December 22, 2024

Newsnap Kannada

The World at your finger tips!

96071583 08ac 4684 a7fa f93e5fea55e3

ಸೊರಬದಲ್ಲಿ ಬಂಗಾರಪ್ಪ ಸ್ಮಾರಕ: 1 ಕೋಟಿ ರು. ಅನುದಾನ ಪ್ರಕಟ

Spread the love

ಮಾಜಿ ಮುಖ್ಯಮಂತ್ರಿ ಎಸ್‌. ಬಂಗಾರಪ್ಪ ಸ್ಮಾರಕವನ್ನು ಸೊರಬ ಪಟ್ಟಣದಲ್ಲಿ ನಿರ್ಮಿಸಲು 1 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬಂಗಾರಪ್ಪ ಅವರ 87ನೇ ಜನ್ಮ ಸ್ಮರಣೆ ಹಾಗೂ ಸೊರಬ ಪಟ್ಟಣದಲ್ಲಿ 21.15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಉದ್ಯಾನವನ್ನು ಶಿವಮೊಗ್ಗದಿಂದ ಆನ್‍ಲೈನ್ ಮೂಲಕವೇ ಉದ್ಘಾಟನೆ ಮಾಡಿದರು.

ಬಳಿಕ ಮಾತನಾಡಿದ ಸಿಎಂ, ಸಮಾಜಮುಖಿ ಚಿಂತನೆಯ ನಾಯಕ ಬಂಗಾರಪ್ಪ ಜಾರಿಗೊಳಿಸಿದ ಜನಪರ, ದೂರದೃಷ್ಟಿಯ ಯೋಜನೆಗಳ ಫಲವಾಗಿ ಜನಮಾನಸದಲ್ಲಿ ಇಂದಿಗೂ ಚಿರಸ್ಥಾಯಿಯಾಗಿದ್ದಾರೆ. ಶಿಕ್ಷಣ, ಆರೋಗ್ಯ, ಕೃಷಿ ಕ್ಷೇತ್ರದಲ್ಲಿ ಬಂಗಾರಪ್ಪ ಅವರು ತಂದ ದೂರದೃಷಿ ಯೋಜನೆಗಳು ಜನರ ಮನದಲ್ಲಿ ಇಂದಿಗೂ ಚಿರಸ್ಥಾಯಿಯಾಗಿವೆ. ಕೃಷಿ ಕಾರ್ಮಿಕರು, ರೈತರು, ದೀನ ದಲಿತರು ಮತ್ತು ಗ್ರಾಮೀಣ ಜನತೆಯ ಅಭ್ಯುಧಯಕ್ಕಾಗಿ ನಿರಂತರವಾಗಿ ಶ್ರಮಿಸಿದ್ದರು ಎಂದರು.

ಕೋವಿಡ್ ಸಂಕಷ್ಟದ ಮಧ್ಯೆಯೂ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳನ್ನೂ ಸಮಾನವಾಗಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು

Copyright © All rights reserved Newsnap | Newsever by AF themes.
error: Content is protected !!