ಅನುದಾನದ ವಿಷಯದಲ್ಲಿ ಚನ್ನಪಟ್ಟಣ ಕ್ಷೇತ್ರದ ಶಾಸಕ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಸಚಿವ, ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ನಡುವೆ ಅಭಿವೃದ್ಧಿ ಕ್ರೆಡಿಟ್ ವಾರ್ ಗೆ ಕೆಆರ್‌ಐಡಿಎಲ್ ಕಾರ್ಯಪಾಲಕ ಇಂಜಿನಿಯರ್ ವಿ ಶ್ರೀಧರ್ ತಲೆ ದಂಡವಾಗಿದೆ.
ಚನ್ನಪಟ್ಟಣ ತಾಲೂಕಿನ ರಸ್ತೆಗಳ ಅಭಿವೃದ್ಧಿಗಾಗಿ ಸಿಎಂ ಬಸವರಾಜ ಬೊಮ್ಮಯಿ ವಿಶೇಷ ಅನುದಾನದಡಿ 50 ಕೋಟಿ ರು ನೀಡಿದ್ದರು.ಬಿಜೆಪಿಗೆ ಗುಡ್ ಬೈ ಹೇಳಲು ಮಾಜಿ ಎಂಎಲ್ಸಿ ಸಂದೇಶ್ ನಾಗರಾಜ್ ನಿರ್ಧಾರ – ಕಾಂಗ್ರೆಸ್ ಸೇರ್ಪಡೆಗೆ ತಯಾರಿ
ಈ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದ ವತಿಯಿಂದ ಭೂಮಿಪೂಜೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಭೂಮಿಪೂಜೆ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಷಯದಲ್ಲಿ ಶಿಷ್ಟಾಚಾರ ಲೋಪ ಎಸಗಿದ ಆರೋಪದ ಮೇರೆಗೆ ಅಧಿಕಾರಿ ವಿ.ಶ್ರೀಧರ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಕ್ಷೇತ್ರದಲ್ಲಿ ಅಕ್ಟೋಬರ್ 2 ಅಭಿವೃದ್ಧಿ ಕಾಮಾಗಾರಿಗಳ ಶಂಕುಷ್ಥಾಪನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಕ್ಷೇತ್ರದ ನನ್ನನ್ನು ಕಡೆಗಣಿಸಿ ಶಿಷ್ಟಾಚಾರ ಉಲ್ಲಂಘನೆ ಮಾಡಿರುವ ಕಾರಣ ಹಕ್ಕು ಚ್ಯುತಿ ಆಗಿದೆ ಎಂದು ಸ್ಪೀಕರ್ ಅವರಿಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರು ದೂರು ಸಲ್ಲಿಸಿದ್ದರು.
ಕಾರ್ಯಪಾಲಕ ಎಂಜಿನಿಯರ್ ಅಮಾನತು ಎಚ್.ಡಿ.ಕುಮಾರಸ್ವಾಮಿಯವರು ದೂರು ನೀಡಿದ ಹಿನ್ನೆಲೆಯಲ್ಲಿ ರಾಮನಗರ ವಿಭಾಗದ ಪ್ರಭಾರಿ ಕಾರ್ಯಪಾಲಕ ಎಂಜಿನಿಯರ್ ವಿ.ಶ್ರೀಧರ್ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಅಮಾನತು ಆದೇಶ ಹೊರಡಿಸಿರುವ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ಜೆ.ಹಿರೇಮಠ್ ಅವರು, ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿದ್ದಾರೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ