ನಾನು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷದಿಂದ ನನ್ನನ್ನು ಬಿಡುಗಡೆ ಮಾಡಿ ಎಂದು ಮನವಿ ಮಾಡಿ ಬಂದಿದ್ದೇನೆ. ಒಂದು ಪಕ್ಷ ಬಿಡಲು ಬಲವಾದ ಕಾರಣ, ಅದು ಪಕ್ಷದಿಂದ ಆಗಿರಬೇಕು ಇಲ್ಲವೇ ನನ್ನಿಂದ ಆಗಿರಬೇಕು. ಅದು ನನ್ನ ಕಡೆಯಿಂದ ಆದರೆ ಪಕ್ಷ ಸ್ಪಷ್ಟವಾಗಿ ಹೇಳಬೇಕು ಎಂದು ಮಾಜಿ ಸಂಸದ ಮುದ್ದಹನುಮೆಗೌಡ ಕಿಡಿಕಾರಿದ್ದಾರೆ.
ಕಾಂಗ್ರೆಸ್ ನಾಯಕರ ಭೇಟಿ ನಂತರ ಸುದ್ದಿಗಾರರ ಜೊತೆ ಮಾತನಾಡಿ 2023ಕ್ಕೆ ನಾನು ಕುಣಿಗಲ್ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿ ಆಗುವುದು ಖಚಿತ. ನಾನು ಕಾಂಗ್ರೆಸ್ ನಿಂದ ದೂರ ಸರಿದಿದ್ದೇನೆ ಸಾಂಕೇತಿಕವಾಗಿ ಭೇಟಿ ಮಾಡಬೇಕಿತ್ತು. ಹೀಗಾಗಿ ಭೇಟಿ ಮಾಡಿದ್ದೇನೆ. ಕಾಂಗ್ರೆಸ್ ನಿಂದ ದೂರ ಹೋಗಿದ್ದೇನೆ. ಇಂದು ಸಂಜೆ ಒಳಗೆ ಅಧಿಕೃತವಾಗಿ ರಾಜೀನಾಮೆ ಕೊಡ್ತೀನಿ ಎಂದು ಮುದ್ದಹನುಮೇಗೌಡ ಹೇಳಿದರು. ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
ಒಂದು ರಾಷ್ಟ್ರೀಯ ಪಕ್ಷ ಬಿಡಲು ಬಲವಾದ ಕಾರಣದಿಂದ ಇರಬೇಕು ತಾನೇ..? ಸಿಎಲ್‍ಪಿ ನಾಯಕ ಸಿದ್ದರಾಮಯ್ಯ ಮತ್ತು ಡಿಕೆಶಿ ಭೇಟಿ ಮಾಡಿ ನನ್ನ ಸ್ಪಷ್ಟ ನಿರ್ಧಾರ ತಿಳಿಸಿದ್ದೇನೆ. 1989ರಲ್ಲಿ ಕಾಂಗ್ರೆಸ್ ಬಿ ಫಾರಂ ಕೊಟ್ಟು ನಂತರ ಬೇರೆಯವರಿಗೆ ಕೊಟ್ಟಿದ್ರು. ಬಳಿಕ 2019ರಲ್ಲಿ ಸಂಸದ ಆಗಿದ್ದರೂ ನಿಲ್ಲಲು ಅವಕಾಶ ಕೊಡಲಿಲ್ಲ. ನಾಲ್ಕು ಬಾರಿ ಚುನಾವಣೆಗೆ ಸ್ಪರ್ಧೆ ಮಾಡುವುದನ್ನು ತಪ್ಪಿಸಲಾಗಿದೆ. ಕಾಂಗ್ರೆಸ್ ಪಕ್ಷ ಶಾಸಕ, ಸಂಸದರಾಗಿ ಆಯ್ಕೆಯಾಗಲು ಅವಕಾಶ ಕೊಟ್ರು ಎಂದರು.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ