December 23, 2024

Newsnap Kannada

The World at your finger tips!

muniratna 1

ಕ್ಷಮೆ ಕೇಳದ ಕೆಂಪಣ್ಣ ಸೇರಿ 18 ಮಂದಿ ಮೇಲೆ 50 ಕೋಟಿ ಮಾನನಷ್ಟ ಪ್ರಕರಣ ದಾಖಲು – ಮುನಿರತ್ನ

Spread the love

ತಮ್ಮ ಮೇಲೆ ಶೇ.40 ಕಮೀಷನ್ ಆರೋಪ ಮಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮತ್ತು 18 ಮಂದಿ ವಿರುದ್ಧ ಕ್ರಿಮಿನಲ್‌ ಮಾನ ನಷ್ಟ ಪ್ರಕರಣ ಹೂಡಿದ್ದೇನೆ. ಸೆ.21ಕ್ಕೆ ಕೋರ್ಟ್‌ನಲ್ಲಿ ನನ್ನ ಹೇಳಿಕೆ ದಾಖಲಾಗುತ್ತದೆ. ನಂತರ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗುತ್ತದೆ ಎಂದು ತೋಟಗಾರಿಕಾ ಸಚಿವ ಮುನಿರತ್ ಹೇಳಿದರು.

ನನ್ನ ವಿರುದ್ಧ ಮಾಡಿದ ಆರೋಪವು ಸೇರಿದಂತೆ 40% ಕಮೀಷನ್ ಆರೋಪಕ್ಕೆ ದಾಖಲೆ ಕೊಡಿ ಎಂದು ದಾವೆ ಹೂಡಿದ್ದೇನೆ. 50 ಕೋಟಿ ಮಾನನಷ್ಟ ಪ್ರಕರಣವನ್ನು 4 ತಿಂಗಳ ಒಳಗಡೆ ಇತ್ಯರ್ಥ ಮಾಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡುತ್ತಿದ್ದೇವೆ.

ಸುದ್ದಿಗಾರರ ಜೊತೆ ಮಾತನಾಡಿದ ಮುನಿರತ್ನ ಅವರು, ಕೆಂಪಣ್ಣ ನನ್ನ ಮೇಲೆ ಆಧಾರ ರಹಿತ ಆರೋಪ ಮಾಡಿದ್ದಾರೆ. ಆಧಾರ ರಹಿತ ಆರೋಪ ಮಾಡಿದ್ದಕ್ಕೆ ನಾನು 7 ದಿನಗಳ ಒಳಗಡೆ ಕ್ಷಮೆ ಕೇಳುವಂತೆ ಸೂಚಿಸಿದ್ದೆ. ಆದರೆ ಅವರು ಕ್ಷಮೆ ಕೇಳದ ಹಿನ್ನೆಲೆಯಲ್ಲಿ ಮಾನನಷ್ಟ ಕೇಸ್‌ ಹೂಡಿದ್ದೇನೆ. ಚುನಾವಣೆ ನಡೆಯುವ ಮುನ್ನ ಇತ್ಯರ್ಥ ಆಗಬೇಕಾಗಿರುವುದರಿಂದ 4 ತಿಂಗಳ ಒಳಗಡೆ ಪ್ರಕರಣವನ್ನು ಮುಗಿಸುವಂತೆ ಸೆಕ್ಷನ್ 227 ಅನ್ವಯ ರಿಟ್ ಅರ್ಜಿ ಹಾಕುತ್ತಿದ್ದೇವೆ ಎಂದು ಹೇಳಿದರು. ಸಂಸದೆ ಆಣೆ – ಪ್ರಮಾಣದ ಸವಾಲು ಸ್ವೀಕರಿಸಿದ ಶಾಸಕ ಪುಟ್ಟರಾಜು: ದಿನಾಂಕ, ಸಮಯ ನಿಗದಿ ಮಾಡಿ – ಪ್ರತಿ ಸವಾಲು

ಪ್ರಕರಣದ ಆರೋಪಿಗಳು ಯಾವುದೇ ಆಸ್ತಿ ಪರಭಾರೆ ಮಾಡುವಂತಿಲ್ಲ. ಯಾವುದೇ ಇಲಾಖೆಯಲ್ಲಿ ಯಾವುದೇ ಕಾಮಗಾರಿ ಮಾಡಿದ್ದರೆ ಅದರ ಬಿಲ್ ಬಿಡುಗಡೆ ಆಗಬಾರದು. ಅವರ ಕುಟುಂಬದಲ್ಲಿ ಯಾವುದೇ ವಿಲ್ ಮಾಡುವಂತಿಲ್ಲ. ಎಲ್ಲದಕ್ಕೂ ಇನ್‌ಜಂಕ್ಷನ್‌ ಆರ್ಡರ್‌ ತರಲಾಗಿದ್ದು ಎಲ್ಲಾ 18 ಮಂದಿಗೂ ಇದು ಅನ್ವಯವಾಗಲಿದೆ ಎಂದರು.

Copyright © All rights reserved Newsnap | Newsever by AF themes.
error: Content is protected !!