ಮಂಡ್ಯದ ಕೆ.ಆರ್.ಪೇಟೆ ಪಟ್ಟಣ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ ತೀವ್ರ ಕುತೂಹಲ ಕೆರಳಿಸಿತ್ತು. ಇಂದು ಪಟ್ಟಣ ಪುರಸಭೆಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದರೂ ಫಲಿತಾಂಶಕ್ಕೆ ಮಾತ್ರ ಹೈಕೋರ್ಟ್ ನಿಂದ ತಡೆಯಾಜ್ಞೆ ನೀಡಿದೆ.
ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಇಬ್ಬರೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ಖಚಿತವಾದರು ಫಲಿತಾಂಶ ಮಾತ್ರ ಘೋಷಣೆಯಾಗದೆ ಮತ್ತಷ್ಟು ಕುತೂಹಲ ಮೂಡಿಸಿದೆ.
ಇಂದು ಕೆ.ಆರ್.ಪೇಟೆ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನ ಎಸ್ಟಿ ಸ್ಥಾನಕ್ಕೆ ಉಪಾಧ್ಯಕ್ಷ ಸ್ಥಾನ ಬಿಸಿಎಂ(ಎ)ಮಹಿಳೆಗೆ ಮೀಸಲಾಗಿತ್ತು. ಅದರಂತೆ ಇಂದು ಬಿಗಿ ಪೊಲೀಸ್ ಭದ್ರತೆಯಲ್ಲಿ ಅಧ್ಯಕ್ಷೆ ಸ್ಥಾನಕ್ಕೆ ಸಚಿವ ನಾರಾಯಣಗೌಡ ಬಣದಲ್ಲಿ ಗುರುತಿಸಿಕೊಂಡಿದ್ದ ಮಹಾದೇವಿ ಬಿಜೆಪಿ ಸದಸ್ಯರೊಂದಿಗೆ ಬಂದು ನಾಮಪತ್ರ ಸಲ್ಲಿಸಿದರು. ಇನ್ನು ಉಪಾಧ್ಯಕ್ಷ ಸ್ಥಾನಕ್ಕೆ ಗಾಯತ್ರಿ ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಸದಸ್ಯರೊಂದಿಗೆ ನಾಮಪತ್ರ ನಾಮಪತ್ರ ಸಲ್ಲಿಸಿದರು. ಎರಡು ಸ್ಥಾನಕ್ಕೆ ಇಬ್ಬರೇ ಮಾತ್ರವೇ ನಾಮಪತ್ರ ಸಲ್ಲಿಸಿ ಅವಿರೋಧ ಆಯ್ಕೆಯಾದರು.
ಕಾಂಗ್ರೆಸ್ ಪಕ್ಷದ ಪುರಸಭಾ ಸದಸ್ಯೆ ಪಂಕಜಾ ಹೈಕೋರ್ಟ್ ನಲ್ಲಿ ಮೀಸಲಾತಿ ಪ್ರಶ್ನಿಸಿ ಪ್ರಕರಣ ದಾಖಲಿಸಿರುವುದರಿಂದ ಫಲಿತಾಂಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಅಧಿಕೃತ ಫಲಿತಾಂಶ ಘೋಷಣೆಗೆ ಹೈಕೋರ್ಟ್ ತಡೆಯಾಜ್ಞೆ ಇರುವ ಕಾರಣ ಇನ್ನು ಒಂದು ತಿಂಗಳು ಕಾಯಬೇಕಿದೆ.
More Stories
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ
2025ರಿಂದ ಕ್ಯಾನ್ಸರ್ ಲಸಿಕೆ ಉಚಿತ ವಿತರಣೆ: ಮಹತ್ವದ ವೈದ್ಯಕೀಯ ಸಾಧನೆ
ವಿರೋಧ ಲೆಕ್ಕಿಸದ ಮೋದಿ ಸರ್ಕಾರ