February 20, 2026

Newsnap Kannada

The World at your finger tips!

nithyananda

ಕೈಲಾಸ ದೇಶದಲ್ಲಿರುವ ನಿತ್ಯಾನಂದ ಸ್ವಾಮಿ ವಿರುದ್ಧ ಜಾಮೀನುರಹಿತ ವಾರೆಂಟ್

Spread the love

ಬಿಡದಿಯ ಧ್ಯಾನಪೀಠ ತೊರೆದು ವಿದೇಶಕ್ಕೆ ಪರಾರಿಯಾಗಿರುವ ನಿತ್ಯಾನಂದ ಸ್ವಾಮಿ ತನ್ನದೇ ಆದ ಕೈಲಾಸ ದೇಶವನ್ನು ಕಟ್ಟಿಕೊಂಡಿರುವುದಾಗಿ ತಿಳಿಸಿದ್ದರು.

2010ರಲ್ಲಿ ನಿತ್ಯಾನಂದ ಸ್ವಾಮಿ ವಿರುದ್ಧ ಬಿಡದಿ ಠಾಣೆ ಪೊಲೀಸರು ಲೈಂಗಿಕ ಶೋಷಣೆ ಆರೋಪದ ದೂರು ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.

2019ರಲ್ಲಿ ನಿತ್ಯಾನಂದ ಸ್ವಾಮಿ ವಿದೇಶಕ್ಕೆ ಪರಾರಿಯಾದ ಬಳಿಕ ಈ ಪ್ರಕರಣದ ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ಈಗಾಗಲೇ ಹಲವು ಬಾರಿ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದ್ದು, ಈಗ ಮತ್ತೊಮ್ಮೆ ಜಾಮೀನು ರಹಿತ ವಾರೆಂಟನ್ನು ರಾಮನಗರದ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹೊರಡಿಸಿದೆ. ಅಲ್ಲದೆ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 23ಕ್ಕೆ ಮುಂದೂಡಲಾಗಿದೆ.

error: Content is protected !!