January 29, 2026

Newsnap Kannada

The World at your finger tips!

central government , job , application

ಪಿಎಸ್‌ಐ ನೇಮಕಾತಿ ಅಕ್ರಮ: ADGP ಅಮೃತ್ ಪೌಲ್ ಗೆ 14 ದಿನ ನ್ಯಾಯಾಂಗ ಬಂಧನ

Spread the love

545 ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಅಮೃತ್ ಪೌಲ್ ರನ್ನುನ್ಯಾಯಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಪೊಲೀಸ್ ನೇಮಕಾತಿ ವಿಭಾದ ಎಜಿಡಿಪಿಯಾಗಿದ್ದ ಅಮೃತ್ ಪೌಲ್ ರ ಸಿಐಡಿ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು 1ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರುಪಡಿಸಿದಾಗ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.ಇದನ್ನು ಓದಿ –ಸರ್ಕಾರಿ ಕಚೇರಿಗಳಲ್ಲಿ ಫೋಟೋ-ವಿಡಿಯೋ ತೆಗೆಯೋದು ಬ್ಯಾನ್

ಅಮೃತ್ ಪೌಲ್ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆ ಮುಂದೂಡಿದೆ.

ಎಡಿಜಿಪಿ ಅಮೃತ್ ಪೌಲ್ ಹಾಗೂ ಆರೋಪಿ ಶಾಂತಕುಮಾರ್ ನಡುವೆ 1.36 ಕೋಟಿ ರೂಪಾಯಿ ಹಣ ವರ್ಗಾವಣೆ ಆಗಿದೆ.

ಇನ್ನು ಮೊಬೈಲ್ ದತ್ತಾಂಶವನ್ನು ಅಳಿಸಿ ಹಾಕಲಾಗಿದೆ ಎಂದು ಸಿಐಡಿ ಆರೋಪಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ ಮೂರು ಬಾರಿ ವಿಚಾರಣೆ ಎದುರಿಸಿದ್ದ ಅಮೃತ್ ಪೌಲ್ ರನ್ನು ಕಳೆದ ಜುಲೈ 4ರಂದು ಸಿಐಡಿ ಅಧಿಕೃತವಾಗಿ ಬಂಧಿಸಿತ್ತು.

ಪಿಎಸ್‌ಐ ನೇಮಕಾತಿ ಹಗರಣದಲ್ಲಿ ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದಂತೆ ಇಂದು ಕಾರ್ಲ್‌ಟನ್ ಹೌಸ್‌ನಲ್ಲಿರುವ ಸಿಐಡಿ ಕಚೇರಿಗೆ 1995 ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಪೌಲ್ ಅವರನ್ನು ಮೂರನೇ ಬಾರಿ ವಿಚಾರಣೆಗೆ ಕರೆಯಲಾಗಿತ್ತು.

ಈ ಹಗರಣದಲ್ಲಿ ಪೌಲ್ ಸೇರಿದಂತೆ 79 ಜನರನ್ನು ಬಂಧಿಸಿರುವ ಸಿಐಡಿ ಇದುವರೆಗೆ ಎಂಟು ಎಫ್‌ಐಆರ್‌ಗಳನ್ನು ದಾಖಲಿಸಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಅವರು ನೇಮಕಾತಿ ಎಡಿಜಿಪಿ ಆಗಿದ್ದ ಸಂದರ್ಭದಲ್ಲಿ ಪರೀಕ್ಷೆಗಳು ನಡೆದಿದ್ದವು. ಹಗರಣ ಹೊರಬಿದ್ದ ಕೂಡಲೇ ಸರ್ಕಾರವು ಪೌಲ್‌ನನ್ನು ಆಂತರಿಕ ಭದ್ರತಾ ವಿಭಾಗಕ್ಕೆ (ಐಎಸ್‌ಡಿ) ವರ್ಗಾಯಿಸಿತ್ತು.

545 ಪಿಎಸ್‌ಐ ಹುದ್ದೆಗಳ ಡೀಲ್ ನಡೆದಾಗ ಅಮೃತ್ ಪೌಲ್ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರು. ಡಿವೈಎಸ್‌ಪಿ ಹಾಗೂ ಎಫ್‌ಡಿಎಯೊಂದಿಗೆ ಸೇರಿ ಅಮೃತ್ ಪೌಲ್ ಡೀಲ್ ಮಾಡಿಸಿದ್ದಾರೆ ಎಂಬ ಆರೋಪವಿದೆ.

error: Content is protected !!