December 22, 2024

Newsnap Kannada

The World at your finger tips!

WhatsApp Image 2022 11 09 at 10.27.36 AM

ಸುಪ್ರಿಂಕೋರ್ಟ್‌ನ 50ನೇ CJ ಆಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾ ಡಿ.ವೈ.ಚಂದ್ರಚೂಡ್

Spread the love

ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್ ಬುಧವಾರ ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಿದರು.ನೇಪಾಳದಲ್ಲಿ ಭೂಕಂಪ- 6 ಸಾವು: ದೆಹಲಿಯಲ್ಲೂ ಭೂಮಿ ಗಡಗಡ

ನಿವೃತ್ತ ನ್ಯಾಯಮೂರ್ತಿ ಎನ್.ವಿ ರಮಣನಿವೃತ್ತಿಯ ನಂತರ 49ನೇ ಸಿಜೆಐ ಆಗಿ ಅಧಿಕಾರ ಸ್ವೀಕರಿಸಿದ್ದ ಯು.ಯು ಲಲಿತ್ ಮಂಗಳವಾರ (ನವೆಂಬರ್ 8) ತಮ್ಮ ಕರ್ತವ್ಯ ಮುಕ್ತಾಗೊಳಿಸಿದರು. ಈ ಹಿಂದೆಯೇ ಚಂದ್ರಚೂಡ್ ಅವರ ಹೆಸರನ್ನು ಶಿಫಾರಸು ಮಾಡಲಾಗಿತ್ತು.

ಚಂದ್ರಚೂಡ್:

1959 ನವೆಂಬರ್ 11 ರಂದು ಜನಿಸಿದ ಡಿ.ವೈ ಚಂದ್ರಚೂಡ್ ಸುಪ್ರೀಂ ಕೋರ್ಟ್ ಮತ್ತು ಬಾಂಬೆ ಹೈಕೋರ್ಟ್ನಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡಿದ್ದರು. ನಂತರ ಬಾಂಬೆ ಹೈಕೋರ್ಟ್ ಅವರಗೆ 1998ರ ಜೂನ್‌ನಲ್ಲಿ ಹಿರಿಯ ವಕೀಲರಾಗಿ ಪದೋನ್ನತಿ ನೀಡಿತ್ತು. 2000 ದಲ್ಲಿ ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕವಾಗುವುದಕ್ಕೂ ಮೊದಲು 1998ರಿಂದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ಅವರು ಕೆಲಸ ಮಾಡಿದ್ದರು. 2013ರ ಅಕ್ಟೋಬರ್ 31ರಂದು ನ್ಯಾ. ಚಂದ್ರಚೂಡ್ ಅವರನ್ನು ಅಲಾಹಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲಾಗಿತ್ತು. 2016ರ ಮೇ 13ರಂದು ನ್ಯಾ. ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದರು.

Copyright © All rights reserved Newsnap | Newsever by AF themes.
error: Content is protected !!