ಮಂಡ್ಯ ಮೂಲದ ಯುವತಿಯ ಮೇಲೆ ರಾಜ್ಯ ರಾಜಧಾನಿಯಲ್ಲಿ ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿದೆ. ಬೆಂಗಳೂರಿನಲ್ಲಿನ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ಸಂದರ್ಭ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ 3 ವರ್ಷಗಳ ಹಿಂದೆ ಮಂಡ್ಯ ಮೂಲದ ಯುವತಿಯನ್ನು ಪ್ರಿಯಕರನೇ ಬೆಂಗಳೂರಿಗೆ ಕರೆತಂದು ವೇಶ್ಯಾವಾಟಿಕೆ ಜಾಲಕ್ಕೆ ನೂಕಿದ್ದಾನೆ.
ಕೆಲಸ ಕೊಡಿಸುವುದಾಗಿ ನಂಬಿಸಿ, ಮಂಜುಳಾ ಎಂಬ ಮಹಿಳೆಯ ಸಂಪರ್ಕಕ್ಕೆ ಪ್ರಿಯಕರ ಬಿಟ್ಟಿದ್ದ. ಈ ವೇಳೆ ಮಂಜುಳಾ, ಯುವತಿಯನ್ನು ವೇಶ್ಯಾವಾಟಿಕೆ ಜಾಲಕ್ಕೆ ತಳ್ಳಿದ್ದಾಳೆ. ಮಾತ್ರವಲ್ಲದೇ ಆಕೆಯ ಮೇಲೆ ಹಲವರು ಮಂದಿ ಏಕಕಾಲಕ್ಕೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಸಂತ್ರಸ್ತ ಯುವತಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.
ವೇಶ್ಯಾವಾಟಿಕೆಗೆ ಶಿವಾನಂದ ಸರ್ಕಲ್ ಬಳಿ ಇರುವ ಸಾಯಿ ಲಾಡ್ಜ್ ಮಾಲೀಕ ಸಂತೋಷ್ ಕೂಡಾ ಬೆಂಬಲ ನೀಡುತ್ತಿದ್ದಾರೆ, ಆತ ಈ ದಂಧೆಗೆ ಗ್ರಾಹಕರನ್ನು ಹೋಟೆಲ್‌ಗೆ ಕಳುಹಿಸುತ್ತಿದ್ದ ಎನ್ನಲಾಗಿದೆ.
ಈ ಬಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಬಂಧ ಮಂಜುಳಾ, ಬ್ರಹ್ಮೇಂದ್ರ ಹಾಗೂ ಲಾಡ್ಜ್ ಮಾಲೀಕ ಸಂತೋಷ್‌ನನ್ನು ಪೊಲೀಸರು ಬಂಧಿಸಿದ್ದಾರೆ.
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
More Stories
ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ