಗೆ ಕರೆತಂದಿದ್ದಾನೆ. ಮಧ್ಯರಾತ್ರಿಯಲ್ಲಿ ಇದ್ದಕ್ಕಿದ್ದಂತೆ ಸಂತೋಷ್ ನಾಪತ್ತೆಯಾಗಿದ್ದಾನೆ.
ಇದನ್ನು ಓದಿ – ಅಗ್ನಿಪಥ್ ಸೇನಾ ನೇಮಕಾತಿ ಹೊಸ ಯೋಜನೆ ಜಾರಿಗೆ ವಿರೋಧ ಬೇಡ – ಎಸ್.ಎಂ. ಕೃಷ್ಣ
ನಿನ್ನೆ ರಾತ್ರಿ ಪೂರ್ತಿ ಒಂಟಿಯಾಗಿ ಕಾಡಿನಲ್ಲಿ ಕಾಲ ಕಳೆದ ಗೃಹಿಣಿ ಮುಂಜಾನೆ ಸ್ಥಳೀಯರ ಕಣ್ಣಿಗೆ ಬಿದ್ದಿದ್ದಾಳೆ. ಗೃಹಿಣಿಯ ಕಥೆ ಕೇಳಿದ ಗ್ರಾಮಸ್ಥರು ಹುಲ್ಲಹಳ್ಳಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಗೃಹಿಣಿಗೆ ರಕ್ಷಣೆ ನೀಡಿದ್ದಾರೆ. ಬಾಳು ಕೊಡುವುದಾಗಿ ನಂಬಿಸಿ ಕರೆದೊಯ್ದ ಪೂಜಾರಿ ಸಂತೋಷ್ ಇದೀಗ ನಾಪತ್ತೆಯಾಗಿದ್ದಾನೆ. ಗಂಡನ ಮನೆಯೂ ಇಲ್ಲ, ಬಾಳು ಕೊಡುವುದಾಗಿ ನಂಬಿಸಿದ ಸಂತೋಷ್ ಸಹ ಇಲ್ಲದೆ, ಗೃಹಿಣಿ ಅತಂತ್ರಕ್ಕೆ ಸಿಲುಕಿದ್ದಾಳೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – ಯುವತಿ ಸಜೀವ ದಹನ