ರಾಜ್ಯದಲ್ಲಿ ಅತ್ಯಂತ ಭ್ರಷ್ಟ ಸರ್ಕಾರ, ಇಂತಹ ಸರ್ಕಾರವನ್ನು ನಾನು ನೋಡಿಯೇ ಇಲ್ಲ. ಕೆಲವು ಕಡೆ ಶೇ.40ಕ್ಕಿಂತಲೂ ಹೆಚ್ಚು ಕಮಿಷನ್ಗೆ ಬೇಡಿಕೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಬಹಿರಂಗವಾಗಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕೆಂಪಣ್ಣ ಕಮಿಷನ್ನಲ್ಲಿ ಶಾಸಕ, ಸಚಿವರಿಗೆ ರ್ಯಾಂಕಿಂಗ್ ಕೊಡಕ್ಕಾಗಲ್ಲ. ಕರ್ನಾಟಕದಲ್ಲಿ ಎಲ್ಲಾ ಶಾಸಕರು, ಸಚಿವರು ನಂಬರ್ ಒನ್. ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲಿ ಎಂದು ಕೆಂಪಣ್ಣ ಗುಡುಗಿದ್ದಾರೆ.
ಮೋದಿಗೆ ಮತ್ತೆ ಪತ್ರ ಬರೆಯಲು ನಿರ್ಧಾರ
ಇಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರಿಂದ ಹಿಡಿದು ಸಚಿವರು, ಶಾಸಕರು ಪ್ರತಿಯೊಂದು ಇಲಾಖೆಯಲ್ಲಿಯೂ ಭ್ರಷ್ಟಾಚಾರ ಇದೆ. ಸರ್ಕಾರದ ಆಡಳಿತ ವ್ಯವಸ್ಥೆ ಹದಗೆಟ್ಟಿದೆ. ಈ ಬಗ್ಗೆ ಮತ್ತೊಮ್ಮೆ ಪ್ರಧಾನಿ ಮೋದಿಗೆ ಪತ್ರ ಬರೆಯುತ್ತೇನೆ. ಸಚಿವರು, ಶಾಸಕರು ಭ್ರಷ್ಟಾಚಾರದಲ್ಲಿ ನಂಬರ್ 1, 2 ಸ್ಥಾನದಲ್ಲಿದ್ದಾರೆ. ಗುತ್ತಿಗೆದಾರರಿಂದ ಕಾಮಗಾರಿ ಹಣದಲ್ಲಿ ಶೇಕಡಾ 40ರಷ್ಟು ಲಂಚ ಪಡೆಯುತ್ತಾರೆ ಎಂದು ನೇರವಾಗಿ ಆರೋಪ ಮಾಡಿದರು.ಇದನ್ನು ಓದಿ –ಬ್ಲ್ಯಾಕ್ಮೇಲ್ ನಿಂದ ಲೂಟಿಗಿಳಿದ ಖತರ್ನಾಕ್ ಗ್ಯಾಂಗ್ ಪೋಲಿಸ್ ಬಲೆಗೆ
ಗುತ್ತಿಗೆದಾರರ ಸಂಘದ ನಿಯೋಗ ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ಚರ್ಚೆ ನಡೆಸಿತು. ಸಿದ್ದರಾಮಯ್ಯಗೆ ನಾವು ಮಾಹಿತಿ ಕೊಟ್ಟಿದ್ದೇವೆ. ಸದನದಲ್ಲಿ ಅದನ್ನು ಪ್ರಸ್ತಾಪಿಸುತ್ತೇನೆ. ಆದರೆ ನಾವು ಯಾವುದೇ ದಾಖಲೆಗಳನ್ನು ಸಿದ್ದರಾಮಯ್ಯಗೆ ಕೊಟ್ಟಿಲ್ಲ. ನ್ಯಾಯಾಂಗ ತನಿಖೆ ಮಾಡಿದರೆ ಮಾತ್ರ ದಾಖಲೆ ಕೊಡುತ್ತೇವೆ ಎಂದು ಗುತ್ತಿಗೆದಾರರ ಸಂಘ ಹೇಳಿದೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ