November 24, 2024

Newsnap Kannada

The World at your finger tips!

ashok mandya

ಭಾರತದ ಸ್ವಾತಂತ್ರದ ಹೋರಾಟ ವಿಶ್ವದ ಇತಿಹಾಸದಲ್ಲೇ ಮಾದರಿ: ಸಚಿವ ಆಶೋಕ್

Spread the love

ಬ್ರಿಟಿಷರ ಸರ್ವಾಧಿಕಾರದ ಆಳ್ವಿಕೆಯಿಂದ ಮುಕ್ತಗೊಳಿಸಿ ಭಾರತವನ್ನು ಸ್ವಾತಂತ್ರ್ಯಗೊಳಿಸಿದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ನೇತೃತ್ವದ ನಡೆದ ಅಹಿಂಸಾತ್ಮಕ ಹೋರಾಟ ವಿಶ್ವದ ಇತಿಹಾಸದಲ್ಲೇ ಮಾದರಿಯಾಗಿದೆ ಎಂದು ಕಂದಾಯ ಸಚಿವ ಆರ್. ಆಶೋಕ್ ಅಭಿಪ್ರಾಯಪಟ್ಟರು.

ಮಂಡ್ಯದ ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ನಗರ ಸಭೆಯ ವತಿಯಿಂದ ನಡೆದ ಭಾರತ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೇರವೇರಿಸಿ ಅವರು ಮಾತನಾಡಿದರು.

ಯಾವುದೇ ರಕ್ತಪಾತವಿಲ್ಲದೆ, ಮದ್ದುಗುಂಡುಗಳ ಕಾಳಗವಿಲ್ಲದೆ ಸತ್ಯ, ಅಹಿಂಸೆ, ಸತ್ಯಾಗ್ರಹದಂತಹ ಅಹಿಂಸಾತ್ಮಕ ಅಸ್ತ್ರಗಳ ಮೂಲಕ ಬ್ರಿಟಿಷರನ್ನು ದೇಶ ಬಿಟ್ಟು ಹೋಗುವಂತೆ ಮಾಡಿದ ವಿನೂತನ ಹೋರಾಟವಿದು ಎಂದರು.

ನಮಗೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧಿಜೀ, ಜವಾಹರ್ ಲಾಲ್ ನೆಹರು, ಸರ್ದಾರ್ ವಲ್ಲಭಾಯಿ ಪಟೇಲ್, ಗೋಪಾಲಕೃಷ್ಣ ಗೋಖಲೆ, ಲೋಕಮಾನ್ಯ ತಿಲಕ್, ನೇತಾಜಿ ಸುಭಾಷ್ ಚಂದ್ರಬೋಸ್, ಮೌಲಾನಾ ಅಬ್ದುಲ್ ಕಲಾಂ ಆಜಾದ್, ಭಗತ್ ಸಿಂಗ್ ಸೇರಿದಂತೆ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗಿಯಾದ ಸಮಸ್ತರಿಗೂ ಸಾಷ್ಟಾಂಗ ನಮಸ್ಕಾರಗಳು ಎಂದರು.

ಇದೆ ವೇಳೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆ ನಡೆದ ಪಥಸಂಚಲನದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪ್ರಥಮ ಸ್ಥಾನ, ಅಬಕಾರಿ ಇಲಾಖೆ ದ್ವಿತೀಯ ಸ್ಥಾನ, ಜಿಲ್ಲಾ ಗೃಹ ರಕ್ಷಕ ಪುರುಷ ದಳ ತೃತೀಯ ಸ್ಥಾನ ಪಡೆದಿರುತ್ತಾರೆ. ಶಾಲಾ ವಿಭಾಗದ ಎರಡನೇ ಪಟ್ಟಿಯಲ್ಲಿ ಆದರ್ಶ ಪ್ರೌಢಶಾಲೆ ಪ್ರಥಮ ಸ್ಥಾನ, ಪಿ.ಇ.ಎಸ್ ಪ್ರೌಢಶಾಲೆ ದ್ವಿತೀಯ ಸ್ಥಾನ, ಅರಕೇಶ್ವರ ನಗರ ಪ್ರೌಢಶಾಲೆ ತೃತೀಯ ಸ್ಥಾನ ಪಡೆದಿದ್ದಾರೆ.

ಎನ್.ಸಿ.ಸಿ ವಿಭಾಗದಲ್ಲಿ ಪಿ.ಇ.ಎಸ್ ಬಾಲಕರ ತಂಡ ಪ್ರಥಮ ಸ್ಥಾನ, ಸರ್ಕಾರಿ ಬಾಲಕರ ಕಾಲೇಜು ದ್ವಿತೀಯ ಸ್ಥಾನ, ಸರ್ಕಾರಿ ಮಹಿಳಾ ಕಾಲೇಜು ತೃತೀಯ ಸ್ಥಾನ ಹಾಗೂ ಶಾಲಾ ವಿಭಾಗದಲ್ಲಿ ಪ್ರಥಮ ಬಹುಮಾನ ಕಾರ್ಮೇಲ್ ಕಾನ್ವೆಂಟ್ ಪ್ರೌಢಶಾಲೆ, ಸೇಂಟ್ ಜೋಸೆಫ್ ಪ್ರೌಢಶಾಲೆ ದ್ವಿತೀಯ ಸ್ಥಾನ, ರೋಟರಿ ಪ್ರೌಢಶಾಲೆ ತೃತೀಯ ಸ್ಥಾನ ಪಡೆದಿರುತ್ತಾರೆ.

ಜಿಲ್ಲೆಯ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಂದ ಸಾಮೂಹಿಕ ಕವಾಯತು, ಕಾರ್ಮೆಲ್ ಕಾನ್ವೆಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ಭಾವೈಕ್ಯತೆ ಮೂಡಿಸುವುದು, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ ಮಕ್ಕಳಿಂದ ನೃತ್ಯ, ಗೀತಾಂಜಲಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಭಾರತೀಯ ಸಾಂಸ್ಕೃತಿಕ ವೈವಿಧ್ಯತೆ, ಸ್ಯಾಂಥೋಮ್ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ವೀರ ಸೇನಾನಿ ಸೇರಿದಂತೆ ಸಾಂಸ್ಕ್ರತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ವಿಧಾನಸಭಾ ಶಾಸಕರಾದ ಎಂ.ಶ್ರೀನಿವಾಸ್, ಲೋಕಸಭಾ ಸದಸ್ಯರಾದ ಸುಮಲತಾ ಅಂಬರೀಶ್, ನಗರಸಭೆ ಅಧ್ಯಕ್ಷರಾದ ಹೆಚ್.ಎಸ್ ಮಂಜು, ಉಪಾಧ್ಯಕ್ಷೆ ಇಷ್ರತ್ ಫಾತಿಮಾ, ಮುಡ ಅಧ್ಯಕರಾದ ಶ್ರೀನಿವಾಸ್, ಜಿಲ್ಲಾಧಿಕಾರಿ ಎಸ್.ಅಶ್ವತಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಜಿ.ಪಂ. ಸಿಇಒ ಶಾಂತ ಎಲ್.ಹುಲ್ಮನಿ,ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು, ಉಪವಿಭಾಗಾಧಿಕಾರಿ ಆರ್.ಐಶ್ವರ್ಯ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

Copyright © All rights reserved Newsnap | Newsever by AF themes.
error: Content is protected !!