ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆ ಬಿಜೆಪಿ ಯುವ ಘಟಕದ ಮುಖಂಡ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಕುಟುಂಸ್ಥರಿಗೆ ಸಂತ್ವಾನ ಹೇಳಿದ್ದಾರೆ.
ಸಚಿವೆ ಶೋಭಾ ಕರಂದ್ಲಾಜೆ ಎದುರು ಕುಟುಂಬಸ್ಥರು ನ್ಯಾಯ ಕೊಡಿಸುವಂತೆ ಕಣ್ಣೀರು ಹಾಕಿದ್ದರು. ಇದೇ ವೇಳೆ ನ್ಯಾಯ ದೊರಕಿಸುವ ಭರವಸೆಯನ್ನು ನೀಡಿದರು.ಇದನ್ನು ಓದಿ –ಮುಂಬೈ ನಲ್ಲಿ ಶಿವಸೇನಾ ಸಂಸದ ರಾವತ್ ನಿವಾಸದ ಮೇಲೆ ED ದಾಳಿ
ಬಳಿಕ ಕುಟುಂಬಸ್ಥರಿಗೆ 5 ಲಕ್ಷ ರು ನಗದು, ಅವರ ಒಂದು ತಿಂಗಳ ಸಂಬಳ ಹಾಗೂ ಚೆಕ್ ನೀಡಿದ್ದಾರೆ.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ ಅವರು, ಪ್ರವೀಣ್ ನೆಟ್ಟಾರು ಸಾವು ನಮಗೆಲ್ಲರಿಗೂ ದುಃಖ ತಂದಿದೆ. ಅಮಾಯಕರ ಸಾವು ನೋವುಂಟು ಮಾಡಿದೆ. ಪ್ರೀತಿಯಿಂದ ಬದುಕುತ್ತಿದ್ದ ಪ್ರವೀಣ್ ಇಂದು ನಮ್ಮೊಂದಿಗೆ ಇಲ್ಲ. ಸಮಸ್ಯೆ ಆದಾಗ ಪ್ರವೀಣ್ ಸ್ಪಂದಿಸುತ್ತಿದ್ದ. ಹತ್ಯೆಯಾದಾಗ ನಾನು ದೆಹಲಿಯಲ್ಲಿ ಇದ್ದೆ. ಕೇರಳ ಮಾದರಿಯಲ್ಲಿ ಪ್ರವೀಣ್ ಕೊಲೆಯನ್ನು ಮಾಡಿದ್ದಾರೆ. NIA ತನಿಖೆಗೆ ನಡೆಸಲು ನೀಡಿದ್ದಾರೆ. ಈ ತನಿಖೆಯಲ್ಲಿ ನಿಜವಾದ ಆರೋಪಿಗಳು ಸಿಗುತ್ತಾರೆ, ಕಠಿಣ ಶಿಕ್ಷೆಯಾಗುತ್ತದೆ ಎಂದು ತಿಳಿಸಿದರು.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ