ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಭಾರತದ ನೂತನ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.
ರಾಷ್ಟ್ರಪತಿ ಚುನಾವಣೆಗೆ ನಡೆದ ಮತದಾನದ ಮತಏಣಿಕೆ ಕಾರ್ಯ ನಡೆಯಿತು. ಮೊದಲ ಸುತ್ತಿನಿಂದ, ಕೊನೆಯ ಸುತ್ತಿನವರೆಗೂ ಮುನ್ನಡೆಯನ್ನು ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಕಾಯ್ದುಕೊಂಡಿದ್ದರು. ಇದೀಗ ದ್ರೌಪದಿ ಮುರ್ಮು ಭಾರತದ ನೂತನ ರಾಷ್ಟ್ರಪತಿ, ಪ್ರತಿಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಸೋಲಿಸಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿದ ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಪಿ.ಸಿ. ಮೋದಿ ಅವರು, ಮೂರನೇ ಸುತ್ತಿನ ಮತ ಎಣಿಕೆಯಲ್ಲಿ ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಒಡಿಶಾ ಮತ್ತು ಪಂಜಾಬ್ ರಾಜ್ಯಗಳಿವೆ. ಈ ಸುತ್ತಿನಲ್ಲಿ, ಒಟ್ಟು ಮಾನ್ಯ ಮತಗಳು 1,333. ಮಾನ್ಯ ಮತಗಳ ಒಟ್ಟು ಮೌಲ್ಯ 1,65,664. ದ್ರೌಪದಿ ಮುರ್ಮು 812, ಯಶವಂತ್ ಸಿನ್ಹಾ 521 ಮತಗಳನ್ನು ಪಡೆದಿದ್ದಾರೆ ಎಂದು ತಿಳಿಸಿದರು.
ತಮ್ಮ ಕಾರುಗಳಿಗೆ ತಾವೇ ಬೆಂಕಿ ಹಾಕಿಕೊಂಡ ಯುವ ಕಾಂಗ್ರೆಸ್ ಕಾರ್ಯಕರ್ತರು
ಎನ್ ಡಿ ಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಮೂರನೇ ಸುತ್ತಿನ ಮತ ಎಣಿಕೆಯ ಕೊನೆಯಲ್ಲಿ ಒಟ್ಟು ಮಾನ್ಯ ಮತಗಳಲ್ಲಿ 50% ಗಡಿ ದಾಟಿದ್ದಾರೆ. ದೇಶದ ರಾಷ್ಟ್ರಪತಿಯಾಗಲು ಸಜ್ಜಾಗಿದ್ದಾರೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್