ಎಫ್ಐಆರ್ ರದ್ದು ಕೋರಿ ಮುಂಬೈ ಹೈಕೋರ್ಟ್ ಅರ್ನಬ್ ಮೊರೆ

Team Newsnap
1 Min Read
Image source : Google / Picture by : twitter.com

ತಮ್ಮನ್ನು ಅಕ್ರಮವಾಗಿ ಬಂಧಿಸಲಾಗಿದೆ ಎಂದು ಆರೋಪಿಸಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಮುಂಬೈ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಮಹಾರಾಷ್ಟ್ರದ ಅಲಿಬೌಗ್ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸಬೇಕೆಂದು ಕೂಡ ಈ ಸಂದರ್ಭದಲ್ಲಿ ಕೋರಿದ್ದಾರೆ.

ನ್ಯಾಯಮೂರ್ತಿಗಳಾದ ಎಸ್ ಎಸ್ ಶಿಂಧೆ ಮತ್ತು ಎಂಎಸ್ ಕಾರ್ಣಿಕ್ ಅವರನ್ನೊಳಗೊಂಡ ವಿಭಾಗೀಯ ಪೀಠ ಇಂದು ಅಪರಾಹ್ನ ಅರ್ನಬ್ ಅವರ ಅರ್ಜಿ ವಿಚಾರಣೆ ನಡೆಸಲಿದೆ.

ಕೋರ್ಟ್ ಅವರಿಗೆ ನವೆಂಬರ್ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಅಲಿಬೌಗ್ ಜೈಲಿನ ಕೈದಿಗಳಿಗೆ ಕೋವಿಡ್-19 ಕೇಂದ್ರವಾಗಿ ಮೀಸಲಿಟ್ಟಿರುವ ಸ್ಥಳೀಯ ಶಾಲೆಯೊಂದರಲ್ಲಿ ಸದ್ಯ ಅರ್ನಬ್ ಗೋಸ್ವಾಮಿಯವರನ್ನು ಇರಿಸಲಾಗಿದೆ. 

ಗೋಸ್ವಾಮಿ ಪರ ವಕೀಲರು ಇಂದು ಹೈಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯಲ್ಲಿ, ಗೋಸ್ವಾಮಿ ಬಂಧನ ಅಕ್ರಮವಾಗಿದ್ದು ಕೇಸಿಗೆ ಸಂಬಂಧಿಸಿದಂತೆ ವಿಚಾರಣೆಗೆ ತುರ್ತು ತಡೆ ನೀಡಬೇಕು ಮತ್ತು ತಮ್ಮ ಕಕ್ಷಿದಾರರನ್ನು ತಕ್ಷಣವೇ ಬಿಡುಗಡೆ ಮಾಡಬೇಕೆಂದು ಕೋರಿದ್ದಾರೆ. ಅಲ್ಲದೆ ಅರ್ನಬ್ ವಿರುದ್ಧ ದಾಖಲಿಸಿರುವ ಎಫ್ಐಆರ್ ನ್ನು ರದ್ದುಗೊಳಿಸಬೇಕೆಂದು ಕೂಡ ಕೋರಿದ್ದಾರೆ

Share This Article
Leave a comment