ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಕೊಲ್ಲಲು ತಯಾರಾಗಿ ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ರಾಜ ಪಟೇರಿಯಾ ಅವರನ್ನು ಪನ್ನಾ ಜಿಲ್ಲಾ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಸಂವಿಧಾನವನ್ನು ಉಳಿಸಬೇಕಾದರೆ ಪಿಎಂ ಮೋದಿಯನ್ನು ಕೊಲ್ಲಬೇಕು ಎಂದು ರಾಜಾ ಪಟೇರಿಯಾ ಅವರು ಜನರ ಗುಂಪನ್ನು ಪ್ರೇರೇಪಿಸುತ್ತಿರುವ ವೀಡಿಯೊ ವೈರಲ್ ಆಗಿತ್ತು. ಪಟೇರಿಯಾ ಅವರ ಹೇಳಿಕೆಯ ವಿಡಿಯೋ ವೈರಲ್ ಆದ ಬಳಿಕ ಮಧ್ಯಪ್ರದೇಶ ಸರ್ಕಾರವು ಮಾಜಿ ರಾಜ್ಯ ಸಚಿವ ಪಟೇರಿಯಾ ವಿರುದ್ಧ ಪೊಲೀಸ್ ತನಿಖೆಗೆ ಆದೇಶಿಸಿದೆ.ರಾಮನಗರ: ಎಚ್‌ಡಿಕೆ – ಸಿಪಿವೈ ನಡುವೆ ಅಭಿವೃದ್ಧಿ ಕ್ರೆಡಿಟ್ ವಾರ್: ಇಇ ಅಮಾನತು
ಮೋದಿ ವಿರುದ್ಧ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಪನ್ನಾ ಜಿಲ್ಲೆಯ ಪವಾಯಿ ಪೊಲೀಸ್ ಠಾಣೆಯಲ್ಲಿ ಪಟೇರಿಯಾ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಅಡಿಯಲ್ಲಿ ಸೋಮವಾರ ಮಧ್ಯಾಹ್ನ ಎಫ್ಐಆರ್ ದಾಖಲಾಗಿತ್ತು.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್: ಗೃಹಸಚಿವ ಪರಮೇಶ್ವರ್ ದೃಢೀಕರಣ
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ