ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ದೆಹಲಿಯ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳ ಮುಂದೆ ಇಂದು ಬೆಳಿಗ್ಗೆ 11 ಗಂಟೆ ವೇಳೆಗೆ ವಿಚಾರಣೆಗೆ ಹಾಜರಾಗಲಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಹುಲ್ ಗಾಂಧಿ 5 ದಿನಗಳ ವಿಚಾರಣೆ ಎದುರಿಸಿದ್ದರು. ಸೋನಿಯಾಗಾಂಧಿ ಅವರಿಗೂ ವಿಚಾರಣೆ ಬರುವಂತೆ 2 ಬಾರಿ ಸಮನ್ಸ್ ನೀಡಲಾಗಿತ್ತು.
ಕೋವಿಡ್ ಸೇರಿದಂತೆ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಹಿನ್ನೆಲೆ ವಿಚಾರಣೆ ಮುಂದೂಡಲು ಸೋನಿಯಾಗಾಂಧಿ ಮನವಿ ಮಾಡಿದ್ದರು. ಇದಕ್ಕೆ ಸಹಕರಿಸಿದ್ದ ಅಧಿಕಾರಿಗಳು ಇಂದಿಗೆ ದಿನಾಂಕ ನಿಗದಿ ಮಾಡಿದ್ದರು.ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಬಿಗ್ ರಿಲೀಫ್
ಸೋನಿಯಾ ನಿರ್ದೇಶನದಂತೆ ಅಸೋಸಿಯೇಟೆಡ್ ಜರ್ನಲ್ಸ್ ಲಿ. ಯಂಗ್ ಇಂಡಿಯಾ ಖರೀದಿ ನಡೆದಿದೆ. ವ್ಯವಹಾರಗಳ ಪ್ರತಿ ಹಂತದಲ್ಲೂ ಸೋನಿಯಾಗಾಂಧಿ ಉಪಸ್ಥಿತಿ ಇದ್ದು. ರಾಹುಲ್ ಗಾಂಧಿಗೆ ಹಳೆ ವ್ಯವಹಾರಗಳ ಬಗ್ಗೆ ಪೂರ್ಣ ಮಾಹಿತಿ ಇಲ್ಲ. ಸೋನಿಯಾಗಾಂಧಿ ಹೇಳಿಕೆಯಿಂದ ಪ್ರಕರಣಕ್ಕೆ ಹೊಸ ತಿರುವು ಸಿಗುವ ಸಾಧ್ಯತೆಯಿದೆ.
ಕಾಂಗ್ರೆಸ್ ಪ್ರತಿಭಟನೆ :
ಈ ನಡುವೆ ಸೋನಿಯಾಗಾಂಧಿ ವಿಚಾರಣೆ ಖಂಡಿಸಿ ದೆಹಲಿ, ಬೆಂಗಳೂರು ಸೇರಿದಂತೆ ದೇಶಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ತೀರ್ಮಾನಿಸಿದೆ.
ರಾಹುಲ್ ವಿಚಾರಣೆ ವೇಳೆ ನಡೆಸಿದ ಪ್ರತಿಭಟನೆ ಮಾದರಿಯಲ್ಲಿ ಇವತ್ತೂ ಬೀದಿಗಿಳಿಯಲು ಪಕ್ಷ ತೀರ್ಮಾನಿಸಿದೆ. ದೆಹಲಿಯಲ್ಲಿ ಭಾರೀ ಹೈಡ್ರಾಮಾ ನಡೆಯುವ ಸಾಧ್ಯತೆ ಇದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ