ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದ ಇತ್ತೀಚಿನ ಗಲಭೆ ಪ್ರಕರಣದ ಆರೋಪಿ ಮಾಜಿ ಮೇಯರ್ ಆರ್. ಸಂಪತ್ ರಾಜ್ ತಲೆ ಮರೆಸಿ ಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೋವಿಡ್-19 ಗೆ ಚಿಕಿತ್ಸೆಗೆಂದು ಆಸ್ಪತ್ರೆಗೆ ಸೇರಿದ್ದ ಸಂಪತ್ ರಾಜ್, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಪರಾರಿ ಯಾಗಿದ್ದಾರೆ.
ಆಗಸ್ಟ್‌ನಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಸಂಪತ್ ರಾಜ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಹಾಯಕ ಪೊಲೀಸ್ ಆಯುಕ್ತ ವೇಣುಗೋಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದಾಗ ವಿಷಯ ತಿಳಿದಿದೆ.
‘ಹೌದು, ಅವರು ತಲೆಮರೆಸಿಕೊಂಡಿದ್ದಾರೆ. ನಾವು ಅವರನ್ನು ಹುಡುಕುತ್ತಿದ್ದೇವೆ’ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ವೇಣುಗೋಪಾಲ್ ತಿಳಿಸಿದ್ದಾರೆ.
ಸಂಪತ್ ರಾಜ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಮೊದಲು ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ವೇಣುಗೋಪಾಲ್ ಅಕ್ಟೋಬರ್ 7 ರಂದು ಆಸ್ಪತ್ರೆ ಅಧಿಕಾರಿಗಳಿಗೆ ನೋಟಿಸ್ ನೀಡಿದ್ದರು. ಆದರೆ, ಆಸ್ಪತ್ರೆ ಪೊಲೀಸರಿಗೆ ಮಾಹಿತಿ ನೀಡದೆ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಅದರ ಬೆನ್ನಲ್ಲೇ ಮತ್ತೊಂದು ನೋಟಿಸ್ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
More Stories
ಯೂಟ್ಯೂಬ್ ನೋಡಿ ಬೈಕ್ ಕಳವು ತರಬೇತಿ: 13 ಲಕ್ಷ ಮೌಲ್ಯದ 20 ಬೈಕ್ಗಳ ಕಳ್ಳತನ
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
ಸಿ.ಟಿ. ರವಿ ಮೇಲೆ ಹಲ್ಲೆ: ಕೊಲೆಗೆ ಸಂಚು ರೂಪಿಸಿದ್ದಾರೆಂದು ಆರೋಪ