ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ ಇದರಿಂದಾಗಿ ಭಾಗಮಂಡಲದಲ್ಲಿರುವ ತ್ರಿವೇಣಿ ಸಂಗಮ ಭರ್ತಿಯಾಗಿದೆ. ಕಾವೇರಿ ನದಿ ನೀರಿನ ಪ್ರಮಾಣ ಹೆಚ್ಚಳವಾಗಿದೆ.
ಬ್ರಹ್ಮಗಿರಿ ಬೆಟ್ಟ ಭಾಗದಲ್ಲಿ ಎಡಬಿಡದೆ ಮಳೆಯಾಗುತ್ತಿದೆ ಕಾವೇರಿ ನದಿ ನೀರಿನ ಮಟ್ಟ ಗಣನೀಯ ಏರಿಕೆಯಾಗಿದೆ. ಈಗ ಸಂಗಮ ಭರ್ತಿಯಾಗಿ ನಾಪೋಕ್ಲು ರಸ್ತೆ ಮೇಲೆ ನೀರು ಹರಿಯುತ್ತಿದೆ.
ಮಳೆ ಹೀಗೆ ಮುಂದುವರಿದರೆ ಇನ್ನಷ್ಟು ನೀರಿನ ಮಟ್ಟ ಹೆಚ್ಚಳವಾಗಲಿದೆ
ನಾಪೋಕ್ಲು ಭಾಗಮಂಡಲ ರಸ್ತೆ ಸಂಪರ್ಕ ಕಡಿತವಾಗುವ ಸಾಧ್ಯತೆಯಿದೆ.
ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ, ಪೊನ್ನಂಪೇಟೆಯಲ್ಲಿ ಭಾರೀ ಮಳೆಯಾಗುತ್ತಿದೆ. ಹಾರಂಗಿ ಜಲಾಶಯ ಭರ್ತಿಯಾಗಿದೆ ಶನಿವಾರ ಶಾಸಕ ಅಪ್ಪಚ್ಚು ರಂಜನ್ ಬಾಗಿನ ಅರ್ಪಿಸಿದ್ದಾರೆ. 1,200 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.
K R S ಗೆ 8000ಕ್ಕೂ ಅಧಿಕ ಕ್ಯುಸೆಕ್ ಒಳ ಹರಿವು :
ಕೊಡಗಿನಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆ ಆರ್ ಎಸ್ ಗೆ 8769 ಕ್ಯುಸೆಕ್ ನೀರು ಒಳಹರಿವಿದೆ
ನೀರಿನ ಮಟ್ಟ :
ಗರಿಷ್ಠ ಮಟ್ಟ – 124.80 ಅಡಿ
ಇಂದಿನ ಮಟ್ಟ – 108.82 ಅಡಿ
ಒಳ ಹರಿವು -8769 ಕ್ಯುಸೆಕ್
ಹೊರ ಹರಿವು – 1168 ಕ್ಯುಸೆಕ್
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು