ಹಾಂಗ್ ಕಾಂಗ್ ಗೆಲ್ಲಲು 193 ರನ್ ಗಳ ಬೃಹತ್ ಗುರಿಯನ್ನು ಭಾರತ ನೀಡಿತು. ಹಾಂಕ್ ಕಾಂಗ್ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 152 ರನ್ನು ಗಳಿಸಿ ಗೌರವಯುತ ಸೋಲು ಕಂಡರು
ಟಾಸ್ ಗೆದ್ದು ಭಾರತವನ್ನು ಬ್ಯಾಟಿಂಗ್ ಗೆ ಕಳುಹಿಸಿದ ಹಾಂಗ್ ಕಾಂಗ್ ನಾಯಕ ನಿಜಾಕತ್ ಖಾನ್ ಲೆಕ್ಕಾಚಾರವನ್ನು ಅಕ್ಷರಶಃ ಭಾರತೀಯ ಬ್ಯಾಟರ್ ಗಳು ಉಲ್ಟಾ ಮಾಡಿದರು.
ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಜೋಡಿ ಮೊದಲ ವಿಕೆಟ್ ಗೆ 38 ರನ್ ಗಳ ಜೊತೆಯಾಟವಾಡಿದರು. ಈ ಹಂತದಲ್ಲಿ 21 ರನ್ ಗಳಿಸಿದ್ದ ರೋಹಿತ್ ಶರ್ಮಾ ಆಯುಶ್ ಶುಕ್ಲಾ ಬೌಲಿಂಗ್ ನಲ್ಲಿ ಔಟಾದರು.
ಬಳಿಕ ರಾಹುಲ್ ಜೊತೆಗೂಡಿದ ಕೊಹ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಈ ಜೋಡಿ ಅರ್ಧಶತಕದ ಜೊತೆಯಾಟ ನೀಡಿ ಭಾರತಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿತು.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ