ಪೇ ಸಿಎಂ ಅಭಿಯಾನದ ಭಾಗವಾಗಿ ಬೆಂಗಳೂರಿನ ಹಲವು ಕಡೆ ಪೇ ಸಿಎಂ ಪೋಸ್ಟರ್ ಅಂಟಿಸಿದ್ದ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಪದಾಧಿಕಾರಿಗಳಿಗೆ ಪ್ರಕರಣ ಸಂಬಂಧ ವಿಚಾರಣೆಗಾಗಿ ಅ 1ರಂದು ಹಾಜರಾಗುವಂತೆ ಬೆಂಗಳೂರಿನ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
‘ಪೇ ಸಿಎಂ ಪೋಸ್ಟರ್ ಪ್ರಕರಣ’ ವನ್ನು ಸಿಸಿಬಿಗೆ ವರ್ಗಾಯಿಸಿ ಬೆಂಗಳೂರು ನಗರ ಕಮೀಷನರ್ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ ನಂತರ ಈ ಕ್ರಮ ಜರುಗಿಸಲಾಗಿದೆ. ದಸರಾ ಹಬ್ಬದ ಆಚರಣೆಯ ಮಹತ್ವ
40% ಕಮಿಷನ್ ಆರೋಪ ಮುಂದಿಟ್ಟುಕೊಂಡು ಪೇ ಸಿಎಂ ಎಂದು ಪೇಟಿಎಂ ಮಾದರಿಯಲ್ಲಿ ರಚಿಸಲಾಗಿರುವ ಪೋಸ್ಟರ್ ನಗರದ ಹಲವು ಕಡೆಗಳಲ್ಲಿ ಹಾಕಲಾಗಿತ್ತು. ಹಾಗೂ ಈ ಸಂಬಂಧ ಹಲವರನ್ನು ಕೂಡ ಬಂಧಿಸಲಾಗಿತ್ತು.
ಪೇ ಸಿಎಂ ಪೋಸ್ಟರ್ ಅಂಟಿಸಿದ್ದ ಸ್ಥಳಗಳಲ್ಲಿನ ಸಿಸಿಟಿವಿ ದೃಶ್ಯಗಳನ್ನು ಕಲೆಹಾಕಿ ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಬಿ ಆರ್ ನಾಯ್ಡು, ಸಂಜಯ್, ಗಗನ್, ಪವನ್, ವಿಶ್ವನಾಥ್ ಸೇರಿ ಹಲವರಿಗೆ ಅ. 1 ರಂದು ಸಿಸಿಬಿ ಕಚೇರಿಯಲ್ಲಿ ಹಾಜರಾಗುವಂತೆ ಸೂಚಿಸಿ ನೋಟಿಸ್ ಜಾರಿ ಮಾಡಿದ್ದಾರೆ.
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
- ಎಳ್ಳು ಬೆಲ್ಲ ತಿಂದು ಅರೋಗ್ಯ ಹೆಚ್ಚಿಸಿಕೊಳ್ಳಿ
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
More Stories
ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?