ಕೆರೆಯ ಬಳಿ ರೀಲ್ಸ್ ಮಾಡಲು ಹೋದ ಯುವತಿ ಕೆರೆಗೆ ಉರುಳಿ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗಂಗಾನಹಳ್ಳಿ ಗ್ರಾಮದ ಬಳಿ ಭಾನುವಾರ ಜರುಗಿದೆ.
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ನಿಗೂಢ ನಾಪತ್ತೆ – ಪ್ರಾಂಶುಪಾಲರ ಸಸ್ಪೆಂಡ್ ಗೆ ಡಿಸಿ ಕ್ರಮ ?
ಮೂಲತಃ ಶಿಡ್ಲಘಟ್ಟ ತಾಲೂಕಿನ ಗಾಜಿಲುವಾರುಪಲ್ಲಿ ಗ್ರಾಮದ ಎಂಎ ಪದವೀಧರೆ ಅಮೃತ(22) ಮೃತ ಯುವತಿ.
ಜಂಬಿಗೆ ಮರದಹಳ್ಳಿಯ ನೆಂಟರ ಮನೆಯ ಗೃಹಪ್ರವೇಶದ ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ಯುವತಿ ಅಮೃತ ಗಂಗಾನಹಳ್ಳಿ ಕೆರೆ. ಕೋಡಿ ಹರಿಯುತ್ತಿರುವ ವಿಚಾರ ತಿಳಿದು ಮತ್ತೋರ್ವ ಯುವತಿಯ ಜೊತೆ ಕೆರೆ ಬಳಿ ತೆರಳಿದ್ದಳು.
ಈ ವೇಳೆ ಜೊತೆಯಲ್ಲಿದ್ದ ಯುವತಿಗೆ ವೀಡಿಯೋ ಮಾಡಲು ಹೇಳಿ ಮೊಬೈಲ್ ನೀಡಿ ಕೆರೆಯ ಅಂಚಿನ ದಿಂಡಿನ ಮೇಲೆ ತೆರಳಿದ್ದಳು. ಆದರೆ ಈ ವೇಳೆ ಆಕಸ್ಮಿಕ ಕಾಲು ಜಾರಿ ಕೆರೆಗೆ ಅಮೃತಾ ಉರುಳಿಬಿದ್ದು ಸಾವನ್ನಪ್ಪಿದ್ದಾಳೆ.
ಗುಡಿಬಂಡೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮೃತದೇಹವನ್ನು ಗುಡಿಬಂಡೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.
- ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ