ಮಳವಳ್ಳಿಯಲ್ಲಿ 10 ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸರ್ಕಾರ ಮೃತ ಬಾಲಕಿ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 10 ಲಕ್ಷ ರು ಚೆಕ್ ಬಿಡುಗಡೆ ಮಾಡಲಾಗಿದೆ.
ಜಿಲ್ಲಾಧಿಕಾರಿ ಖಾತೆಗೆ ಸಿಎಂ ಪರಿಹಾರ ನಿಧಿಯನ್ನು ವರ್ಗಾಯಿಸಲಾಗಿದೆ.ಸಿದ್ದು ಸೋಲಿಸಲು ವರುಣಾದಲ್ಲಿ ಬಿಜೆಪಿಯಿಂದ ವಿಜಯೇಂದ್ರನನ್ನು ಕಣಕ್ಕಿಳಿಸುವ ರಣ ತಂತ್ರ
ಸಚಿವ ಕೆ.ಗೋಪಾಲಯ್ಯ, ಸಂಸದೆ ಸುಮಲತಾ ಬುಧವಾರ ಮೃತ ಬಾಲಕಿ ನಿವಾಸಕ್ಕೆ ಭೇಟಿ ನೀಡಿದ್ದರು. ಕುಟುಂಬಕ್ಕೆ ಸಾಂತ್ವನ ಹೇಳಿದ ಕೆ.ಗೋಪಾಲಯ್ಯ, ಸಂಸದೆ ಸುಮಲತಾ ಅವರು, ಸಿಎಂ ಪರಿಹಾರದಿಂದ ನೀಡಲಾಗಿದ್ದ 10 ಲಕ್ಷ ರೂಪಾಯಿ ಚೆಕ್ಅನ್ನು ಹಸ್ತಾಂತರ ಮಾಡಿದರು.
ಕುಂಭಮೇಳದಲ್ಲಿ ಮೃತ ಬಾಲಕಿ ಕುಟುಂಬಕ್ಕೆ ಸಿಎಂ 10 ಲಕ್ಷ ಪರಿಹಾರ ಘೋಷಿಸಿದ್ದರು.ಈ ವೇಳೆ ಶಾಸಕ ಅನ್ನದಾನಿ, ಜಿಲ್ಲಾಧಿಕಾರಿ ಅಶ್ವಥಿ ಸೇರಿದಂತೆ ಕೂಡ ಸ್ಥಳದಲ್ಲಿ ಹಾಜರಿದ್ದರು.
ಶಿಕ್ಷಣ ಇಲಾಖೆ ಹೈ ಅಲರ್ಟ್:
ಟ್ಯೂಷನ್ ಹೋಗಿದ್ದ ಬಾಲಕಿಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ನಂತರ ಇದೀಗ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಶಿಕ್ಷಣ ಇಲಾಖೆ ಫುಲ್ ಅಲರ್ಟ್ ಆಗಿದೆ. ಅತ್ಯಾಚಾರ ಘಟನೆಯಿಂದ ಪೋಷಕರ ವಲಯದಲ್ಲಿ ಸದ್ಯ ಆತಂಕ ಮನೆ ಮಾಡಿದೆ. ಹೀಗಾಗಿ ಶಿಕ್ಷಣ ಇಲಾಖೆ ಅಲರ್ಟ್ ಆಗಿದ್ದು, ಅನುಮತಿ ಪಡೆಯದೆ ಟ್ಯೂಷನ್ ಸೆಂಟರ್‌ಗಳನ್ನು ನಡೆಸಿದ್ರೆ ಎಫ್‌ಐಆರ್ ದಾಖಲು ಮಾಡಲಾಗುತ್ತದೆ. ಅಲ್ಲದೇ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಿಕ್ಷಕರು ಟ್ಯೂಷನ್ ಮಾಡಿದರೆ ಶಿಸ್ತುಕ್ರಮ ತೆಗೆದುಕೊಳ್ಳುವುದಾಗಿಯೂ ಸಹ ಆದೇಶ ಹೊರಡಿಸಲಾಗಿದೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ