ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುರುವಾರ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂತ್ರಸ್ತರ ಜೊತೆ ಮಾತುಕತೆ ನಡೆಸಿದರು.
ಮಳೆಯಿಂದ ಜಲಾವೃತವಾಗಿರುವ ಬೆಂಗಳೂರಿನ ಬೆಳ್ಳಂದೂರು ರಿಂಗ್ ರಸ್ತೆಯ ECO SPACE ಬಡಾವಣೆಗೆ ಭೇಟಿ ನೀಡಿದರು.
ಸ್ಥಳೀಯ ನಿವಾಸಿಗಳ ಜೊತೆ ಸಮಸ್ಯೆ ಆಲಿಸಿ, ಶಾಶ್ವತ ಪರಿಹಾರಕ್ಕಾಗಿ ಸರ್ಕಾರದೊಂದಿಗೆ ಮಾತುಕತೆ ನಡೆಸುವ ಭರವಸೆ ನೀಡಿದರು.
ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದು ಸೋಮವಾರ ಮತ್ತು ಮಂಗಳವಾರ ಮಳೆ ಜೋರಾಗಿತ್ತು. ಯಾವತ್ತೂ ಬೀಳದೇ ಇರೋ ಮಳೆ ಬಂದಿದೆ. ಹೀಗಾಗಿ ಅನೇಕ ಮನೆಗಳಿಗೆ ನೀರು ತುಂಬಿ ಬೋಟ್ನಲ್ಲಿ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ನಮ್ಮ ಕಾಲದಲ್ಲಿ ರಾಜಕಾಲುವೆ ಒತ್ತುವರಿ ತೆರವಿಗೆ ಕ್ರಮ ಕೈಗೊಂಡಿದ್ದೆವು. 1953 ಒತ್ತುವರಿ ಸ್ಥಳಗಳನ್ನು ಗುರುತಿಸಿದ್ದೆವು. ಅದರಲ್ಲಿ 1300 ಒತ್ತುವರಿ ತೆರವುಗೊಳಿಸಿದ್ದೆವು. 600 ಒತ್ತುವರಿ ಹಾಗೆಯೇ ಇತ್ತು. ಅದನ್ನು ತೆರವು ಮಾಡಿದ್ದರೆ ಹೀಗೆ ಆಗುತ್ತಿರಲಿಲ್ಲ ಎಂದರು.
ಮಂಡ್ಯದ ಶ್ರೀನಿಧಿ ಶೆಟ್ಟಿ ಹನಿಟ್ರ್ಯಾಫ್ ಪ್ರಕರಣ’ಕ್ಕೆ ಬಿಗ್ ಟ್ವಿಸ್ಟ್: ಶೆಟ್ಟಿಯ ಮುಖವಾಡ ಬಯಲು ಮಾಡಿದ ವಿಡಿಯೋ ?
ಅಕ್ರಮವಾಗಿ ಮನೆ ನಿರ್ಮಿಸಿರುವವರ ವಿರುದ್ಧ ಕ್ರಮ ಆಗಿದ್ದರೆ ಹೀಗೆ ಆಗುತ್ತಿರಲಿಲ್ಲ. ಈ ಹಿಂದಿನ ಸರ್ಕಾರವೇ ಇದಕ್ಕೆ ಕಾರಣ ಎಂದು ಸಿಎಂ ಹೇಳುತ್ತಾರೆ. ಅವರೇನು ಮಾಡಿದ್ದಾರೆ ಅಂತ ಹೇಳಬೇಕಾ? ಜವಾಬ್ದಾರಿಯಿಂದ ನುಣುಚಿಕೊಳ್ಳೋದು ಬಹಳ ಸುಲಭ. ಇದು ಉತ್ತರ ಅಲ್ಲ. ನಾವೇನು ಮಾಡಿದ್ದೇವೆ ಎಂದು ಜನರಿಗೆ ಹೇಳಬೇಕಲ್ವಾ? ಇವರು ಒತ್ತುವರಿ ತೆರವಿಗೂ ವಿರೋಧ ಮಾಡಿದ್ದರು. ಕೆಲಸ ಮಾಡದೇ ಇವರ ವೈಫಲ್ಯ ಮುಚ್ಚಿಕೊಳ್ಳಲು ನಮ್ಮ ಸರ್ಕಾರದ ಮೇಲೆ ಹೇಳೋದು. ಇಲ್ಲಿನ ಎಂಎಲ್ಎಷ್ಟು ವರ್ಷದಿಂದ ಇದ್ದಾರೆ ಎಂದು ಪ್ರಶ್ನಿಸಿದ್ದಾರೆ.
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
More Stories
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ