December 23, 2024

Newsnap Kannada

The World at your finger tips!

politics, maharstra

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ರಾಜೀನಾಮೆ ಪ್ರಕಟ

Spread the love

ಸುಪ್ರೀಂ ಕೋರ್ಟ್ ನಾಳೆ ರಾಜ್ಯಪಾಲರ ಸೂಚನೆಯಂತೆ ವಿಶ್ವಾಸ ಮತ ಯಾಚನೆಗೆ ಸೂಚಿಸಿದ ಬೆನ್ನಲ್ಲೇ, ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಪ್ರಕಟಿಸಿದರು.

ಇಂದು ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದ ಉದ್ದವ್ ಅವರು, ಕಳೆದ ಎರಡೂವರೆ ವರ್ಷಗಳ ಕಾಲ ನನಗೆ ಸಹಕರಿಸಿದಂತ ಎಲ್ಲರಿಗೂ ಧನ್ಯವಾದಗಳು ಎಂದಿದ್ದಾರೆ.

ನಾಳೆ ವಿಶ್ವಾಸಮತ ಯಾಚನೆಗೆ ಮುನ್ನವೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಇದನ್ನು ಓದಿ – ನಾಳೆಯೇ ಉದ್ಧವ್​​ಗೆ ಬಹುಮತ ಸಾಬೀತಿಗೆ ‘ಸುಪ್ರೀಂ’ ನಿರ್ದೇಶನ

ನಾಳೆ (ಜೂನ್ 30 ರಂದು )ಸದನದಲ್ಲಿ ಬಹುಮತ ಸಾಬೀತುಪಡಿಸುವಂತೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಸಿಎಂ ಉದ್ಧವ್ ಠಾಕ್ರೆ ಅವರಿಗೆ ನೀಡಿದ್ದ ನಿರ್ದೇಶನವನ್ನು ಪ್ರಶ್ನಿಸಿ ಶಿವಸೇನೆಯ ಮುಖ್ಯ ಸಚೇತಕ ಸುನಿಲ್ ಪ್ರಭು ಸಲ್ಲಿಸಿದ್ದ ಅರ್ಜಿಯ ಆದೇಶವನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದ್ದ ತನ್ನ ತೀರ್ಪು ಪ್ರಕಟಿಸಿದೆ. ಇದೀಗ ನಾಳೆ ಸದನದಲ್ಲಿ ವಿಶ್ವಾಸಮತ ಯಾಚಿಸುವಂತೆ ಆದೇಶಿಸಿತ್ತು.

ಉದ್ಧವ್ ಠಾಕ್ರೆ ನೇತೃತ್ವದ ಸಮ್ಮಿಶ್ರ ಸರ್ಕಾರದ ಅಳಿವು ಉಳಿವಿನ ಬಿಕ್ಕಟ್ಟಿಗೆ ಕಾರಣವಾದ ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರ ಬಂಡಾಯದ ನಂತರ ಮಹಾರಾಷ್ಟ್ರದ ರಾಜಕೀಯದಲ್ಲಿ ಸಿಲುಕಿರುವ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಸದನದ ಏಕೈಕ ಮಾರ್ಗವೆಂದರೆ ಸದನದ ಏಕೈಕ ಮಾರ್ಗ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿತ್ತು.

ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಗುರುವಾರ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಮುಖ್ಯಮಂತ್ರಿಗೆ ಸೂಚಿಸಿದ ಆದೇಶವನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ವಾದ-ಪ್ರತಿವಾದ ಆಲಿಸಿತ್ತು. ಎಲ್ಲಾ ಕಡೆಯವರು ತಮ್ಮ ವಾದವನ್ನು ಮುಗಿಸಿದ ನಂತರ ತನ್ನ ತೀರ್ಪನ್ನು ಕಾಯ್ದಿರಿಸಿತ್ತು.

ಶಿವಸೇನೆಯ ಮುಖ್ಯ ಸಚೇತಕ ಸುನಿಲ್ ಪ್ರಭು ಅವರ ಪರವಾಗಿ ವಾದಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮುಂದೆ ತುರ್ತು ವಿಚಾರಣೆ ನಡೆಸುವಂತೆ ಕೋರಿದ ನಂತರ ಈ ವಿಷಯವನ್ನು ವಿಚಾರಣೆಗೆ ತೆಗೆದುಕೊಳ್ಳಲಾಯಿತು. ಎರಡು ಕಡೆಯ ವಾದವನ್ನು ಆಲಿಸಿದ ನಂತರ ಸುಪ್ರೀಂ ಕೋರ್ಟ್ ನ್ಯಾಯಪೀಠವು, ನಾಳೆ ಬೆಳಿಗ್ಗೆ 11 ಗಂಟೆಗೆ ಮಹಾರಾಷ್ಟ್ರ ರಾಜ್ಯಪಾಲರ ಸೂಚನೆಯಂತೆ ವಿಶ್ವಾಸಮತ ಯಾಚನೆಗೆ ಸೂಚಿಸಿತ್ತು. ಈ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಪ್ರಕಟಿಸಿದರು

ಮಹಾರಾಷ್ಟ್ರ ಸಿಎಂ ಮಹಾರಾಷ್ಟ್ರ ಸಿಎಂ

Copyright © All rights reserved Newsnap | Newsever by AF themes.
error: Content is protected !!