ದೇಶಾದ್ಯಂತ ಇಂದು ದೇಶದ ಪ್ರಪ್ರಥಮ ಪ್ರಜೆ ಹಾಗೂ 15 ನೇ ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಹಾಗೂ ವಿಪಕ್ಷಗಳ ಅಭ್ಯರ್ಥಿ ಯಶ್ವಂತ ಸಿನ್ಹ ನಡುವೆ ಕಾಳಗ ನಡೆಯಲಿದೆ.
ಈಗಾಗಲೇ ಚುನಾವಣೆಗೆ ಚುನಾವಣಾ ಆಯೋಗ ಸಿದ್ಧತೆ ಮಾಡಿಕೊಂಡಿದೆ ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ . ಜುಲೈ 21 ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.ಜುಲೈ 25 ರಂದು ನೂತನ ರಾಷ್ಟ್ರಪತಿಗಳು ಅಧಿಕಾರ ಸ್ವೀಕರಿಸಲಿದ್ದಾರೆ.
ರಾಷ್ಟ್ರಪತಿ ಚುನಾವಣೆಯ ಮತದಾನಕ್ಕೆ ದೇಶಾದ್ಯಂತ ಸಕಲ ಸಿದ್ದತೆ ನಡೆದಿದ್ದು ರಾಜ್ಯದಲ್ಲೂ ತಯಾರಿ ಜೋರಾಗಿದೆ. ವಿಧಾನಸೌಧದ ಮೊದಲನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 106 ರಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ.
ದ್ರೌಪದಿ ಮುರ್ಮು ಹಾಗೂ ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ಆದರೆ ಎನ್‌ಡಿಎ ಬಹುಮತ ಹೊಂದಿರುವ ಕಾರಣ ದ್ರೌಪದಿ ಮುರ್ಮು ಗೆಲುವು ಬಹುತೇಕ ಖಚಿತ ಎನ್ನಲಾಗುತ್ತಿದೆ. ಇನ್ನು ದ್ರೌಪದಿ ಮುರ್ಮುಗೆ ಜೆಡಿಎಸ್ ಸೇರಿದಂತೆ 44 ಪಕ್ಷಗಳು ಬೆಂಬಲ ಸೂಚಿಸಿವೆ.
ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಚುನಾವಣೆಯಲ್ಲಿ ತಮಗೆ ಮತ ನೀಡುವಂತೆ ಎಲ್ಲ ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದ್ದಾರೆ. ರಾಷ್ಟ್ರ್ರಪತಿ ಚುನಾವಣೆಯು ಇಬ್ಬರು ಅಭ್ಯರ್ಥಿಗಳ ಸ್ಪರ್ಧೆ ಅಲ್ಲ, ಎರಡು ಸಿದ್ಧಾಂತಗಳ ನಡುವಿನ ಸ್ಪರ್ಧೆ ಅಂತ ಹೇಳಿದ್ದಾರೆ. ಮದರಸಾಗಳಲ್ಲೂ ಕಡ್ಡಾಯವಾಗಿ ತ್ರಿವರ್ಣಧ್ವಜ ಹಾರಲೇಬೇಕು – ಸರ್ಕಾರದಿಂದ ಆದೇಶ
ತಾವು ಭಾರತದ ಪ್ರಜಾಪ್ರಭುತ್ವವನ್ನು ರಕ್ಷಿಸಲು ನಿಂತಿರುವುದಾಗಿ, ಪ್ರಜಾಪ್ರಭುತ್ವದ ಮೇಲೆ ದಿನನಿತ್ಯ ದಾಳಿ ಮಾಡುವವರು ದ್ರೌಪದಿ ಮುರ್ಮುರನ್ನು ಬೆಂಬಲಿಸುತ್ತಿದ್ದಾರೆ ಎಂದಿದ್ದಾರೆ. ಎಲ್ಲಾ ಶಾಸಕರು ಮತ್ತು ಸಂಸದರು ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸುವಂತೆ ಒತ್ತಾಯಿಸಿದ್ದಾರೆ.
- 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
- ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
More Stories
2025ರಿಂದ ಕ್ಯಾನ್ಸರ್ ಲಸಿಕೆ ಉಚಿತ ವಿತರಣೆ: ಮಹತ್ವದ ವೈದ್ಯಕೀಯ ಸಾಧನೆ
ವಿರೋಧ ಲೆಕ್ಕಿಸದ ಮೋದಿ ಸರ್ಕಾರ
ಒಂದು ದೇಶ, ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಮಂಡನೆ