ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಭಾರತದ ಅತಿ ಹೆಚ್ಚು ತೆರಿಗೆ ಪಾವತಿದಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ಈ ಸಂಬಂಧ ನಟ ಅಕ್ಷಯ ಕುಮಾರ್ ಮನೆಗೆ ಇಂದು ಭಾರತೀಯ ಆದಾಯ ತೆರಿಗೆ ಇಲಾಖೆಯಿಂದ ವಿಶೇಷ ಪತ್ರವೊಂದು ಕಳುಹಿಸಿದ್ದಾರೆ.
ಹಿಂದಿ ಚಲನಚಿತ್ರೋದ್ಯಮದಿಂದ ಅತಿ ಹೆಚ್ಚು ತೆರಿಗೆ ಪಾವತಿಸುವವರಲ್ಲಿ ನಟ ಅಕ್ಷಯ್ ಕುಮಾರ್ ಸಹ ಒಬ್ಬರು ಎಂದು ಗೌರವಯುತವಾಗಿ ಆದಾಯ ತೆರಿಗೆ ಇಲಾಖೆ ಬಾಲಿವುಡ್ ಕಿಲಾಡಿಗೆ ಸಮ್ಮಾನ್ ಪತ್ರವನ್ನು ನೀಡಿದೆ.
ಈ ಮೂಲಕ ಅಕ್ಷಯ್ ಕುಮಾರ್ ಮತ್ತೊಮ್ಮೆ ಎಲ್ಲರಿಗೂ ಮಾದರಿಯಾಗಿದ್ದಾರೆ ಮತ್ತು ಹೆಚ್ಚು ತೆರಿಗೆ ಪಾವತಿಸುವವರು ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಸದ್ಯ ಅಕ್ಷಯ್‌ಗೆ ನೀಡಿರುವ ಸಮ್ಮಾನ್ ಪ್ರತ್ರದ ಪೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
29 . 5 ಕೋಟಿ ರು ತೆರಿಗೆ :
ಈ ಬಾರಿ 29.5 ಕೋಟಿ ತೆರಿಗೆ ಪಾವತಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಸದ್ಯ ಅಕ್ಷಯ್ ಕುಮಾರ್ ಟಿನು ದೇಸಾಯಿ ಅವರ ಮುಂಬರುವ ಚಿತ್ರದ ಶೂಟಿಂಗ್ಗಾಗಿ ಯುಕೆ ಅಲ್ಲಿ ಇದ್ದಾರೆ. ಹೀಗಾಗಿ ಸಮ್ಮಾನ್ ಪತ್ರವನ್ನು ಅವರ ತಂಡ ಸ್ವೀಕರಿಸಿದೆ ಎಂದು ಹೇಳಲಾಗಿದೆ.
ಕಳೆದ 5 ವರ್ಷಗಳಲ್ಲಿ ಭಾರತದ ಅತಿ ಹೆಚ್ಚು ತೆರಿಗೆ ಪಾವತಿದಾರರ ಪೈಕಿ ನಿರಂತರವಾಗಿ ನಟ ಅಕ್ಷಯ್‌ಗೆ ಈ ಗೌರವವನ್ನು ನೀಡಿರುವುದು ಇದೇ ಮೊದಲ ನಿದರ್ಶನವಲ್ಲ. ಈ ಹಿಂದೆಯೂ ಅಕ್ಷಯ್ ಭಾರತದ ಅತಿ ಹೆಚ್ಚು ತೆರಿಗೆ ಪಾವತಿದಾರ ಎಂಬ ಕೀರ್ತಿಗೆ ಭಾಜನರಾಗಿದ್ದರು.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ