ಜಯದೇವ ಆಸ್ಪತ್ರೆ ಹಾಲಿ ನಿರ್ದೇಶಕ ಡಾ. ಸಿ.ಎನ್ ಮಂಜುನಾಥ್ ಅವರ ಸೇವಾ ಅವಧಿ ಜುಲೈ 19 ರಂದು ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಡಾ ಮಂಜುನಾಥ್ ಅವರನ್ನೇ ಮುಂದುವರೆಸುವಂತೆ ವೈದ್ಯರು ಹಾಗೂ ಸಾರ್ವಜನಿಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಮುಂದಿನ ನಿರ್ದೇಶಕರನ್ನಾಗಿ ಯಾರನ್ನು ನೇಮಿಸಬೇಕು ಎಂಬ ನಿರ್ಧಾರ ಸರ್ಕಾರ ಇನ್ನಷ್ಟೇ ಕೈಗೊಳ್ಳಬೇಕಿದೆ.ಇದನ್ನು ಓದಿ –ವಿಧಾನಸೌಧದ ಮೂರನೇ ಮಹಡಿಯಲ್ಲಿ ಅಗ್ನಿ ದುರಂತ
ಈ ಮಧ್ಯೆ ಡಾ. ಮಂಜುನಾಥ್ ಅವರನ್ನೇ ಈ ಸ್ಥಾನದಲ್ಲಿ ಮುಂದುವರಿಸಿ ಎಂದು ಸರ್ಕಾರದ ಮೇಲೆ ಗಣ್ಯರು ಭಾರೀ ಒತ್ತಡ ಹಾಕುತ್ತಿದ್ದಾರೆ.
ಡಾ. ಮಂಜುನಾಥ್ ಅವರನ್ನೇ ನಿರ್ದೇಶಕರನ್ನಾಗಿ ಮುಂದುವರಿಸೋದು ಬೇಡ ಎಂದು ಕೆಲವು ಸಚಿವರು ಒತ್ತಾಯಿಸಿದ್ದಾರೆ. ಹಾಗಾಗಿ ಸರ್ಕಾರ ಇನ್ನೂ ಯಾವುದೇ ನಿರ್ಧಾರಕ್ಕೆ ಬಂದಿಲ್ಲ.
ಹಾಲಿ ನಿರ್ದೇಶಕ ಡಾ. ಮಂಜುನಾಥ್ ಅವರನ್ನೇ ಮುಂದುವರಿಸಿ, ಇಲ್ಲದೇ ಹೋದಲ್ಲಿ ಒಪಿಡಿಯನ್ನು ಬಂದ್ ಮಾಡಿ ಧರಣಿ ಮಾಡುತ್ತೇವೆ ಎಂದು ಜಯದೇವ ಹೃದ್ರೋಗ ಆಸ್ಪತ್ರೆ ಸಿಬ್ಬಂದಿ ಎಚ್ಚರಿಕೆ ನೀಡಿದ್ದಾರೆ.
ಯಾವುದೇ ಕಾರಣಕ್ಕೂ ಒಪಿಡಿಯನ್ನು ಬಂದ್ ಮಾಡಿ ಸಾರ್ವಜನಿಕರಿಗೆ ತೊಂದರೆ ಮಾಡಬಾರದು ಎಂದು ಆಸ್ಪತ್ರೆ ಸಿಬ್ಬಂದಿಗೆ ಡಾ. ಮಂಜುನಾಥ್ ಅವರು ಮನವಿ ಮಾಡಿದ್ದಾರೆ.
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
- 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ
- ಸಿಎಂ ಪತ್ನಿಯ ನಿವೇಶನ ಹಗರಣ: ದೂರು ಹಿಂಪಡೆಯಲು ಆಮಿಷ ನೀಡಿದ ಆರೋಪ
- ಅಂತಾರಾಷ್ಟ್ರೀಯ ಕ್ರಿಕೆಟ್ಗೆ ರವಿಚಂದ್ರನ್ ಅಶ್ವಿನ್ ದಿಢೀರ್ ವಿದಾಯ
More Stories
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ