ದೇಶಾದ್ಯಂತ ಭಾನುವಾರ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಏಕಾಏಕಿ 6 ರಾಜ್ಯಗಳ 13 ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಕರ್ನಾಟಕ ಸೇರಿದಂತೆ ಒಟ್ಟು 6 ರಾಜ್ಯಗಳ ವಿವಿಧ ಪ್ರದೇಶಗಳ ಮೇಲೆ ದಾಳಿ ನಡೆದಿದೆ, ಐಎಸ್ಐಎಸ್ ಉಗ್ರ ಸಂಘಟನೆ ಚಟುವಟಿಕೆ ಸಂಬಂಧಿತ ಮಾಹಿತಿಯ ಮೇರೆಗೆ ರಾಜ್ಯದ ಕಾರವಾರದ ಭಟ್ಕಳ ಹಾಗೂ ತುಮಕೂರಿನಲ್ಲೂ ಎನ್‌ಐಎ ಮಿಂಚಿನ ಕಾರ್ಯಾಚರಣೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.ಇದನ್ನು ಓದಿ –ಫಾಸಿಲ್ ಹತ್ಯೆಗೆ ಬಳಕೆ ಮಾಡಿದ ಕಾರು ಕಾರ್ಕಳ ಬಳಿ ಪತ್ತೆ
ಜೂನ್ 25 ರಂದು ಬೆಂಗಳೂರಿನಲ್ಲಿ ಸುಮೋಟೋ ಕೇಸ್ ದಾಖಲಿಸಿಕೊಳ್ಳಲಾಗಿತ್ತು. ಇದರ ಬೆನ್ನಲ್ಲೇ ತನಿಖೆ ಮುಂದುವರೆಸಿದ್ದ ಎನ್‌ಐಎ, ಜುಲೈ 31 ರಂದು ಮಧ್ಯ ಪ್ರದೇಶದ ಎರಡು ಕಡೆ, ಗುಜರಾತ್ ರಾಜ್ಯದ ನಾಲ್ಕು ಕಡೆ, ಮಹಾರಾಷ್ಟ್ರ, ಕರ್ನಾಟಕದಲ್ಲಿ ತಲಾ ಎರಡು ಕಡೆ ಹಾಗೂ ಉತ್ತರ ಪ್ರದೇಶ ಮತ್ತು ಬಿಹಾರದಲ್ಲೂ ಬೆಳ್ಳಂಬೆಳಗ್ಗೆ 4 ಗಂಟೆಗೆ ದಾಳಿ ನಡೆಸಿದೆ.
ದಾಳಿ ವೇಳೆ ಹಲವಾರು ದಾಖಲೆಗಳ ಪರಿಶೀಲನೆಯನ್ನು ನಡೆಸಲಾಗಿದೆ. ಶಂಕಿತರನ್ನು ಉಗ್ರರನ್ನು ವಶಪಡಿಸಿಕೊಂಡು ಐಪಿಸಿ 153A, 153B UAPA 18b ,38, 39,40 ಅಡಿಯಲ್ಲಿ ಕೇಸ್ ದಾಖಲಿಸಿಕೊಂಡಿದ್ದಾರೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ