December 19, 2024

Newsnap Kannada

The World at your finger tips!

death threat ,reliance,business man

Life threatening call to Mukesh Ambani family - complaint to police

ಮುಖೇಶ್ ಅಂಬಾನಿ ಕುಟುಂಬಕ್ಕೆ ಜೀವ ಬೆದರಿಕೆ ಕರೆ – ಪೋಲಿಸರಿಗೆ ದೂರು

Spread the love

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಸೋಮವಾರ ಮತ್ತೆ ಜೀವ ಬೆದರಿಕೆ ಬಂದಿದೆ , ಶಂಕಿತನ್ನು ವಶಕ್ಕೆ ಪಡೆಯಲಾಗಿದೆ.

ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನು ಓದಿ –ರಾಜ್ಯದಲ್ಲಿ ಧ್ವಜಾರೋಹಣ ವೇಳೆ ಇಬ್ಬರು ಸಾವು

ಮುಂಬೈನ ಗಿರ್‌ಗಾಂವ್‌ನಲ್ಲಿರುವ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಲ್ಯಾಂಡ್‌ಲೈನ್ ಸಂಖ್ಯೆಗೆ ಇಂದು ಬೆಳಗ್ಗೆ ಅಫ್ಜಲ್ ಎಂದು ಗುರುತಿಸಲಾದ ವ್ಯಕ್ತಿ ಮೂರು-ನಾಲ್ಕು ಕರೆಗಳನ್ನು ಮಾಡಿ, ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬವನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು.

ಬೆದರಿಕೆ ಕರೆಗಳನ್ನು ಸ್ವೀಕರಿಸಿದ ಬಗ್ಗೆ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆ ದೂರು ದಾಖಲಿಸಿತ್ತು.

ದೂರಿನ ಹಿನ್ನೆಲೆ ಪ್ರಕರಣ ದಾಖಲಿಸಿ, ತನಿಖೆ ನಡೆಸಲಾಗಿತ್ತು. ಕರೆ ಮಾಡಿದ ಫೋನ್ ಸಂಖ್ಯೆಯನ್ನು ಪೊಲೀಸರು ಗುರುತಿಸಿದ ನಂತರ ವ್ಯಕ್ತಿಯನ್ನು ಪತ್ತೆಹಚ್ಚಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ ಕರೆ ಮಾಡಿದ ಶಂಕಿತ ಆರೋಪಿ ಮಾನಸಿಕವಾಗಿ ಅಸ್ವಸ್ಥರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!