ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು 2023ರ ಜನವರಿ 6, 7 ಮತ್ತು 8ರಂದು ನಡೆಸುವ ಕುರಿತು ವಿಧಾನಸೌಧದಲ್ಲಿ ನಡೆದ ಸಮ್ಮೇಳನ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಡಿಸೆಂಬರ್ 23, 24 ಹಾಗೂ 25 ರಂದು ಹಾವೇರಿಯಲ್ಲಿ 86ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಚರ್ಚಿಸಿದಾಗ, ಆ ದಿನಾಂಕಗಳದು ಪೂರ್ವನಿಯೋಜಿತ ಜನಸಂಕಲ್ಪ ಯಾತ್ರೆ ಇದೆ, ಅದರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಿಸಬೇಕಾಗಿದೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದ್ರೆಯ ವಿದ್ಯಾಗಿರಿಯಲ್ಲಿರುವ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಂಕೀರ್ಣದಲ್ಲಿ ವಿಶ್ವದಲ್ಲೇ ಪ್ರಥಮಬಾರಿಗೆ ‘ಅಂತರರಾಷ್ಟ್ರೀಯ ಸಾಂಸ್ಕೃತಿಕ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೋರಿ’ ನಡೆಯುಲಿರುವುದರಿಂದ ಹಾಗೂ ದಾವಣಗೆರೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧಿವೇಶನ ಮೂರು ದಿನ ನಡೆಯಲಿರುವ ಹಿನ್ನೆಲೆಯಲ್ಲಿ, ಹಾವೇರಿ ಸಮ್ಮೇಳನವನ್ನು 2023ರ ಜನವರಿ 6, 7, 8ರ ಶುಕ್ರವಾರ, ಶನಿವಾರ ಮತ್ತು ರವಿವಾರದಂದು ನಡೆಸಲು ತೀರ್ಮಾನಿಸಲಾಗಿದೆ. ಗ್ರಾ.ಪಂ ಅಧ್ಯಕ್ಷರ ಅಧಿಕಾರ ಮೊಟಕಿಲ್ಲ: ಪ್ರಸ್ತಾವನೆಗೆ ಸಿಎಂ ಬೊಮ್ಮಾಯಿ ತಿರಸ್ಕಾರ
ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ ಜೋಶಿ, ಕಾರ್ಮಿಕ ಖಾತೆ ಮತ್ತು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವರಾದ ವಿ ಸುನೀಲ್ ಕುಮಾರ್, ಶಾಸಕರಾದ ನೆಹರು ಓಲೇಕಾರ್, ಅರುಣಕುಮಾರ ಗುತ್ತೂರ, ಬಳ್ಳಾರಿ ವಿರೂಪಾಕ್ಷಪ್ಪ ರುದ್ರಪ್ಪ, ಹಾವೇರಿ ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣವರ, ಜಿ.ಪಂ. ಮುಖ್ಯ ಕಾರ್ಯನಿರ್ವಾಣಾಧಿಕಾರಿ ಮಹಮ್ಮದ್ ರೋಷನ್, ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗಯ್ಯ ಹಿರೇಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ. ಜಾನಕಿ ಮುಂತಾದವರು ಭಾಗವಹಿಸಿದ್ದರು.
- ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
- RBI ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು: ಆರೋಗ್ಯದಲ್ಲಿ ಚೇತರಿಕೆ
- ಮುಡಾ ಹಗರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
- ಏಕನಾಥ್ ಶಿಂಧೆ ರಾಜೀನಾಮೆ: ದೇವರ ಮೊರೆ ಹೋದ ಬೆಂಬಲಿಗರು, ಮಹಾಯತಿ ಸರ್ಕಾರ ರಚನೆಗೆ ತಯಾರಿ
- ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಸರ್ಕಾರಿ ಶಾಲಾ ಶಿಕ್ಷಕನ ಬಂಧನ
More Stories
ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
ಮುಡಾ ಹಗರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಸರ್ಕಾರಿ ಶಾಲಾ ಶಿಕ್ಷಕನ ಬಂಧನ