ಮುಂದಿನ ವರ್ಷದಿಂದ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕಾಗಿ ನಡೆಸೋ ಕಾಮೆಡ್ ಕೆ ಪರೀಕ್ಷೆ ರದ್ಧು ಮಾಡಲು ಸರ್ಕಾರ ನಿರ್ಧರಿಸಿದೆ.
ಉನ್ನತ ಶಿಕ್ಷಣ ಸಚಿವರ ಈ ಹೇಳಿಕೆಗೆ, ಇದು ಏಕಪಕ್ಷೀಯ ನಿರ್ಧಾರ ಅಂತ ಕಾಮೆಡ್-ಕೆ ಕಾರ್ಯದರ್ಶಿ ಎಸ್. ಕುಮಾರ್ ವಿರೋಧಿಸಿದ್ದಾರೆ. ನಮಗೆ ಮಾಹಿತಿಯೇ ನೀಡದೆ ಹೇಗೆ ವಿಲೀನ ಮಾಡ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರದ್ದು ಮಾಡುವ ಬಗ್ಗೆ ನಮ್ಮ ಜೊತೆ ಯಾವುದೇ ಸಭೆ ನಡೆಸಿಲ್ಲ. ರಾಜ್ಯ ಸರ್ಕಾರ ತನ್ನ ನಿರ್ಧಾರದ ಬಗ್ಗೆ ಪುನರ್ ಪರಿಶೀಲಿಸಬೇಕು. ಇಲ್ಲದಿದ್ರೆ ನಾವು ಕೋರ್ಟ್ ಮೊರೆ ಹೋಗುತ್ತೇವೆ ಅಂತ ಎಚ್ಚರಿಸಿದೆ.
2004ರಲ್ಲಿ ಸಂಸ್ಥೆ ರಚನೆ ಆಗಿದ್ದು, ಪ್ರತಿ ವರ್ಷ 70 ಸಾವಿರ ಅಭ್ಯರ್ಥಿಗಳು ಕಾಮೆಡ್-ಕೆ ಪರೀಕ್ಷೆಗೆ ನೊಂದಣಿ ಮಾಡಿಕೊಳ್ತಿದ್ದಾರೆ. 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಮ್ಯಾನೇಜ್ಮೆಂಟ್ ಸೀಟ್ನ ಅಡಿಯಲ್ಲಿ ಇಂಜಿನಿಯರಿಂಗ್ ಕೋರ್ಸ್ ಪ್ರವೇಶ ಪಡೆಯುತ್ತಾರೆ. ಈ ಹಿನ್ನೆಲೆಯಲ್ಲಿ CET ಮೂಲಕ ದೇಶಾದ್ಯಂತ ಪರೀಕ್ಷೆಗಳನ್ನ ಸರ್ಕಾರ ಹೇಗೆ ನಡೆಸುತ್ತೆ? ಆದ್ದರಿಂದ ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಅವೈಜ್ಞಾನಿಕ ಅಂತ ಕಾಮೇಡ್ ಕೆ ಸಂಸ್ಥೆ ವಿರೋಧಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ