ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಈ ಹಿಂದೆ ಗ್ಯಾಂಗ್‌ಸ್ಟರ್ ಲಾರೆನ್ಸ್ನಿಂದ ಬೆದರಿಕೆ ಪತ್ರ ಬಂದ ಬೆನ್ನಲ್ಲೇ ಈಗ ಗನ್ ಲೈಸನ್ಸ್ ಗಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಜೀವ ಬೆದರಿಕೆ ನಂತರ ಬಾಲಿವುಡ್ ನಟ ಸಲ್ಮಾನ್ ಖಾನ್ ಮುಂಬೈ ಪೊಲೀಸರಿಗೆ ವೈಯಕ್ತಿಕ ರಕ್ಷಣೆಗಾಗಿ ಗನ್ ಲೈಸೆನ್ಸ್ ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಕಳೆದ ತಿಂಗಳು ಮುಂಬೈನ ಬಾಂದ್ರಾ ಬ್ಯಾಂಡ್‌ಸ್ಟ್ಯಾಂಡ್ ವಾಯುವಿಹಾರದಲ್ಲಿ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್‌ಗೆ ಜೀವ ಬೆದರಿಕೆ ಪತ್ರ ಬಂದ ಬೆನ್ನಲ್ಲೇ ಸಲ್ಮಾನ್ ಖಾನ್ ಅಲರ್ಟ್ ಆಗಿದ್ದಾರೆ. ಮುಂಬೈ ಪೊಲೀಸ್ ಕಮಿಷನರ್ ವಿವೇಕ್ ಫನ್ಸಾಲ್ಕರ್ ಭೇಟಿಯಾಗಿ ಗನ್ ಲೈಸೆನ್ಸ್ ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಕೃಷ್ಣಮೃಗ ಭೇಟೆಯಾಡಿದ ಪ್ರಕರಣದಲ್ಲಿ ಸಲ್ಮಾನ್ ಖಾನ್‌ಗೆ ಈಗಾಗಲೇ ಬಂಧಿತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಶ್ನೋಯ್ ಬೆದರಿಕೆ ಹಾಕಿದ್ದಾನೆ. ಸಿಎಂ ಮಮತಾ ಬ್ಯಾನರ್ಜಿ ಆಪ್ತನಿಗೆ ED ಶಾಕ್-ಸುಂದರಿ ಮನೆಯಲ್ಲಿ 20 ಕೋಟಿ ರು ಹಣ ಪತ್ತೆ
ಇತ್ತೀಚೆಗೆ ಮೂಸೆ ವಾಲಾ ಪ್ರಕರಣದ ವಿಚಾರಣೆಯಲ್ಲೂ ಮತ್ತೆ ಸಲ್ಮಾನ್ ಕುರಿತು ಹೇಳಿಕೆ ನೀಡಿದ್ದಾನೆ. ಕೃಷ್ಣಮೃಗ ಭೇಟೆ ಪ್ರಕರಣದಲ್ಲಿ ಸಲ್ಮಾನ್ ಕ್ಷಮಿಸುವುದಿಲ್ಲ ಎಂದಿದ್ದಾನೆ. ಇದರಿಂದ ಸಲ್ಮಾನ್ ಹಾಗೂ ಕುಟುಂಬದ ಆತಂಕ ಮತ್ತಷ್ಟು ಹೆಚ್ಚಾಗಿದ್ದು ಸಲ್ಮಾನ್ ಖಾನ್ ಹಾಗೂ ಕುಟುಂಬ ಸದಸ್ಯರ ಭದ್ರತೆಯನ್ನು ಪೊಲೀಸರು ಹೆಚ್ಚಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು