ಗೃಹ, ವಾಹನ ಸಾಲ ಬಡ್ಡಿ ದರ ಮತ್ತೆಏರಿಕೆ ಆಗಲಿದೆ ಸತತ 4ನೇ ಬಾರಿಗೆ RBI ರಾಪೋ ದರ ಏರಿಕೆ ಮಾಡಲಾಗಿದೆ, ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರದಿಂದಲೇ ತಕ್ಷಣ ಜಾರಿಗೆ ಬರುವಂತೆ ರೆಪೊ ದರವನ್ನು 50 ಬೇಸಿಸ್ ಪಾಯಿಂಟ್ (ಬಿಪಿಎಸ್) ಹೆಚ್ಚಿಸಿದೆ.
ಈ ನಿರ್ಧಾರದಿಂದ ರೆಪೋ ದರ ಶೇ. 5.9ಕ್ಕೆ ಏರಿಕೆಯಾದಂತಾಗಿದೆ. ಗವರ್ನರ್ ಶಕ್ತಿಕಾಂತ ದಾಸ್ ನೇತೃತ್ವದ ಆರು ಸದಸ್ಯರ ಹಣಕಾಸು ನೀತಿ ಸಮಿತಿಯು ಮೂರು ದಿನಗಳ ಸಭೆ ನಡೆಸಿ ರೆಪೋ ದರವನ್ನು ಏರಿಸುವ ನಿರ್ಧಾರವನ್ನು ತೆಗೆದುಕೊಂಡಿದೆ.
ಆಗಸ್ಟ್‌ನಲ್ಲಿ 50 ಬೇಸಿಸ್ ಪಾಯಿಂಟ್ ಏರಿಕೆ ಮಾಡಿದ್ದರಿಂದ ರೆಪೋ ದರ ಶೇ.5.4ಕ್ಕೆ ಏರಿತ್ತು. ರೆಪೋ ದರ ಏರಿಕೆಯಾದ ಕಾರಣ ಗೃಹ, ವಾಹನ ಸಾಲದ ಬಡ್ಡಿ ದರ ಏರಿಕೆಯಾಗಲಿದೆ. ಬಿಬಿಎಂಪಿ ಚುನಾವಣೆ : ಮತದಾರರ ಅಂತಿಮ ಪಟ್ಟಿ ಪ್ರಕಟ ; 79 ಲಕ್ಷ ಮತದಾರರು
ಈ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ(GDP) ಶೇ.7.2 ರಷ್ಟು ಬೆಳವಣಿಗೆಯಾಗಲಿದೆ ಎಂದು ಆರ್‌ಬಿಐ ಅಂದಾಜಿಸಿತ್ತು. ಆದರೆ ಈಗ ಶೇ.7 ರಷ್ಟು ಅಭಿವೃದ್ಧಿಯಾಗಬಹುದು ಎಂದು ಅಂದಾಜಿಸಿದೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ