ಗುಂಡಿನ ದಾಳಿಗೆ ಒಳಗಾಗಿದ್ದ ಜಪಾನ್ ಮಾಜಿ ಪ್ರಧಾನಿ ಶಿಂಬೋ ಅಬೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.ಸರ್ಕಾರಿ ಮೂಲಗಳು ಈ ಸಂಗತಿಯನ್ನು ಖಚಿತಪಡಿಸಿವೆ ಎಂದು ಜಪಾನ್ ಮಾಧ್ಯಮಗಳು ವರದಿ ಮಾಡಿವೆ.

ಪಶ್ಚಿಮ ಜಪಾನ್ನ ನಾರಾ ನಗರದಲ್ಲಿ ಶುಕ್ರವಾರ ಸ್ಥಳೀಯ ಕಾಲಮಾನ 11.30ರ ವೇಳೆಗೆ ಚುನಾವಣಾ ಭಾಷಣ ಮಾಡುವ ಮುನ್ನ ಒಬ್ಬ ವ್ಯಕ್ತಿ ಹಿಂದಿನಿಂದ ಅಬೆ ಅವರ ಮೇಲೆ ಗುಂಡು ಹಾರಿಸಿದದನು . ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಬೆ ನಿಧನರಾಗಿದ್ದಾರೆ.ಇದನ್ನು ಓದಿ –ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ರಾಜ್ಯಸಭೆ ಸದಸ್ಯ ಜಗ್ಗೇಶ್ – ವಿಡಿಯೋ ನೋಡಿ
ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಜಪಾನ್ ನ ಮುಖ್ಯ ಕ್ಯಾಬಿನೇಟ್ ಕಾರ್ಯದರ್ಶಿ ಹಿರೋಕಾಜು ಮಾಟ್ಸುನೊ ಇಂತಹ ಅಮಾನುಷ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಅಬೆ ಅವರ ಮೇಲೆ 2 ಸುತ್ತು ಗುಂಡಿನ ದಾಳಿ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೃತ್ಯ ನಡೆಸಿದ ಆರೋಪಿಯನ್ನು ತೆತ್ಸುಯಾ ಯಮಗಾಮಿ ಎಂದು ಪೊಲೀಸರು ಗುರುತಿಸಿದ್ದಾರೆ, ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಂಟ್ರಿ ಪಿಸ್ತೂಲ್ನಿಂದ ಗುಂಡು ಹಾರಿಸಿದ್ದಾಗಿ ಮಾಧ್ಯಮಗಳು ವರದಿ ಮಾಡಿದ್ದು, ಆರೋಪಿ ಜಪಾನ್ ಸೈನ್ಯದಲ್ಲಿ ಕಾರ್ಯನಿರ್ವಹಿಸಿದ್ದ ಎನ್ನಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ