PSI ನೇಮಕಾತಿ ಹುದ್ದೆಗಾಗಿ ಕನಕಗಿರಿ ಬಿಜೆಪಿ ಶಾಸಕ 15 ಲಕ್ಷ ರು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಸೋಮವಾರ ಕಾಂಗ್ರೆಸ್ ಶಾಸಕರು ಬೆಂಗಳೂರಿನಲ್ಲಿ ವಿಡಿಯೋ ಬಿಡುಗಡೆ ಮಾಡಿದರು.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಶಾಸಕ ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಗಡಗಿ, ಪಿಎಸ್‌ಐ ನೇಮಕಾತಿಗಾಗಿ ಶಾಸಕ ಬಸವರಾಜ್ ದಡೆಸೂಗುರು ಅಭ್ಯರ್ಥಿಯ ತಂದೆಯಿಂದ 15 ಲಕ್ಷ ಹಣ ಪಡೆದಿರುವ ಬಗ್ಗೆ ವಿಡಿಯೋ ಬಿಡುಗಡೆ ಮಾಡಿರುವುದಾಗಿ ಹೇಳಿದರು.
ಈ ವೇಳೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಸೆ.5ರಂದು ಶಾಸಕ ದಡೇಸೂಗುರು ಹಾಗೂ ಪಿಎಸ್‌ಐ ಅಭ್ಯರ್ಥಿಯ ತಂದೆ ಪರಸಪ್ಪ ಅವರ ಆಡಿಯೋ ವೈರಲ್ ಆಗಿತ್ತು. ಬಳಿಕ ಸೆ.6ರಂದು ಶಾಸಕರು ವೈರಲ್ ಆದ ಆಡಿಯೋ ನನ್ನದೇ ಎಂದು ಸ್ಪಷ್ಟೀಕರಣ ನೀಡಿದ್ದರು.
ಪೋಕ್ಸೋ ಪ್ರಕರಣ : ಮುರುಘಾ ಸ್ವಾಮಿಯ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
ಈ ಘಟನೆ ನಡೆದು 1 ವಾರವಾದರೂ ಸರ್ಕಾರ ಇನ್ನೂ ಶಾಸಕರ ವಿರುದ್ಧ ಕ್ರಮ ಕೈಗೊಂಡಿಲ್ಲ. ಬಳಿಕ ಮಾತನಾಡಿದ್ದ ಶಾಸಕರೇ ನಾನವನಲ್ಲ ಎಂದು ಹೇಳಿದ್ದರು. ಈಗ ಶಾಸಕರು ಹಣ ಪಡೆದ ಬಗ್ಗೆ ವಿಡಿಯೋ ಬಿಡುಗಡೆ ಮಾಡಲಾಗಿದೆ. ಶಾಸಕರ ಭವನದಲ್ಲಿಯೇ ಕುಳಿತು ಪರಸಪ್ಪ ಅವರಿಂದ ಶಾಸಕರು ಹಣ ಪಡೆದಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
- ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ