March 10, 2026

Newsnap Kannada

The World at your finger tips!

election , politics , JDS

ತುಮಕೂರು ನಗರ ಕ್ಷೇತ್ರ: ಗೋವಿಂದರಾಜುಗೆ JDS ಟಿಕೆಟ್ – HDK

Spread the love

ತುಮಕೂರು ನಗರ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಗೋವಿಂದರಾಜುಗೆ ಟಿಕೆಟ್ ಕೊಡಲು ತೀರ್ಮಾನಿಸಲಾಗಿದೆ. ಇದರ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ , 2 ಬಾರಿ ಕಡಿಮೆ ಅಂತರದಲ್ಲಿ ಗೋವಿಂದರಾಜು ಸೋತಿದ್ದರೂ ಅವರು ಒಳ್ಳೆಯ ಕೆಲಸ ಮಾಡಿಕೊಂಡು ಬಂದಿದ್ದಾರೆ.. ತುಮಕೂರು ನಗರ ಕ್ಷೇತ್ರದಲ್ಲಿ ಗೋವಿಂದರಾಜುಗೆ ಟಿಕೆಟ್ ಕೊಡಲು ತೀರ್ಮಾನಿಸಲಾಗಿದೆ. ಇದರ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದರು.

ಜೆಡಿಎಸ್ ನ ಅಭ್ಯರ್ಥಿಗಳ ಪಟ್ಟಿ ಸದ್ಯದಲ್ಲೇ ಪ್ರಕಟವಾಗಲಿದೆ. ಶುಭ ಗಳಿಗೆ ಶುಭ ಮೂಹರ್ತ ನೋಡಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ರಾಜಕೀಯದ ಸುನಾಮಿ ಅಲೆ, ಜೆಡಿಎಸ್ ಪರವಾಗಿದೆ. ಎಲ್ಲಾ ರಾಜಕೀಯ ಪಕ್ಷಗಳು ಕೊಚ್ಚಿಹೋಗುತ್ತದೆ ಎಂದು ಹೇಳಿದರು.

ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಫರ್ಧೆ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿ, ವರುಣಾದಲ್ಲೂ ಕೂಡಾ ನಮ್ಮ ಅಭ್ಯರ್ಥಿ ತಯಾರಾಗಿದ್ದಾರೆ. ವರುಣದಿಂದ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರ್ತಿವಿ ಎಂದರು.

error: Content is protected !!