ಮಂಗಳೂರಿನ ಪಬ್‌ನಲ್ಲಿ ಕಳೆದ ರಾತ್ರಿ ಕಾಲೇಜು ವಿದ್ಯಾರ್ಥಿಗಳು ನಡೆಸುತ್ತಿದ್ದ ಮೋಜು ಮಸ್ತಿ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರು ತಡೆಯೊಡ್ಡಿ, ಪಾರ್ಟಿಯಲ್ಲಿ ತೊಡಗಿದ್ದ ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿ ಪಬ್‌ನಿಂದ ಹೊರಗೆ ಕಳುಹಿಸಿದ್ದಾರೆ.
ಮಂಗಳೂರು ನಗರದ ಜ್ಯೋತಿ ವೃತ್ತದ ಬಳಿಯ ರಿಸೈಕ್ಲಿಂಗ್ ಪಬ್‌ನಲ್ಲಿ ನಿನ್ನೆ ರಾತ್ರಿ ಭರ್ಜರಿ ಪಾರ್ಟಿ ನಡೀತಿತ್ತು. ಪಾರ್ಟಿಯಲ್ಲಿ ಎಣ್ಣೆ ನಶೆಯಲ್ಲಿ ವಿದ್ಯಾರ್ಥಿಗಳು ಮೋಜು ಮಸ್ತಿ ಮಾಡ್ತಿದ್ದರು.
ಆಗ ಎಂಟ್ರಿ ಕೊಟ್ಟ ಭಜರಂಗದಳ ಕಾರ್ಯಕರ್ತರು ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟಿದ್ದಾರೆ. ಕುಡಿದು ತೂರಾಡುತ್ತಿದ್ದ ವಿದ್ಯಾರ್ಥಿಗಳಿಗೆ ಚಳಿ ಬಿಡಿಸಿದ್ದಾರೆ.
ಇತ್ತೀಚೆಗೆ ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳ ಅಶ್ಲೀಲ ವಿಡಿಯೋ ವೈರಲ್ ಆದಾಗಲೇ ಬಜರಂಗದಳ ಎಚ್ಚರಿಕೆ ನೀಡಿತ್ತು. ಈ ಕೃತ್ಯದ ಹಿಂದೆ ಡ್ರಗ್ ಹಾಗೂ ಸೆಕ್ಸ್ ಮಾಫಿಯಾ ಜಾಲ ಅಡಗಿರುವ ಬಗ್ಗೆ ಸಂಶಯವಿದೆ.
ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿತ್ತು. ಇದೇ ಕಾಲೇಜಿನ ವಿದ್ಯಾರ್ಥಿನಿಯರು ಕೆಲ ತಿಂಗಳ ಹಿಂದೆ ಬೀದಿ ಹೊಡೆದಾಟ ಮಾಡಿದ್ದರು. ಮಾದಕ ವಸ್ತು ಸೇವನೆ ಮಾಡಿ ಪೊಲೀಸರ ಕೈಗೆ ಸಿಕ್ಕಿರುವ ಘಟನೆ ನಡೆದಿತ್ತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು