ಗುಜರಾತ್ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಕೇಶುಭಾಯ್ ಪಟೇಲ್ ನಿಧನರಾಗಿದ್ದಾರೆ. ತಮ್ಮ 92 ನೇ ವಯಸ್ಸಿನಲ್ಲಿ ಕೇಶುಭಾಯ್ ಅಸುನೀಗಿದ್ದಾರೆ. ಗುಜರಾತ್‌ನಲ್ಲಿ ಎರಡು ಅವಧಿಗೆ ಬಿಜೆಪಿಯಿಂದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು.
ಜುಲೈ 24, 1930 ರಂದು ಜನಿಸಿದ್ದ ಕೇಶುಭಾಯ್ ಪಟೇಲ್, ಭಾರತೀಯ ಜನತಾ ಪಕ್ಷದ ಹಿರಿಯ ನಾಯಕರಾಗಿದ್ದರು. ಮಾರ್ಚ್ 1995 ರಿಂದ 1995 ರ ಅಕ್ಟೋಬರ್ ವರೆಗೆ ಮೊದಲ ಅವಧಿಗೆ ನಂತರ ಮಾರ್ಚ್ 1998 ರಿಂದ ಅಕ್ಟೋಬರ್ 2001 ರವರೆಗೆ ಎರಡನೇ ಅವಧಿಗೆ ಗುಜರಾತ್ ಮುಖ್ಯಮಂತ್ರಿಯಾಗಿದ್ದರು.
ಇಂದು ಮುಂಜಾನೆ ಉಸಿರಾಟದ ತೊಂದರೆ ಹಿನ್ನೆಲೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಸೆಪ್ಟೆಂಬರ್‌ನಲ್ಲಿ ಕೇಶುಭಾಯ್ ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಲಕ್ಷಣ ರಹಿತ ಕೊರೊನಾ ಬಂದಿತ್ತು. ನಂತರ ಚಿಕಿತ್ಸೆ ನೀಡಿ ಗುಣಮುಖರಾಗಿದ್ದರು.
More Stories
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ