ವಿದೇಶಗಳಿಂದ ದೇಣಿಗೆ ಸಂಗ್ರಹಿಸುವ ವೇಳೆ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ರಾಜೀವ್ ಗಾಂಧಿ ಫೌಂಡೇಶನ್ ( Rajiv Ghandi Foundation )ಸಂಸ್ಥೆಗೆ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಅಡಿಯಲ್ಲಿ ನೀಡಿದ್ದ ಲೈಸೆನ್ಸ್ ( License ) ಅನ್ನು ಕೇಂದ್ರ ಗೃಹ ಇಲಾಖೆಯು ರದ್ದುಪಡಿಸಿದೆ.
ಕಾಂಗ್ರೆಸ್ ( Congress ) ಪಕ್ಷವನ್ನು ಮುನ್ನಡೆಸುವ ಪ್ರಭಾವಿ ಮನೆತನವಾಗಿರುವ ಗಾಂಧಿ ಕುಟುಂಬದೊಂದಿಗೆ ಈ ಪ್ರತಿಷ್ಠಾನವು ನಿಕಟ ಸಂಬಂಧ ಹೊಂದಿದೆ. ಜುಲೈ 2020ರಲ್ಲಿ ಕೇಂದ್ರ ಗೃಹ ಇಲಾಖೆಯು ರಾಜೀವ್ ಗಾಂಧಿ ಪ್ರತಿಷ್ಠಾನದ ಕಾರ್ಯನಿರ್ವಹಣೆ ಕುರಿತು ಪರಿಶೀಲಿಸಲು ಸಮಿತಿಯೊಂದನ್ನು ರಚಿಸಿತ್ತು..ಅ25 ರಂದು ಗೋಚರಿಸುವ ಸೂರ್ಯ ಗ್ರಹಣದ ಬಗ್ಗೆ ಭೌತ ವಿಜ್ಞಾನಿ ಭಟ್ ಬಿಚ್ಚಿಟ್ಟ ಒಂದಷ್ಟು ಮಾಹಿತಿ
ಈ ಸಮಿತಿಯ ವರದಿಯನ್ನು ಆಧರಿಸಿ ಪ್ರತಿಷ್ಠಾನಕ್ಕೆ ನೀಡಿದ್ದ ಲೈಸೆನ್ಸ್ ರದ್ದುಪಡಿಸುವ ನಿರ್ಧಾರ ತೆಗೆದುಕೊಂಡಿದೆ. ಲೈಸೆನ್ಸ್ ರದ್ದತಿ ಕುರಿತ ಮಾಹಿತಿಯನ್ನು ರಾಜೀವ್ ಗಾಂಧಿ ಪ್ರತಿಷ್ಠಾನದ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಕಳುಹಿಸಿಕೊಡಲಾಗಿದೆ.
ಕಾಂಗ್ರೆಸ್ನ ಮಾಜಿ ಅಧ್ಯಕ್ಷ ಸೋನಿಯಾ ಗಾಂಧಿ ( Sonia Ghandi ) ಅವರು ರಾಜೀವ್ ಗಾಂಧಿ ಪ್ರತಿಷ್ಠಾನದ ಅಧ್ಯಕ್ಷರಾಗಿರುವ ಈ ಟ್ರಸ್ಟ್ನ ವಿಶ್ವಸ್ಥರಾಗಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಮತ್ತು ಸಂಸದರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಇದ್ದಾರೆ.
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
- ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
- ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ