December 22, 2024

Newsnap Kannada

The World at your finger tips!

sidda

ಜಿಎಸ್‍ಟಿ ಒಪ್ಪಂದ ದಂತೆ ಕೇಂದ್ರ ನಡೆದುಕೊಂಡಿಲ್ಲ ರಾಜ್ಯಕ್ಕೆ ದ್ರೋಹ ಬಗೆದಿದೆ-ಸಿದ್ದರಾಮಯ್ಯ

Spread the love

ಜಿ.ಎಸ್.ಟಿ ಪರಿಹಾರ ನಿರಾಕರಿಸುವ ಮೂಲಕ ರಾಜ್ಯಕ್ಕೆ ಕೇಂದ್ರ ಸರ್ಕಾರ ದೊಡ್ಡ ದ್ರೋಹ ಎಸಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶನಿವಾರ ತರಾಟೆಗೆ ತೆಗೆದುಕೊಂಡರು.
ತಮ್ಮನ್ಮು ಭೇಟಿಯಾದ ಸುದ್ದಿಗಾರರ ಜೊತೆ ಮಾತನಾಡಿ
ಕೊರೊನಾ ರೋಗದಿಂದಾಗಿ ದೇಶದ ಎಲ್ಲಾ ರಾಜ್ಯಗಳು ಆರ್ಥಿಕ ದುಸ್ಥಿತಿಯನ್ನು ಎದುರಿಸುತ್ತಿವೆ. ಸರ್ಕಾರಿ ನೌಕರರಿಗೆ ಸಂಬಳ ನೀಡುವುದು ಕಷ್ಟವೆನ್ನುವ ಪರಿಸ್ಥಿತಿ ಇದೆ. ಜಿ.ಎಸ್.ಟಿ ಜಾರಿಗೆ ತರುವ ಸಂದರ್ಭದಲ್ಲಿ ಜಿ.ಎಸ್.ಟಿ ಕೌನ್ಸಿಲ್ ನಲ್ಲಿ ಒಂದು ಒಪ್ಪಂದವಾಗಿತ್ತು, ಅದರಂತೆ ಜಿ.ಎಸ್.ಟಿ ಸಂಗ್ರಹದಲ್ಲಿ ನಷ್ಟವಾದರೆ ಅದನ್ನು ಕೇಂದ್ರ ಸರ್ಕಾರ ಭರಿಸಿಕೊಡಬೇಕು ಹಾಗೂ ಮುಂದಿನ 5 ವರ್ಷಗಳವರೆಗೆ ಕೇಂದ್ರ ಸರ್ಕಾರ ಸಂಪೂರ್ಣ ಜವಾಬ್ದಾರಿಯಾಗಿರಬೇಕು ಎಂದಿತ್ತು.
ಒಪ್ಪಂದದ ಪ್ರಕಾರ ನಡೆದಕೊಳ್ಳಬೇಕಾಗಿರುವುದು ನರೇಂದ್ರ ಮೋದಿಯವರ ಸರ್ಕಾರದ ಜವಾಬ್ದಾರಿ ಎಂದು ಹೇಳಿದರು.
14% ಜಿ.ಎಸ್.ಟಿ ಖೋತಾ ಆಗಲಿದೆ, ಅದನ್ನು ಮುಂದಿನ 5 ವರ್ಷಗಳವರೆಗೆ ತುಂಬಿಕೊಡಬೇಕು ಎಂದು ಒಪ್ಪಂದವಾಗಿತ್ತು. ಆಗ ನಮ್ಮ ಸರ್ಕಾರ ಆಡಳಿತದಲ್ಲಿತ್ತು. ಆ ನಷ್ಟವನ್ನು ಪರಿಹಾರದ ರೂಪದಲ್ಲಿ ರಾಜ್ಯಗಳಿಗೆ ಕೇಂದ್ರ ಸರ್ಕಾರ ತುಂಬಿಕೊಡಬೇಕಾಗಿತ್ತು.
ಆದರೆ ಈಗ ನಿರ್ಮಲಾ ಸೀತಾರಾಮನ್ ಅವರು ಈಗ ಕೊರೊನಾ ಬಂದಿದೆ, ಇದನ್ನು ಯಾರೂ ಊಹಿಸಿರಲಿಲ್ಲ, ಇದು ದೇವರ ಆಟ, ಸುಮಾರು 3 ಲಕ್ಷ ಕೋಟಿ ರೂಪಾಯಿಗಳಷ್ಟು ನಷ್ಟ ಉಂಟಾಗಿದೆ. ಸೆಸ್ ಇಂದ 65 ಸಾವಿರ ಕೋಟಿ ಬರುತ್ತೆ, ಉಳಿದ 2.65 ಲಕ್ಷ ಕೋಟಿ ನಷ್ಟ ಆಗುತ್ತಿರುವುದರಿಂದ ನಾವು ನಷ್ಟ ತುಂಬಿಕೊಡಲು ಸಾಧ್ಯವಿಲ್ಲ ಎಂದು ಹೇಳಿ ಕೈ ತೊಳೆದುಕೊಂಡರೆ ಒಪ್ಪುವ ಸಂಗತಿ ಅಲ್ಲ ಎಂದರು.
ರಾಜ್ಯಗಳಿಗೆ ನೀವು ರಿಸರ್ವ್ ಬ್ಯಾಂಕ್ ಗಳಿಂದ ಸಾಲ ಪಡೆದು ತಿರಿಸಿಕೊಳ್ಳಿ ಎಂದು ಕೇಂದ್ರ ವಿತ್ತ ಸಚಿವರು ಹೇಳಿದರು, ಇದರ ಬದಲು ಕೇಂದ್ರವೇ ಏಕೆ ರಿಸರ್ವ್ ಬ್ಯಾಂಕಿನಿಂದ ಸಾಲ ಪಡೆದು ರಾಜ್ಯಗಳಿಗೆ ನೀಡಬಾರದು? ಕೇಂದ್ರ ಸರ್ಕಾರ ತನ್ನ ಜವಾಬ್ದಾರಿಯನ್ನು ರಾಜ್ಯಗಳ ಮೇಲೆ ಹಾಕುತ್ತಿರುವುದು ಏಕೆ? ಒಪ್ಪಂದದ ಪ್ರಕಾರ ನಷ್ಟ ತುಂಬಿಕೊಡಬೇಕಾಗಿರುವುದು ನಿಮ್ಮ ಕರ್ತವ್ಯವಲ್ಲವೇ? ಕೇಂದ್ರ ಸರ್ಕಾರ ರಾಜ್ಯಗಳ ಮೇಲೆ ಒತ್ತಡ ಹಾಕುತ್ತಿರುವ ನೀತಿಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ಇದೇ ವೇಳೆ ರಾಜ್ಯಕ್ಕೆ ಸಂವಿಧಾನಬದ್ಧವಾಗಿ ನೀಡಬೇಕಾಗಿರುವ ಜಿ.ಎಸ್.ಟಿ ಪರಿಹಾರವನ್ನು ನೀಡಿ ಎಂದು ಒತ್ತಾಯಿಸುವುದಾಗಿ ತಿಳಿಸಿದರು.

25 ಮಂದಿ ಸಂಸದರು ಏನು ಮಾಡುತ್ತಿದ್ದಾರೆ?

ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರ್ಕಾರವಿದ್ದರೆ ಸ್ವರ್ಗ ಸೃಷ್ಟಿ ಮಾಡುತ್ತೇವೆ ಎಂದು ಹೇಳಿದ್ದನ್ನು ನಂಬಿದ ರಾಜ್ಯದ ಜನರು 25 ಜನ ಸಂಸದರನ್ನು ಗೆಲ್ಲಿಸಿಕೊಟ್ಟಿದ್ದಾರೆ, ಉಪಚುನಾವಣೆಯಲ್ಲಿ ನಿಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ, ಜನರು ನಿಮ್ಮ ಮೇಲಿಟ್ಟಿರುವ ನಂಬಿಕೆಗೆ ಈಗ ನೀವು ಮಾಡುತ್ತಿರುವುದು ದ್ರೋಹವಲ್ಲವೇ? ರಾಜ್ಯಗಳನ್ನು ಕೇಂದ್ರ ದಿವಾಳಿಯಾಗುವತ್ತ ಕೊಂಡೊಯ್ಯುತ್ತಿದೆ. ಹಾಗಾಗಿ ಕೇಂದ್ರದ ಈ ಸಲಹೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸುತ್ತೇನೆ ಎಂದರು
ರಾಜ್ಯ ಸರ್ಕಾರಕ್ಕೆ ಧಮ್ ಇದ್ದರೆ ನೀವೇ ಸಾಲ ತೆಗೆದುಕೊಂಡು ನಮಗೆ ಜಿ.ಎಸ್.ಟಿ ಪರಿಹಾರ ಕೊಡಿ ಎಂದು ಕೇಳಲಿ ಮತ್ತು ಸರ್ವ ಪಕ್ಷ ನಿಯೋಗ ಕೊಂಡೊಯ್ದು ಕೇಂದ್ರದ ಮೇಲೆ ಒತ್ತಡ ಹೇರಲಿ. ಇದರ ಜೊತೆಗೆ 15ನೇ ಹಣಕಾಸು ಆಯೋಗದಿಂದ ಕೂಡ ನಮಗೆ ಅನ್ಯಾಯವಾಗಿದೆ, ಅದರ ಜೊತೆಗೆ ಜಿ.ಎಸ್.ಟಿ ಪರಿಹಾರವನ್ನು ಕೊಡಲ್ಲ ಎಂದರೆ ಹೇಗೆ?
ಜಿ.ಡಿ.ಪಿ ನೆಲಕಚ್ಚಿದೆ, ನಿರುದ್ಯೋಗ ಪ್ರಮಾಣ ಏರಿಕೆಯಾಗಿದೆ ಹೀಗಿರುವಾಗ ಮತ್ತೆ ರಾಜ್ಯ ಸರ್ಕಾರ ಸಂಬಳ ನೀಡಲು ಸಾಲ ಪಡೆದುಕೊಂಡರೆ ಅಭಿವೃದ್ಧಿ ಕಾರ್ಯಗಳು ಆಗುವುದಿಲ್ಲ. ನಮ್ಮ ಆಡಳಿತಾವಧಿಯಲ್ಲಿ ಆರ್ಥಿಕ ಶಿಸ್ತು ಅತ್ಯುತ್ತಮವಾಗಿ ನಿರ್ವಹಣೆಯಾಗಿತ್ತು. ಸಾಲದ ಪ್ರಮಾಣ ಜಿ.ಡಿ.ಪಿ 25% ಗಿಂತಲೂ ಕಡಿಮೆಯಿತ್ತು. ಈಗ ಸಾಲ ಅನಿಯಂತ್ರಿತವಾಗಿ ಜಾಸ್ತಿಯಾಗುವುದರಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿ, ಅಭಿವೃದ್ಧಿಯಲ್ಲಿ 10 ವರ್ಷಗಳಷ್ಟು ಹಿಂದಕ್ಕೆ ಹೋಗಲಿದೆ.
ರಾಜ್ಯದ ಹಿತದೃಷ್ಟಿಯಿಂದ ಕೇಂದ್ರದ ಮೇಲೆ ಒತ್ತಡ ಹೇರುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕು. ರಾಜ್ಯಗಳಿಗೆ ನೀವೇ ಸಾಲ ತೆಗೆದುಕೊಳ್ಳಿ ಎಂದು ಹೇಳುವುದೇ ವಿಪರ್ಯಾಸ ಎಂದರು.
ಬಿಜೆ ಪಿಯೇತರ ರಾಜ್ಯ ಸರ್ಕಾರಗಳು ಕೇಂದ್ರದ ಈ ನೀತಿಯನ್ನು ವಿರೋಧ ಮಾಡಿವೆ. ಆದರೆ ನಿರ್ಮಲಾ ಸೀತಾರಾಮನ್ ಅವರು ಇದನ್ನು ದೇವರ ಆಟ ಎಂದು ಕೈಚೆಲ್ಲಿದ್ದಾರೆ.
ಪ್ರವಾಹ, ಸರ್ಕಾರ ಎಡವಿದೆ :
ಈ ವರ್ಷವೂ ಪ್ರವಾಹ ಬಂದಿದ್ದು 56 ತಾಲೂಕುಗಳ 1000 ಹಳ್ಳಿಗಳು ಪ್ರವಾಹದಿಂದ ಬಾಧಿಸಲ್ಪಟ್ಟಿದೆ. ಸುಮಾರು 1 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ, ಮನೆಗಳು ಕುಸಿದುಬಿದ್ದಿವೆ, ಜಾನುವಾರುಗಳು ಸಾವಿಗೀಡಾಗಿವೆ. ರಾಜ್ಯ ಸರ್ಕಾರವೇ ಸುಮಾರು 4 ಸಾವಿರ ಕೋಟಿ ನಷ್ಟವಾಗಿದೆ ಎಂದಿದೆ. ಈ ಹಿಂದೆಯೂ ಸರಿಯಾಗಿ ಪರಿಹಾರ ಕೊಟ್ಟಿಲ್ಲ. 35,000 ಕೋಟಿ ಪರಿಹಾರ ಕೇಳಿದ್ದರೆ ಬರೀ 1800 ಕೋಟಿ ಪರಿಹಾರ ನೀಡಲಾಗಿದೆ. ಇನ್ನು ಮನೆ ಕಳೆದುಕೊಂಡವರಿಗೆ ಮನೆ ಕಟ್ಟಿಕೊಟ್ಟಿಲ್ಲ, ಹಳ್ಳಿಗಳ ಸ್ಥಳಾಂತರವಾಗಿಲ್ಲ, ಶಾಲೆಗಳ ಪುನರ್ ನಿರ್ಮಾಣ ಕಾರ್ಯವೂ ಆಗಿಲ್ಲ,
ಮತ್ತೆ ಈ ವರ್ಷವೂ ಪ್ರವಾಹ ಬಂದಿದೆ. ಯಡಿಯೂರಪ್ಪನವರು ಹೆಲಿಕಾಪ್ಟರ್ ಮೂಲಕ ಸರ್ವೇ ಮಾಡಿದರು, ಆದರೆ ಸರ್ಕಾರದ ಬೇರೆ ಮಂತ್ರಿಗಳು ಜನರ ಬಳಿಗೆ ಹೋಗಿ ಅವರ ಕಷ್ಟ ಆಲಿಸಬೇಕೋ ಬೇಡವೋ? ಸಚಿವರಾದ ಅಶೋಕ್ ಅವರು ಕೇಂದ್ರದಿಂದ ಪರಿಹಾರ ಕೇಳಿದ್ದೇವೆ, ಅವರ ತಂಡ ಬಂದು ಸರ್ವೇ ಮಾಡಿ ಪರಿಹಾರ ನೀಡುತ್ತದೆ ಎನ್ನುತ್ತಾರೆ, ಆದರೆ ಅಧಿಕಾರಗಳ ಮಾತೇ ಬೇರೆ. ಇವರು ಕೇಂದ್ರ ವಿತ್ತ ಸಚಿವರನ್ನು ಭೇಟಿ ಮಾಡಿ ಮನವಿ ಕೊಟ್ಟು, ಪ್ರಧಾನಿಗಳ ಮನವೊಲಿಕೆ ಮಾಡಿ ಪರಿಹಾರದ ಹಣ ಸಿಗುವವರೆಗೂ ಹಿಡಿದ ಕಾರ್ಯದಿಂದ ಹಿಂದೆ ಸರಿಯಬಾರದು. ನಮ್ಮ ಸರ್ಕಾರವಿದ್ದಾಗ ಪದೇ ಪದೇ ಪ್ರಧಾನಿಗಳನ್ನು ಭೇಟಿ ಮಾಡಿ ಮನವಿ ಕೊಟ್ಟು ಪರಿಹಾರಕ್ಕಾಗಿ ಆಗ್ರಹಿಸುತ್ತಿದ್ದೆವು, ಆದರೆ ಇವರು ಪ್ರಧಾನಿಗಳನ್ನು ಭೇಟಿ ಮಾಡಲು ಹೆದರುತ್ತಾರೆ, ಇದೊಂದು ಮಹಾ ಪುಕ್ಕಲು ಸರ್ಕಾರ.
ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವುದರಲ್ಲಿ ಈ ಸರ್ಕಾರ ಎಡವಿದೆ. ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳ ಸರ್ವೇ ನಡೆಸಿ, ನಷ್ಟದ ಪ್ರಮಾಣದ ರಿಪೋರ್ಟ್ ತರಿಸಿಕೊಂಡು ಪರಿಹಾರ ನೀಡಬೇಕು ಎಂದು ಒತ್ತಾಯ ಮಾಡುತ್ತೇನೆ. ಈ ವಿಚಾರವನ್ನು ಅಧಿವೇಶನದಲ್ಲಿ ಪ್ರಶ್ನಿಸಿದರೆ ಸರಿಯಾಗಿ ಉತ್ತರ ನೀಡಲ್ಲ. ಕಳೆದ ಬಾರಿ ಹೀಗೆ ಆಯಿತ
ರಾಯಣ್ಣ ಪ್ರತಿಮೆ, ವಿವಾದವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇಂದು ತಮ್ಮ ನಿವಾಸದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಮಾಧ್ಯಮ ಪ್ರತಿನಿಧಿಗಳಿಗೆ ಅವರು ಹೇಳಿದ್ದಿಷ್ಟು :
ಸಂಪೂರ್ಣ ಗುಣಮುಖನಾಗಿದ್ದೇನೆ :
ಕೊರೊನಾ ಸೋಂಕಿಗೆ ಒಳಗಾಗಿದ್ದ ನಾನು ಇದೀಗ ಸಂಪೂರ್ಣ ಗುಣಮುಖನಾಗಿದ್ದೇನೆ. ಕೊರೊನಾ ವಾಸಿಯಾಗದ ಕಾಯಿಲೆ ಏನಲ್ಲ. ಆದರೆ, ಮುಂಜಾಗ್ರತೆ ವಹಿಸುವುದು ಅವಶ್ಯ. ಮಾಸ್ಕ್ ಮತ್ತು ಸ್ಯಾನಿಟೈಸನ್ ಕಡ್ಡಾಯವಾಗಿ ಬಳಸಬೇಕು. ನಾನು ಆಸ್ಪತ್ರೆಯಲ್ಲಿದ್ದಾಗ ಗುಣಮುಖನಾಗುವಂತೆ ಹಾರೈಸಿದ ಎಲ್ಲರಿಗೂ ಧನ್ಯವಾದಗಳು. ವೈದ್ಯರ ಸಲಹೆ ಮೇರೆಗೆ ನಾನು ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದೆ. ಇಂದಿನಿಂದ ಎಂದಿನಂತೆ ಚಟುವಟಿಕೆಗಳಲ್ಲಿ ಭಾಗಿಯಾಗುತ್ತೇನೆ. ಮುಂದಿನ ವಾರ ಬಾದಾಮಿಗೆ ಭೇಟಿ ನೀಡುತ್ತೇನೆ.
ಜಿಎಸ್‍ಟಿ, ರಾಜ್ಯಕ್ಕೆ ದ್ರೋಹ :
ಜಿ.ಎಸ್.ಟಿ ಪರಿಹಾರ ನಿರಾಕರಿಸುವ ಮೂಲಕ ರಾಜ್ಯಕ್ಕೆ ಕೇಂದ್ರ ಸರ್ಕಾರ ದೊಡ್ಡ ದ್ರೋಹ ಎಸಗಿದೆ. ಕೊರೊನಾ ರೋಗದಿಂದಾಗಿ ದೇಶದ ಎಲ್ಲಾ ರಾಜ್ಯಗಳು ಆರ್ಥಿಕ ದುಸ್ಥಿತಿಯನ್ನು ಎದುರಿಸುತ್ತಿವೆ. ಸರ್ಕಾರಿ ನೌಕರರಿಗೆ ಸಂಬಳ ನೀಡುವುದು ಕಷ್ಟವೆನ್ನುವ ಪರಿಸ್ಥಿತಿ ಇದೆ. ಜಿ.ಎಸ್.ಟಿ ಜಾರಿಗೆ ತರುವ ಸಂದರ್ಭದಲ್ಲಿ ಜಿ.ಎಸ್.ಟಿ ಕೌನ್ಸಿಲ್ ನಲ್ಲಿ ಒಂದು ಒಪ್ಪಂದವಾಗಿತ್ತು, ಅದರಂತೆ ಜಿ.ಎಸ್.ಟಿ ಸಂಗ್ರಹದಲ್ಲಿ ನಷ್ಟವಾದರೆ ಅದನ್ನು ಕೇಂದ್ರ ಸರ್ಕಾರ ಭರಿಸಿಕೊಡಬೇಕು ಹಾಗೂ ಮುಂದಿನ 5 ವರ್ಷಗಳವರೆಗೆ ಕೇಂದ್ರ ಸರ್ಕಾರ ಸಂಪೂರ್ಣ ಜವಾಬ್ದಾರಿಯಾಗಿರಬೇಕು ಎಂದಿತ್ತು.
ಒಪ್ಪಂದದ ಪ್ರಕಾರ ನಡೆದಕೊಳ್ಳಬೇಕಾಗಿರುವುದು ನರೇಂದ್ರ ಮೋದಿಯವರ ಸರ್ಕಾರದ ಜವಾಬ್ದಾರಿ. 14% ಜಿ.ಎಸ್.ಟಿ ಖೋತಾ ಆಗಲಿದೆ, ಅದನ್ನು ಮುಂದಿನ 5 ವರ್ಷಗಳವರೆಗೆ ತುಂಬಿಕೊಡಬೇಕು ಎಂದು ಒಪ್ಪಂದವಾಗಿತ್ತು. ಆಗ ನಮ್ಮ ಸರ್ಕಾರ ಆಡಳಿತದಲ್ಲಿತ್ತು. ಆ ನಷ್ಟವನ್ನು ಪರಿಹಾರದ ರೂಪದಲ್ಲಿ ರಾಜ್ಯಗಳಿಗೆ ಕೇಂದ್ರ ಸರ್ಕಾರ ತುಂಬಿಕೊಡಬೇಕಾಗಿತ್ತು.
ಆದರೆ ಈಗ ನಿರ್ಮಲಾ ಸೀತಾರಾಮನ್ ಅವರು ಈಗ ಕೊರೊನಾ ಬಂದಿದೆ, ಇದನ್ನು ಯಾರೂ ಊಹಿಸಿರಲಿಲ್ಲ, ಇದು ದೇವರ ಆಟ, ಸುಮಾರು 3 ಲಕ್ಷ ಕೋಟಿ ರೂಪಾಯಿಗಳಷ್ಟು ನಷ್ಟ ಉಂಟಾಗಿದೆ. ಸೆಸ್ ಇಂದ 65 ಸಾವಿರ ಕೋಟಿ ಬರುತ್ತೆ, ಉಳಿದ 2.65 ಲಕ್ಷ ಕೋಟಿ ನಷ್ಟ ಆಗುತ್ತಿರುವುದರಿಂದ ನಾವು ನಷ್ಟ ತುಂಬಿಕೊಡಲು ಸಾಧ್ಯವಿಲ್ಲ ಎಂದಿದ್ದಾರೆ.
ರಾಜ್ಯಗಳಿಗೆ ನೀವು ರಿಸರ್ವ್ ಬ್ಯಾಂಕ್ ಗಳಿಂದ ಸಾಲ ಪಡೆದು ತಿರಿಸಿಕೊಳ್ಳಿ ಎಂದು ಕೇಂದ್ರ ವಿತ್ತ ಸಚಿವರು ಹೇಳಿದರು, ಇದರ ಬದಲು ಕೇಂದ್ರವೇ ಏಕೆ ರಿಸರ್ವ್ ಬ್ಯಾಂಕಿನಿಂದ ಸಾಲ ಪಡೆದು ರಾಜ್ಯಗಳಿಗೆ ನೀಡಬಾರದು? ಕೇಂದ್ರ ಸರ್ಕಾರ ತನ್ನ ಜವಾಬ್ದಾರಿಯನ್ನು ರಾಜ್ಯಗಳ ಮೇಲೆ ಹಾಕುತ್ತಿರುವುದು ಏಕೆ? ಒಪ್ಪಂದದ ಪ್ರಕಾರ ನಷ್ಟ ತುಂಬಿಕೊಡಬೇಕಾಗಿರುವುದು ನಿಮ್ಮ ಕರ್ತವ್ಯವಲ್ಲವೇ? ಕೇಂದ್ರ ಸರ್ಕಾರ ರಾಜ್ಯಗಳ ಮೇಲೆ ಒತ್ತಡ ಹಾಕುತ್ತಿರುವ ನೀತಿಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ಇದೇ ವೇಳೆ ರಾಜ್ಯಕ್ಕೆ ಸಂವಿಧಾನಬದ್ಧವಾಗಿ ನೀಡಬೇಕಾಗಿರುವ ಜಿ.ಎಸ್.ಟಿ ಪರಿಹಾರವನ್ನು ನೀಡಿ ಎಂದು ಒತ್ತಾಯಿಸುತ್ತೇನೆ.
ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರ್ಕಾರವಿದ್ದರೆ ಸ್ವರ್ಗ ಸೃಷ್ಟಿ ಮಾಡುತ್ತೇವೆ ಎಂದು ಹೇಳಿದ್ದನ್ನು ನಂಬಿದ ರಾಜ್ಯದ ಜನರು 25 ಜನ ಸಂಸದರನ್ನು ಗೆಲ್ಲಿಸಿಕೊಟ್ಟಿದ್ದಾರೆ, ಉಪಚುನಾವಣೆಯಲ್ಲಿ ನಿಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ, ಜನರು ನಿಮ್ಮ ಮೇಲಿಟ್ಟಿರುವ ನಂಬಿಕೆಗೆ ಈಗ ನೀವು ಮಾಡುತ್ತಿರುವುದು ದ್ರೋಹವಲ್ಲವೇ? ರಾಜ್ಯಗಳನ್ನು ಕೇಂದ್ರ ದಿವಾಳಿಯಾಗುವತ್ತ ಕೊಂಡೊಯ್ಯುತ್ತಿದೆ. ಹಾಗಾಗಿ ಕೇಂದ್ರದ ಈ ಸಲಹೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸುತ್ತೇನೆ.
ರಾಜ್ಯ ಸರ್ಕಾರಕ್ಕೆ ಧಮ್ ಇದ್ದರೆ ನೀವೆ ಸಾಲ ತೆಗೆದುಕೊಂಡು ನಮಗೆ ಜಿ.ಎಸ್.ಟಿ ಪರಿಹಾರ ಕೊಡಿ ಎಂದು ಕೇಳಲಿ ಮತ್ತು ಸರ್ವ ಪಕ್ಷ ನಿಯೋಗ ಕೊಂಡೊಯ್ದು ಕೇಂದ್ರದ ಮೇಲೆ ಒತ್ತಡ ಹೇರಲಿ. ಇದರ ಜೊತೆಗೆ 15ನೇ ಹಣಕಾಸು ಆಯೋಗದಿಂದ ಕೂಡ ನಮಗೆ ಅನ್ಯಾಯವಾಗಿದೆ, ಅದರ ಜೊತೆಗೆ ಜಿ.ಎಸ್.ಟಿ ಪರಿಹಾರವನ್ನು ಕೊಡಲ್ಲ ಎಂದರೆ ಹೇಗೆ?
ಜಿ.ಡಿ.ಪಿ ನೆಲಕಚ್ಚಿದೆ, ನಿರುದ್ಯೋಗ ಪ್ರಮಾಣ ಏರಿಕೆಯಾಗಿದೆ ಹೀಗಿರುವಾಗ ಮತ್ತೆ ರಾಜ್ಯ ಸರ್ಕಾರ ಸಂಬಳ ನೀಡಲು ಸಾಲ ಪಡೆದುಕೊಂಡರೆ ಅಭಿವೃದ್ಧಿ ಕಾರ್ಯಗಳು ಆಗುವುದಿಲ್ಲ. ನಮ್ಮ ಆಡಳಿತಾವಧಿಯಲ್ಲಿ ಆರ್ಥಿಕ ಶಿಸ್ತು ಅತ್ಯುತ್ತಮವಾಗಿ ನಿರ್ವಹಣೆಯಾಗಿತ್ತು. ಸಾಲದ ಪ್ರಮಾಣ ಜಿ.ಡಿ.ಪಿ 25% ಗಿಂತಲೂ ಕಡಿಮೆಯಿತ್ತು. ಈಗ ಸಾಲ ಅನಿಯಂತ್ರಿತವಾಗಿ ಜಾಸ್ತಿಯಾಗುವುದರಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿ, ಅಭಿವೃದ್ಧಿಯಲ್ಲಿ 10 ವರ್ಷಗಳಷ್ಟು ಹಿಂದಕ್ಕೆ ಹೋಗಲಿದೆ.
ರಾಜ್ಯದ ಹಿತದೃಷ್ಟಿಯಿಂದ ಕೇಂದ್ರದ ಮೇಲೆ ಒತ್ತಡ ಹೇರುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕು. ರಾಜ್ಯಗಳಿಗೆ ನೀವೇ ಸಾಲ ತೆಗೆದುಕೊಳ್ಳಿ ಎಂದು ಹೇಳುವುದೇ ವಿಪರ್ಯಾಸ. ರಾಜ್ಯಗಳ ಬಗ್ಗೆ ಕಾಳಜಿಯೇ ಇಲ್ಲದಿರುವ ಅತ್ಯಂತ ಕೆಟ್ಟ ಸರ್ಕಾರ ಕೇಂದ್ರದಲ್ಲಿದ್ದರೆ, ಅದನ್ನು ಪ್ರಶ್ನಿಸುವ ಧೈರ್ಯವಿಲ್ಲದ ಹೇಡಿ ಸರ್ಕಾರ ರಾಜ್ಯದಲ್ಲಿದೆ. ಬಿಜೆಪಿಯೇತರ ರಾಜ್ಯ ಸರ್ಕಾರಗಳು ಕೇಂದ್ರದ ಈ ನೀತಿಯನ್ನು ವಿರೋಧ ಮಾಡಿವೆ. ಆದರೆ ನಿರ್ಮಲಾ ಸೀತಾರಾಮನ್ ಅವರು ಇದನ್ನು ದೇವರ ಆಟ ಎಂದು ಕೈಚೆಲ್ಲಿದ್ದಾರೆ.
ಪ್ರವಾಹ, ಸರ್ಕಾರ ಎಡವಿದೆ :
ಈ ವರ್ಷವೂ ಪ್ರವಾಹ ಬಂದಿದ್ದು 56 ತಾಲೂಕುಗಳ 1000 ಹಳ್ಳಿಗಳು ಪ್ರವಾಹದಿಂದ ಬಾಧಿಸಲ್ಪಟ್ಟಿದೆ. ಸುಮಾರು 1 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ, ಮನೆಗಳು ಕುಸಿದುಬಿದ್ದಿವೆ, ಜಾನುವಾರುಗಳು ಸಾವಿಗೀಡಾಗಿವೆ. ರಾಜ್ಯ ಸರ್ಕಾರವೇ ಸುಮಾರು 4 ಸಾವಿರ ಕೋಟಿ ನಷ್ಟವಾಗಿದೆ ಎಂದಿದೆ. ಈ ಹಿಂದೆಯೂ ಸರಿಯಾಗಿ ಪರಿಹಾರ ಕೊಟ್ಟಿಲ್ಲ. 35,000 ಕೋಟಿ ಪರಿಹಾರ ಕೇಳಿದ್ದರೆ ಬರೀ 1800 ಕೋಟಿ ಪರಿಹಾರ ನೀಡಲಾಗಿದೆ. ಇನ್ನು ಮನೆ ಕಳೆದುಕೊಂಡವರಿಗೆ ಮನೆ ಕಟ್ಟಿಕೊಟ್ಟಿಲ್ಲ, ಹಳ್ಳಿಗಳ ಸ್ಥಳಾಂತರವಾಗಿಲ್ಲ, ಶಾಲೆಗಳ ಪುನರ್ ನಿರ್ಮಾಣ ಕಾರ್ಯವೂ ಆಗಿಲ್ಲ,
ಮತ್ತೆ ಈ ವರ್ಷವೂ ಪ್ರವಾಹ ಬಂದಿದೆ. ಯಡಿಯೂರಪ್ಪನವರು ಹೆಲಿಕಾಪ್ಟರ್ ಮೂಲಕ ಸರ್ವೇ ಮಾಡಿದರು, ಆದರೆ ಸರ್ಕಾರದ ಬೇರೆ ಮಂತ್ರಿಗಳು ಜನರ ಬಳಿಗೆ ಹೋಗಿ ಅವರ ಕಷ್ಟ ಆಲಿಸಬೇಕೋ ಬೇಡವೋ? ಸಚಿವರಾದ ಅಶೋಕ್ ಅವರು ಕೇಂದ್ರದಿಂದ ಪರಿಹಾರ ಕೇಳಿದ್ದೇವೆ, ಅವರ ತಂಡ ಬಂದು ಸರ್ವೇ ಮಾಡಿ ಪರಿಹಾರ ನೀಡುತ್ತದೆ ಎನ್ನುತ್ತಾರೆ, ಆದರೆ ಅಧಿಕಾರಗಳ ಮಾತೇ ಬೇರೆ. ಇವರು ಕೇಂದ್ರ ವಿತ್ತ ಸಚಿವರನ್ನು ಭೇಟಿ ಮಾಡಿ ಮನವಿ ಕೊಟ್ಟು, ಪ್ರಧಾನಿಗಳ ಮನವೊಲಿಕೆ ಮಾಡಿ ಪರಿಹಾರದ ಹಣ ಸಿಗುವವರೆಗೂ ಹಿಡಿದ ಕಾರ್ಯದಿಂದ ಹಿಂದೆ ಸರಿಯಬಾರದು. ನಮ್ಮ ಸರ್ಕಾರವಿದ್ದಾಗ ಪದೇ ಪದೇ ಪ್ರಧಾನಿಗಳನ್ನು ಭೇಟಿ ಮಾಡಿ ಮನವಿ ಕೊಟ್ಟು ಪರಿಹಾರಕ್ಕಾಗಿ ಆಗ್ರಹಿಸುತ್ತಿದ್ದೆವು, ಆದರೆ ಇವರು ಪ್ರಧಾನಿಗಳನ್ನು ಭೇಟಿ ಮಾಡಲು ಹೆದರುತ್ತಾರೆ, ಇದೊಂದು ಮಹಾ ಪುಕ್ಕಲು ಸರ್ಕಾರ.
ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವುದರಲ್ಲಿ ಈ ಸರ್ಕಾರ ಎಡವಿದೆ. ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳ ಸರ್ವೇ ನಡೆಸಿ, ನಷ್ಟದ ಪ್ರಮಾಣದ ರಿಪೋರ್ಟ್ ತರಿಸಿಕೊಂಡು ಪರಿಹಾರ ನೀಡಬೇಕು ಎಂದು ಒತ್ತಾಯ ಮಾಡುತ್ತೇನೆ. ಈ ವಿಚಾರವನ್ನು ಅಧಿವೇಶನದಲ್ಲಿ ಪ್ರಶ್ನಿಸಿದರೆ ಸರಿಯಾಗಿ ಉತ್ತರ ನೀಡಲ್ಲ. ಕಳೆದ ಬಾರಿ ಹೀಗೆ ಆಯಿತು. ನಾನು ಸರ್ಕಾರವನ್ನು ಪ್ರಶ್ನಿಸಿದರೆ ನನ್ನ ಮಾತನ್ನು ಕೇಳಿಸಿಕೊಳ್ಳಲು ಸರ್ಕಾರ ಸಿದ್ಧವಿರಲಿಲ್ಲ. ಈ ಬಾರಿಯ ಅಧಿವೇಶನದಲ್ಲೂ ಈ ವಿಚಾರವನ್ನು ಪ್ರಶ್ನಿಸುತ್ತೇನೆ.

ರಾಯಣ್ಣ ಪ್ರತಿಮೆ, ವಿವಾದ ಮಾಡಿಕೊಂಡಿದ್ದು ತಪ್ಪು :

ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣ ವಿಚಾರದಲ್ಲಿ ರಾಜ್ಯ ಸರ್ಕಾರ ಬೇಗನೆ ಒಂದು ನಿರ್ಧಾರ ತೆಗೆದುಕೊಂಡಿದ್ದರೆ ಇಂದು ರಾಯಣ್ಣ ವರ್ಸಸ್ ಶಿವಾಜಿ, ಕನ್ನಡಿಗರು ವರ್ಸಸ್ ಮರಾಠಿಗರು ಎಂಬ ಪರಿಸ್ಥಿತಿಯೇ ನಿರ್ಮಾನವಾಗುತ್ತಿರಲಿಲ್ಲ. ನಾನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿಯವರಿಗೆ 2 ಬಾರಿ ಕರೆ ಮಾಡಿ ಮಾತನಾಡಿದೆ.
ರಾಯಣ್ಣನ ವಿಚಾರವನ್ನು ವಿವಾದ ಮಾಡಿಕೊಳ್ಳುವುದೇ ದೊಡ್ಡ ತಪ್ಪು, ರಾಯಣ್ಣನವರು ಚೆನ್ನಮ್ಮನ ಸಂಸ್ಥಾನದಲ್ಲಿ ಸೈನಿಕನಾಗಿ ಬ್ರಿಟೀಷರ ವಿರುದ್ಧ ಹೋರಾಡಿ ಗಲ್ಲಿಗೇರಿದವರು, ರಾಯಣ್ಣ ಇಂದಿನ ಯುವ ಜನರಿಗೆ ಸ್ಪೂರ್ತಿಯ ಸೆಲೆ, ಅಂಥವರ ಪ್ರತಿಮೆ ನಿರ್ಮಾಣಕ್ಕೆ ಸರ್ಕಾರ ಹಿಂದೆಮುಂದೆ ನೋಡಬಾರದಾಗಿತ್ತು. ನಿನ್ನೆ ಸರ್ಕಾರ ಮಾಡಿದ ಕೆಲಸವನ್ನು ಮೊದಲೇ ಮಾಡಿದ್ದರೆ ಬೆಳಗಾವಿಯಲ್ಲಿ ವಿವಾದ ಇಷ್ಟು ದೊಡ್ಡದಾಗುತ್ತಿರಲಿಲ್ಲ.
ಶಿವಾಜಿಯೂ ಸ್ವತಂತ್ರ ಹೋರಾಟಗಾರ ಎಂಬುದರಲ್ಲಿ ಎರಡು ಮಾತಿಲ್ಲ, ಶಿವಾಜಿಯವರಂತೆ ರಾಯಣ್ಣ ಕೂಡ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದವರು. ಇಬ್ಬರೂ ಗೌರವಕ್ಕೆ ಅರ್ಹರು, ಅಂತಹ ಮಹಾನ್ ವ್ಯಕ್ತಿಗಳ ಮಧ್ಯೆ ಸಂಘರ್ಷ ಉಂಟಾಗಲು ಸರ್ಕಾರ ಅವಕಾಶ ಮಾಡಿಕೊಡಬಾರದು. ಈ ಹೋರಾಟದಲ್ಲಿ ಕನ್ನಡಿಗರ ವಿರುದ್ಧ ಮೊಕದ್ದಮೆಗಳನ್ನು ದಾಖಲಿಸಲಾಗಿದೆ, ಅದನ್ನು ತಕ್ಷಣ ವಾಪಾಸು ಪಡೆಯಬೇಕು ಎಂದು ಆಗ್ರಹಿಸುತ್ತೇನೆ ಎಂದರು.

ಸಿಟಿ ರವಿಯವರು ರಾಯಣ್ಣ ಪ್ರತಿಮೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಡೆಸಲಾದ ಹೋರಾಟವನ್ನು ವ್ಯಂಗ್ಯ ಮಾಡಿದ್ದಾರೆ. ಆ ಭಾಗದ ಜನರು ರಾಯಣ್ಣನ ಪ್ರತಿಮೆ ನಿರ್ಮಾಣಕ್ಕಾಗಿ ನಡೆಸುತ್ತಿರುವ ಹೋರಾಟಕ್ಕೆ ರಾಜಕೀಯ ಬಣ್ಣ ಕೊಡುವ ಅಗತ್ಯವಿಲ್ಲ. ಇದು ಬಹಳ ಹಿಂದಿನಿಂದಲೂ ಪ್ರತಿಮೆ ನಿರ್ಮಾಣಕ್ಕಾಗಿ ಹೋರಾಡುತ್ತಾ ಬಂದಿದ್ದಾರೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಚಿವರಾದ ಸಿಟಿ ರವಿಯವರು ಜವಾಬ್ದಾರಿಯಿಂದ ಮಾತನಾಡಬೇಕು.

ಡಿ.ಜೆ. ಹಳ್ಳಿ ಘಟನೆ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಡಿ.ಜೆ.ಹಳ್ಳಿ ಪ್ರಕರಣ ಇನ್ನೂ ತನಿಖೆಯ ಹಂತದಲ್ಲಿಯೇ ಇದೆ, ಈಗಲೇ ಯಾರನ್ನೂ ಅಪರಾಧಿಗಳು ಅಂತಲೋ ಅಥವಾ ಅಮಾಯಕರು ಅಂತಲೋ ನಿರ್ಧರಿಸಲು ಸಾಧ್ಯವಿಲ್ಲ. ನಮ್ಮ ಪಕ್ಷದ ಶಾಸಕರಾದ ಜಮೀರ್ ಅಹ್ಮದ್ ಅವರು ಗಲಭೆಯ ಆರೋಪಿಗಳನ್ನು ಅಮಾಯಕರು ಎಂದಿಲ್ಲ. ಗಲಭೆಯಲ್ಲಿ ಮೃತಪಟ್ಟ ಕುಟುಂಬದ ಸದಸ್ಯರು ತೀರ ಬಡವರು ಎನ್ನುವ ಕಾರಣಕ್ಕಾಗಿ ಪರಿಹಾರ ನೀಡಿದ್ದೇನೆ ಎಂದು ಹೇಳಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ವಿಚಾರದಲ್ಲಿ ನಮ್ಮ ತಕರಾರಿಲ್ಲ. ಈ ವಿಷಯದಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರಿಗೆ ಶಿಕ್ಷೆಯಾಗಲಿ.
ತನಿಖಾ ಸಂಸ್ಥೆಯ ವರದಿ ಬರುವ ಮುಂಚೆಯೇ ಗೃಹ ಸಚಿವರು ಯಾರನ್ನೂ ಅಪರಾಧಿ ಎಂದು ಪರಿಗಣಿಸುವುದು ಸರಿಯಲ್ಲ. ತನಿಖೆಯಾಗಿ ಅಪರಾಧಿಗಳನ್ನು ಪತ್ತೆ ಹಚ್ಚಿದ ನಂತರ ಅಂಥವರಿಗೆ ಕಠಿಣ ಶಿಕ್ಷೆ ನೀಡಲಿ. ಈ ಘಟನೆಯನ್ನು ನಾನು ಖಂಡಿಸುತ್ತೇನೆ, ಶೀಘ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆದು ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದು ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಹೇಳಿದರು

ಡ್ರಗ್ಸ್ ಜಾಲ, ತನಿಖೆಯಾಗಲಿ :

ಗಾಂಜಾ ಮಾರಾಟ ಮತ್ತು ಸೇವನೆ ಎರಡೂ ಮಹಾ ಅಪರಾಧ. ಒಂದು ವೇಳೆ ರಾಜ್ಯದಲ್ಲಿ ಗಾಂಜಾ ಮಾರಾಟ ಆಗುತ್ತಿದ್ದರೆ ಅದಕ್ಕೆ ಸರ್ಕಾರದ ವೈಫಲ್ಯವೇ ಕಾರಣ. ಗಾಂಜಾ ಮಾರುವವರು ಮತ್ತು ಸೇವನೆ ಮಾಡುವವರನ್ನು ಪತ್ತೆ ಹಚ್ಚಿ, ಶಿಕ್ಷೆಗೆ ಒಳಪಡಿಸಬೇಕು.

ಟಿಪ್ಪು ಸುಲ್ತಾನ್ ವಿಚಾರದಲ್ಲಿ ವಿಧಾನ ಪರಿಷತ್ ಸದಸ್ಯರಾದ ವಿಶ್ವನಾಥ್ ಅವರು ಸತ್ಯವನ್ನೇ ಹೇಳಿದ್ದಾರೆ. ಅದನ್ನು ಬಿಜೆಪಿಯವರು ಒಪ್ಪಿಕೊಳ್ಳಬೇಕು. ರಾಜ್ಯದಲ್ಲಿ ಮಧ್ಯಂತರ ಸರ್ಕಾರ ಬರಲಿದೆ ಎಂಬುದು ಸುಳ್ಳು ನಾವಂತೂ ಸರ್ಕಾರ ತೆಗೆಯುವ ಪ್ರಯತ್ನಕ್ಕೆ ಕೈ ಹಾಕುವುದಿಲ್ಲ ಎಂದರು.

ಸಿಟಿ ರವಿಯವರು ರಾಯಣ್ಣ ಪ್ರತಿಮೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಡೆಸಲಾದ ಹೋರಾಟವನ್ನು ವ್ಯಂಗ್ಯ ಮಾಡಿದ್ದಾರೆ. ಆ ಭಾಗದ ಜನರು ರಾಯಣ್ಣನ ಪ್ರತಿಮೆ ನಿರ್ಮಾಣಕ್ಕಾಗಿ ನಡೆಸುತ್ತಿರುವ ಹೋರಾಟಕ್ಕೆ ರಾಜಕೀಯ ಬಣ್ಣ ಕೊಡುವ ಅಗತ್ಯವಿಲ್ಲ. ಇದು ಬಹಳ ಹಿಂದಿನಿಂದಲೂ ಪ್ರತಿಮೆ ನಿರ್ಮಾಣಕ್ಕಾಗಿ ಹೋರಾಡುತ್ತಾ ಬಂದಿದ್ದಾರೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಚಿವರಾದ ಸಿಟಿ ರವಿಯವರು ಜವಾಬ್ದಾರಿಯಿಂದ ಮಾತನಾಡಬೇಕು.

ಡಿ.ಜೆ. ಹಳ್ಳಿ ಘಟನೆ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ :
ಡಿ.ಜೆ.ಹಳ್ಳಿ ಪ್ರಕರಣ ಇನ್ನೂ ತನಿಖೆಯ ಹಂತದಲ್ಲಿಯೇ ಇದೆ, ಈಗಲೇ ಯಾರನ್ನೂ ಅಪರಾಧಿಗಳು ಅಂತಲೋ ಅಥವಾ ಅಮಾಯಕರು ಅಂತಲೋ ನಿರ್ಧರಿಸಲು ಸಾಧ್ಯವಿಲ್ಲ. ನಮ್ಮ ಪಕ್ಷದ ಶಾಸಕರಾದ ಜಮೀರ್ ಅಹ್ಮದ್ ಅವರು ಗಲಭೆಯ ಆರೋಪಿಗಳನ್ನು ಅಮಾಯಕರು ಎಂದಿಲ್ಲ. ಗಲಭೆಯಲ್ಲಿ ಮೃತಪಟ್ಟ ಕುಟುಂಬದ ಸದಸ್ಯರು ತೀರ ಬಡವರು ಎನ್ನುವ ಕಾರಣಕ್ಕಾಗಿ ಪರಿಹಾರ ನೀಡಿದ್ದೇನೆ ಎಂದು ಹೇಳಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ವಿಚಾರದಲ್ಲಿ ನಮ್ಮ ತಕರಾರಿಲ್ಲ. ಈ ವಿಷಯದಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರಿಗೆ ಶಿಕ್ಷೆಯಾಗಲಿ.
ತನಿಖಾ ಸಂಸ್ಥೆಯ ವರದಿ ಬರುವ ಮುಂಚೆಯೇ ಗೃಹ ಸಚಿವರು ಯಾರನ್ನೂ ಅಪರಾಧಿ ಎಂದು ಪರಿಗಣಿಸುವುದು ಸರಿಯಲ್ಲ. ತನಿಖೆಯಾಗಿ ಅಪರಾಧಿಗಳನ್ನು ಪತ್ತೆ ಹಚ್ಚಿದ ನಂತರ ಅಂಥವರಿಗೆ ಕಠಿಣ ಶಿಕ್ಷೆ ನೀಡಲಿ. ಈ ಘಟನೆಯನ್ನು ನಾನು ಖಂಡಿಸುತ್ತೇನೆ, ಶೀಘ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆದು ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದು ಸರ್ಕಾರವನ್ನು ಒತ್ತಾಯಿಸುತ್ತೇನೆ.
ಡ್ರಗ್ಸ್ ಜಾಲ, ತನಿಖೆಯಾಗಲಿ :
ಗಾಂಜಾ ಮಾರಾಟ ಮತ್ತು ಸೇವನೆ ಎರಡೂ ಮಹಾ ಅಪರಾಧ. ಒಂದು ವೇಳೆ ರಾಜ್ಯದಲ್ಲಿ ಗಾಂಜಾ ಮಾರಾಟ ಆಗುತ್ತಿದ್ದರೆ ಅದಕ್ಕೆ ಸರ್ಕಾರದ ವೈಫಲ್ಯವೇ ಕಾರಣ. ಗಾಂಜಾ ಮಾರುವವರು ಮತ್ತು ಸೇವನೆ ಮಾಡುವವರನ್ನು ಪತ್ತೆ ಹಚ್ಚಿ, ಶಿಕ್ಷೆಗೆ ಒಳಪಡಿಸಬೇಕು.
ಟಿಪ್ಪು ಸುಲ್ತಾನ್ ವಿಚಾರದಲ್ಲಿ ವಿಧಾನ ಪರಿಷತ್ ಸದಸ್ಯರಾದ ವಿಶ್ವನಾಥ್ ಅವರು ಸತ್ಯವನ್ನೇ ಹೇಳಿದ್ದಾರೆ. ಅದನ್ನು ಬಿಜೆಪಿಯವರು ಒಪ್ಪಿಕೊಳ್ಳಬೇಕು. ರಾಜ್ಯದಲ್ಲಿ ಮಧ್ಯಂತರ ಸರ್ಕಾರ ಬರಲಿದೆ ಎಂಬುದು ಸುಳ್ಳು ನಾವಂತೂ ಸರ್ಕಾರ ತೆಗೆಯುವ ಪ್ರಯತ್ನಕ್ಕೆ ಕೈ ಹಾಕುವುದಿಲ್ಲ.

Copyright © All rights reserved Newsnap | Newsever by AF themes.
error: Content is protected !!