ಬೆಂಗಳೂರಿನಲ್ಲಿ ನಿನ್ನೆ ರಸ್ತೆ ಗುಂಡಿ ತಪ್ಪಿಸಲು ಹೋಗಿ ಬಸ್ ಅಡಿ ಸಿಲುಕಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಉಮಾದೇವಿ ರಸ್ತೆಗುಂಡಿಗೆ ಬಲಿಯಾದ ಮಹಿಳೆ.
ಮಾಗಡಿ ರಸ್ತೆಯ ಸುಜಾತ ಥಿಯೇಟರ್ ಬಳಿ ಗುಂಡಿ ತಪ್ಪಿಸಲು ಹೋಗಿ ಕೆಎಸ್ಆರ್ಟಿಸಿ ಬಸ್ನಡಿ ತಾಯಿ-ಮಗಳು ಸಿಲುಕಿದ್ದಳು. ಬಸ್ ಅಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಮಗಳನ್ನು ರಾಜಾಜಿನಗರದ ಇಎಸ್ಐ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಇದನ್ನು ಓದಿ –ಮಂಡ್ಯ ಜಿಲ್ಲೆಯಲ್ಲಿ ಅನಧೀಕೃತ ಟ್ಯೂಷನ್ ಕೇಂದ್ರ ರದ್ದು – ಡಿಡಿಪಿಐ ಆದೇಶ
ಉಮಾ ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.ಇಂದು ಬೆಳಿಗ್ಗೆ 10 ಗಂಟೆಗೆ ಮೃತದೇಹವನ್ನು ಕುಂಟಬಸ್ಥರಿಗೆ ವೈದ್ಯರು ಹಸ್ತಾಂತರ ಮಾಡಲಿದ್ದಾರೆ.
ಬಸ್ ಚಾಲಕನ ವಿರುದ್ಧ FIR – ಬಂಧನ :
ಪ್ರಕರಣ ಸಂಬಂಧ KSRTC ಬಸ್ ಚಾಲಕ ಮಾರುತಿ ರಾವ್ ಬಂಧಿಸಿದ್ದಾರೆ. ಮಲ್ಲೇಶರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತ ಉಮಾದೇವಿ ಪುತ್ರಿ ವನಿತಾ ದೂರು ದಾಖಲಿಸಿದ್ದರು. ದೂರಿನ ಹಿನ್ನೆಲೆಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಮಾರುತಿ ರಾವ್ ವಿರುದ್ಧ FIR ದಾಖಲಾಗಿದೆ.
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
More Stories
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ