ಕಾಂಗ್ರೆಸ್ ಶಾಸಕನ ಜಮೀರ್ ಖಾನ್ ನ ಅತಿಯಾದ ಸ್ವಾಮಿ ನಿಷ್ಠೆಗೆ ಕಡಿವ ಹಾಕಲು ಮಾಜಿ ಸಚಿವ ಚಲುವರಾಯಸ್ವಾಮಿ ಮಧ್ಯಪ್ರವೇಶ ಮಾಡಿದ್ದಾರೆ
ಸಂಸದ ಡಿ.ಕೆ ಸುರೇಶ್ ಮನೆಗೆ ಭೇಟಿ ನೀಡಿದ ಚಲುವರಾಯಸ್ವಾಮಿ ಜಮೀರ್ ವಿರುದ್ಧ ಹರಿಹಾಯ್ದಿದ್ದಾರೆ. ಒಕ್ಕಲಿಗರ ಬಗ್ಗೆ ಮಾತಾಡದಂತೆ ಚಲುವರಾಯಸ್ವಾಮಿ ತಾಕೀತು ಮಾಡಿದ್ದಾರೆ. ಒಂದೇ ನಾಣ್ಯಕ್ಕೆ ಎರಡು ಮುಖಗಳು(ಬ್ಯಾಂಕರ್ಸ್ ಡೈರಿ)
ಒಂದು ವೇಳೆ ಒಕ್ಕಲಿಗರ ಬಗ್ಗೆ ಹಗುರವಾಗಿ ಮಾತನಾಡಿದರೆ ಜಮೀರ್ ಈ ನಡೆಯಿಂದ ಜೆಡಿಎಸ್‍ಗೆ ಲಾಭವಾಗಬಹುದು. ಹೀಗಾಗಿ ಆರಂಭದಲ್ಲೇ ವಿವಾದವನ್ನು ತಣ್ಣಗಾಗಿಸಲು ಚಲುವರಾಯಸ್ವಾಮಿ ಮುಂದಾಗಿದ್ದಾರೆ.
ಜಮೀರ್ ಗೂ ಆಪ್ತರಾಗಿರುವ ಚಲುವರಾಯಸ್ವಾಮಿ ಖಾನ್ ಜೊತೆ ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ. ವಿವಾದಕ್ಕೆ ಅಂತ್ಯ ಹಾಡಲು ಸಿದ್ದರಾಮಯ್ಯ ಸಹ ಸೂಚಿಸಿದ್ದಾರೆ ಎನ್ನಲಾಗಿದೆ.
ಜಮೀರ್, ಸಿದ್ದರಾಮಯ್ಯ ಆಪ್ತರಾದ ಚಲುವರಾಯಸ್ವಾಮಿ ಖುದ್ದು ಫೀಲ್ಡ್‍ಗಿಳಿದಿದ್ದಾರೆ. ಕಟುನುಡಿಗಳ ಮೂಲಕ ಆಪ್ತನಿಗೆ ಸುಮ್ಮನಿರುವಂತೆ ಪರೋಕ್ಷವಾಗಿ ಸೂಚಿಸಿದ್ದಾರೆ. ಎರಡು ಪ್ರತ್ಯೇಕ ಭೀಕರ ರಸ್ತೆ ಅಪಘಾತ – ಇಬ್ಬರು ಪೋಲಿಸರು ಸೇರಿ 8 ಮಂದಿ ಸಾವು
ಜಮೀರ್ ಗೆ ಶೋಕಾಸ್ ನೋಟಿಸ್ ?
ಜಮೀರ್ ಗೆ ಶೋಕಾಸ್ ನೋಟಿಸ್ ನೀಡಿ ಶಿಸ್ತುಕ್ರಮ ಕೈಗೊಳ್ಳುವಂತೆ ಶಿಸ್ತುಪಾಲನ ಸಮಿತಿ ರೆಹಮಾನ್ ಖಾನ್‍ಗೆ ಖುದ್ದು ಡಿಕೆಶಿ ಸೂಚಿಸಿದ್ದಾರೆ. ಇದೆಲ್ಲದರ ಮಧ್ಯೆ ಸಿದ್ದರಾಮಯ್ಯ ಕಾಂಗ್ರೆಸ್‍ನಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ತುಟಿ ಬಿಚ್ಚಿಲ್ಲ.
ಕಾಂಗ್ರೆಸ್ ನಲ್ಲಿ ನಡೆದಿರುವ ಈ ಕಿತ್ತಾಟವನ್ನು ಜೆಡಿಎಸ್ ಹೇಗೆ ಲಾಭ ಮಾಡಿಕೊಳ್ಳಬೇಕು ಎನ್ನುವುದರ ಬಗ್ಗೆ ಲೆಕ್ಕಾಚಾರ ಹಾಕಲಾಗುತ್ತಿದೆ ಎಂಬ ವರದಿಗಳೂ ಇವೆ.
- 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
- ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
More Stories
4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ